ರಂಗಕರ್ಮಿ ಬಿ.ಆರ್‌.ಅರಿಷಿಣಗೋಡಿ ಅಂತ್ಯಕ್ರಿಯೆ


Team Udayavani, Nov 2, 2018, 5:08 PM IST

2-november-22.gif

ಕಮತಗಿ: ಬುಧವಾರ ನಿಧನರಾದ ಶ್ರೀ ಹುಚ್ಚೇಶ್ವರ ನಾಟ್ಯ ಸಂಘದ ಸ್ಥಾಪಕರು, ಪ್ರತಿಷ್ಠಿತ ಗುಬ್ಬಿವೀರಣ್ಣ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಂಗಕರ್ಮಿ ಬಿ.ಆರ್‌.ಅರಿಷಿಣಗೋಡಿ ಅಂತ್ಯಕ್ರಿಯೆ ಬುಧವಾರ ನಡೆಯಿತು. ಮಲಪ್ರಭಾ ನದಿಗೆ ಹೊಂದಿಕೊಂಡಿರುವ ಅವರ ತೋಟದಲ್ಲಿ ಬಿ.ಆರ್‌. ಅರಿಷಿಣಗೋಡಿ ಅವರ ಪಾರ್ಥಿವ ಶರೀರಕ್ಕೆ ಮಗ ಶಶಿಧರ ಅರಿಷಿಣಗೋಡಿ ಅವರು ಅಗ್ನಿಸ್ಪರ್ಶ ಮಾಡಿದರು. ರೆಡ್ಡಿ ಸಮಾಜದ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿ ಅಂತ್ಯಕ್ರಿಯೆ ನಡೆಯಿತು.

ನಿವಾಸದಿಂದ ತೆರೆದ ವಾಹನದಲ್ಲಿ ಅರಿಷಿಣಗೋಡಿ ಅವರ ಪಾರ್ಥಿವ ಶರೀರವನ್ನು ಮೆರವಣಿಗೆ ಮಾಡಲಾಯಿತು. ಕಮತಗಿ ಶ್ರೀ ಹುಚ್ಚೇಶ್ವರ ಸ್ವಾಮೀಜಿ, ಹಿರೇಮಠದ ಶ್ರೀ ಶಿವುಕುಮಾರ ಸ್ವಾಮೀಜಿ, ಮಾಜಿ ಶಾಸಕ ಎಸ್‌.ಜಿ. ನಂಜಯ್ಯನಮಠ, ಪಪಂ ಅಧ್ಯಕ್ಷ ಎಂ.ಪಿ. ಅಂಗಡಿ, ನಗರಸಭೆ ಮಾಜಿ ಸದಸ್ಯ ರಂಗನಗೌಡ ದಂಡಣ್ಣವರ, ನಗರಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ಎಸ್‌.ಕೆ. ಯಡಹಳ್ಳಿ ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜನಪದ ಪರಿಷತ್ತು, ಮೇಘಮೈತ್ರಿ ಕನ್ನಡ ಮತ್ತು ಸಾಹಿತ್ಯ ವೇದಿಕೆ ಪದಾಧಿಕಾರಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ನುಡಿನಮನ: ಹಿರಿಯ ರಂಗಕರ್ಮಿ ಬಿ.ಆರ್‌. ಅರಿಷಿಣಗೋಡಿ ಅವರಿಗೆ ನುಡಿ ನಮನ ಸಲ್ಲಿಸಲಾಯಿತು. ಶ್ರದ್ಧಾಂಜಲಿ ಸಭೆಯಲ್ಲಿ ಮಾಜಿ ಸಚಿವೆ, ಶ್ರಿ‌ುಚ್ಚೇಶ್ವರ ನಾಟ್ಯ ಸಂಘದ ಕಲಾವಿದೆ ಉಮಾಶ್ರೀ ಮಾತನಾಡಿ, ನಾಟಕಗಳಲ್ಲಿ ಅಭಿನಯಿಸುತ್ತಿದ್ದಾಗ ಸದಾ ಕಾಳಜಿ ವಹಿಸುತ್ತಿದ್ದರು. ನಾನು ಮನೆ ನಿರ್ಮಿಸುವಾಗ ನನಗೆ 50 ಸಾವಿರ ರೂ. ನೀಡಿದ್ದಾರೆ. ನಂತರ ಅವರ ನಾಟಕಗಳಲ್ಲಿ ಅಭಿನಯಿಸಿ ಹಣ ವಾಪಸ್‌ ಕೊಟ್ಟಿದ್ದೆ. ದುಶ್ಚಟಗಳನ್ನು ಹೊಂದಿರುವ ಕಲಾವಿದರ ಬಗ್ಗೆ ಅರಿಷಿಣಗೋಡಿ ಅವರು ಬೇಸರ ವ್ಯಕ್ತಪಡಿಸುತ್ತಿದ್ದರು. ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕಲಾವಿದರಿಗೆ ವಿಶೇಷವಾದ ಸಲಹೆ, ಸಹಕಾರ ನೀಡುತ್ತಿದ್ದರು. ವೃತ್ತಿರಂಗಭೂಮಿ ಉಳಿವಿಗಾಗಿ ತಮ್ಮ ಬದುಕನ್ನು ಮೀಸಲಾಗಿಟ್ಟ ಮಹಾನ್‌ ರಂಗಕರ್ಮಿಯಾಗಿದ್ದಾರೆ ಎಂದು ಹೇಳಿದ್ದಾರೆ. ಕಲಾವಿದ, ಚಿತ್ರನಟ ರಾಜು ತಾಳಿಕೋಟಿ, ಕಮತಗಿ ಶ್ರೀ ಹುಚ್ಚೇಶ್ವರ ಸ್ವಾಮೀಜಿ, ಉಪ್ಪಿನಬೆಟಗೇರಿ ಮೂರುಸಾವಿರಮಠದ ವಿರೂಪಾಕ್ಷ ಸ್ವಾಮೀಜಿ, ಬಯಲಾಟ ಆಕಾಡೆಮಿ ಅಧ್ಯಕ್ಷ ಶ್ರೀರಾಮ ಇಟ್ಟಣ್ಣವರ, ಶೇಖಮಾಸ್ತರ, ಮಾಜಿ ಸದಸ್ಯ ಎಸ್‌.ಕೆ. ಕೊನೆಸಾಗರ, ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಸಿದ್ದಲಿಂಗಪ್ಪ ಬೀಳಗಿ, ಎಸ್‌.ಎಂ.ಖೇಡಗಿ, ಅಣ್ಣಪ್ಪ ಕಟಗೇರಿ ಮಾತನಾಡಿದರು.

ಅಮೀನಗಡ ಶಂಕರರಾಜೇಂದ್ರ ಸ್ವಾಮೀಜಿ, ಮುನವಳ್ಳಿ ಮುರುಘರಾಜೇಂದ್ರ ಸ್ವಾಮೀಜಿ, ಗುಳೇದಗುಡ್ಡ ಕಾಶೀನಾಥ ಸ್ವಾಮೀಜಿ, ಶಿವುಕುಮಾರ ಶಿವಾಚಾರ್ಯ ಸ್ವಾಮೀಜಿ, ಬಸವಣ್ಣೆಮ್ಮ ತಾಯಿ ಬಸರಕೋಡ, ಕಲಾವಿದರಾದ ಮಾಲತಿಶ್ರೀ ಮೈಸೂರ, ಮಮತಾ ಗುಡೂರ, ಪ್ರೇಮಾ ಗುಳೇದಗುಡ್ಡ, ಮಹಾಂತೇಶ ಗಜೇಂದ್ರಗಡ, ಚಿತ್ತರಗಿ ವಿಜಯಮಹಾಂತೇಶ್ವರ ನಾಟ್ಯ ಸಂಘದ ಮಾಲೀಕ ಬಸವರಾಜ ಚಿತ್ತರಗಿ, ಬಸವೇಶ್ವರ ವೀರಶೈವ ವಿದ್ಯಾವರ್ಧಕ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಮಾಜಿ ಶಾಸಕರಾದ ರಾಜಶೇಖರ ಶೀಲವಂತ, ಎಸ್‌.ಜಿ.ನಂಜಯ್ಯನಮಠ, ಬಸವಂತಪ್ಪ ಮೇಟಿ, ಜಿಪಂ ಸದಸ್ಯೆ ಬಾಯಕ್ಕ ಮೇಟಿ, ಬಿ.ಸಿ.ಅಂಟರತಾನಿ, ಕೆಎಂಎಫ್‌ ಅಧ್ಯಕ್ಷ ಸಂಗಣ್ಣ ಹಂಡಿ, ರವೀಂದ್ರ ಕಲಬುರ್ಗಿ, ಡಾ| ದೇವರಾಜ ಪಾಟೀಲ ಅಂತಿಮ ದರ್ಶನ ಪಡೆದರು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.