ಕಾರ್ಯಾರಂಭ ಮಾಡದ ತಾಲೂಕು ಕಚೇರಿ

Team Udayavani, Feb 6, 2019, 9:37 AM IST

6-february-15.jpg

ಪಟ್ಟಣವನ್ನು ತಾಲೂಕು ಕೇಂದ್ರವೆಂದು ಘೋಷಿಸಿ, ಕಚೇರಿಗಳ ಉದ್ಘಾಟನೆಯಾಗಿ ವರ್ಷ ಕಳೆದಿದೆ. ಆದರೆ, ಇದುವರೆಗೂ ಇಲ್ಲಿ ಪೂರ್ಣ ಪ್ರಮಾಣದಲ್ಲಿ ಕಚೇರಿ ಆರಂಭಗೊಂಡಿಲ್ಲ. ತಹಶೀಲ್ದಾರ್‌ ಕಚೇರಿ ಬಿಟ್ಟರೇ ಬೇರೆ ಇಲಾಖೆಗಳ ಆರಂಭದ ಬಗ್ಗೆ ಮಾಹಿತಿಯೇ ಸಿಗುತ್ತಿಲ್ಲ.

ಇನ್ನೂ ತೆರೆದಿಲ್ಲ ಹಲವು ಕಚೇರಿ: ತಾಲೂಕಿನ ನಾನಾ ಕಚೇರಿಗಳ ಆರಂಭಕ್ಕೆ ಕಚೇರಿ ಗುರುತಿಸಲಾಗಿದೆ. ಗುಳೇದಗುಡ್ಡದಲ್ಲಿ ತಹಶೀಲ್ದಾರ್‌ ಕಚೇರಿ ಆರಂಭಗೊಂಡು ಹಲವು ದಿನ ಕಳೆದರೂ ಇದುವರೆಗೂ ಶಿಕ್ಷಣ ಇಲಾಖೆ, ತಾಲೂಕು ಪಂಚಾಯತ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಇಲಾಖೆ ಕಚೇರಿ ಕಾರ್ಯಾರಂಭ ಮಾಡಿಲ್ಲ. ಇದರಿಂದ ನಾಗರಿಕರು ಗುಳೇದಗುಡ್ಡ ತಾಲೂಕಾಗಿದ್ದರೂ ಬಾದಾಮಿಗೆ ಅಲೆಯುವುದು ತಪ್ಪಿಲ್ಲ. ತಹಶೀಲ್ದಾರ್‌ ಕಚೇರಿ ಬಿಟ್ಟರೇ ಬೇರೆ ಇಲಾಖೆಗಳ ಕೆಲಸ ಎಲ್ಲಿ ಮಾಡಿಕೊಳ್ಳಬೇಕು ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ.

ಆಯಾ ಇಲಾಖೆಗಳ ಕೆಲಸ: ಕಂದಾಯ ಇಲಾಖೆಯಿಂದ ತಹಶೀಲ್ದಾರ್‌ ಕಚೇರಿ ಆರಂಭಿಸಿ, ಬಾದಾಮಿ ತಹಶೀಲ್ದಾರ್‌ ಅವರನ್ನು ಪ್ರಭಾರಿಯನ್ನಾಗಿ ನೇಮಿಸಲಾಗಿದೆ. ಇನ್ನೂ ಆಯಾ ಇಲಾಖೆಯವರು ಸರಕಾರದಿಂದ ಅನುಮತಿ ಪಡೆದುಕೊಂಡಿವೆ. ಹುದ್ದೆಗಳ ನೇಮಕ ಮಾಡಿ, ಅನುದಾನ ಕೊಟ್ಟು ಆಯಾ ಇಲಾಖೆಗಳ ತಾಲೂಕು ಕಚೇರಿ ಆರಂಭಿಸಬೇಕು ಎಂಬುದು ಉಪವಿಭಾಗಾಧಿಕಾರಿಗಳ ಮಾತು.

ಅಲೆದಾಟ ತಪ್ಪಿಲ್ಲ: ಗುಳೇದಗುಡ್ಡ ನೂತನ ತಾಲೂಕಿನಲ್ಲಿ ತಾಲೂಕಾ ಅಧಿಕಾರಿಗಳು ಮೂರು ದಿನಕ್ಕೊಮ್ಮೆ ಇಲ್ಲಿಗೆ ಬಂದು ಕೆಲಸ ಮಾಡಬೇಕು ಎಂದು ಸರಕಾರ ಹೇಳಿದರೂ ಆದೇಶಕ್ಕೆ ಮಾತ್ರ ಕಿವಿಗೊಡುತ್ತಿಲ್ಲ. ತಹಶೀಲ್ದಾರ್‌ ಕಚೇರಿ ಒಂದು ಕಡೆ, ಭೂಮಿ ಕೇಂದ್ರ ಇನ್ನೊಂದು ಕಡೆ ಇರುವುದರಿಂದ ನಿತ್ಯವು ಸುತ್ತಮುತ್ತಲಿನ ರೈತರು ಅಲೆಯುವಂತಾಗಿದೆ. ಜಾತಿ ಆದಾಯ ಸೇರಿದಂತೆ ಸರಕಾರಿ ಸೇವೆಗಳ ಪಡೆಯಲು ಅರ್ಜಿ ಸಲ್ಲಿಸಲು ಸರದಿ ಸಾಲಿನಲ್ಲಿ ನಿಲ್ಲುವ ಜನರಿಗೆ ನೆರಳಿನ ವ್ಯವಸ್ಥೆ ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯ.

ಪಟ್ಟಣ ತಾಲೂಕು ಕೇಂದ್ರವಾಗಿ ಆರಂಭಗೊಂಡರೂ ಇದುವರೆಗೂ ಸರಿಯಾಗಿ ಕಚೇರಿ ಆರಂಭಗೊಂಡಿಲ್ಲ. ಇದರಿಂದ ಸೌಲಭ್ಯ ಪಡೆದುಕೊಳ್ಳುವ ಕುರಿತು ಗೊಂದಲ ಸಾರ್ವಜನಿಕರಿಗೆ ಎದುರಾಗಿದೆ. ಶೀಘ್ರ ಗುಳೇದಗುಡ್ಡದಲ್ಲಿಯೇ ಎಲ್ಲ ತಾಲೂಕು ಕಚೇರಿ ಆರಂಭಗೊಂಡು ಗುಳೇದಗುಡ್ಡ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ಜನರ ಅಲೆದಾಟ ತಪ್ಪಿಸಬೇಕಾಗಿದೆ ಎಂಬುದು ಸಾರ್ವಜನಿಕರ ಆಗ್ರಹ.

ಗುಳೇದಗುಡ್ಡ ನೂತನ ತಾಲೂಕು ಕೇಂದ್ರವಾದರೂ ಅಧಿಕಾರಿಗಳು ಬೇರೆ ತಾಲೂಕಿನಲ್ಲಿ ಈ ತಾಲೂಕಾ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾರೆ. ಇನ್ನೂ ತಾಲೂಕಿಗೆ ಸ್ವತಂತ್ರ ಸಿಕ್ಕಿಲ್ಲವೇ. ಅಧಿಕಾರಿಗಳು ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಾರೆ. ಜಿಲ್ಲಾಧಿಕಾರಿಗಳು ಗಮನ ನೀಡುತ್ತಿಲ್ಲ.
•ಆಸಂಗೆಪ್ಪ ನಕ್ಕರಗುಂದಿ, ಜಿಪಂ ಸದಸ್ಯ ಹಂಸನೂರ

ಕಂದಾಯ ಇಲಾಖೆಯಿಂದ ತಹಶೀಲ್ದಾರ್‌ ಕಚೇರಿ ಆರಂಭಿಸಿ, ಬಾದಾಮಿ ತಹಶೀಲ್ದಾರ್‌ ಅವರನ್ನು ಡೆಪ್ಯುಟೆಶನ್‌ (ಪ್ರಭಾರಿ) ಮೇಲೆ ನೇಮಿಸಲಾಗಿದೆ. ಇನ್ನೂ ಆಯಾ ಇಲಾಖೆಯವರು ಸರಕಾರದಿಂದ ಅನುಮತಿ ಪಡೆದುಕೊಂಡು ಕಚೇರಿ ಆರಂಭಿಸಬೇಕಿದೆ.
•ಎಚ್.ಜಯಾ, ಉಪವಿಭಾಗಾಧಿಕಾರಿ, ಬಾಗಲಕೋಟೆ

ಮಲ್ಲಿಕಾರ್ಜುನ ಕಲಕೇರಿ

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.