ಡಿಸಿ-ಸಿಇಒ ಗ್ರಾಮ ವಾಸ್ತವ್ಯ

Team Udayavani, Feb 15, 2019, 10:23 AM IST

15-february-13.jpg

ಬಾಗಲಕೋಟೆ: ಜಿಲ್ಲಾಡಳಿತವನ್ನು ಗ್ರಾಮೀಣ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಹಾಗೂ ಜಿಪಂ ಸಿಇಒ ಗಂಗೂಬಾಯಿ ಮಾನಕರ ಗುರುವಾರ, ಜಮಖಂಡಿ ತಾಲೂಕಿನ ಆಲಬಾಳ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ನಡೆಸಿದರು.

ಗುರುವಾರ ರಾತ್ರಿ 7ರ ಹೊತ್ತಿಗೆ ಕಂದಾಯ ಇಲಾಖೆ ಮತ್ತು ಜಿ.ಪಂ. ಅಧೀನದ ವಿವಿಧ 28 ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ನಲ್ಲಿ ಬಾಗಲಕೋಟೆಯಿಂದ ಜಮಖಂಡಿ ತಾಲೂಕು
ಆಲಬಾಳ ಗ್ರಾಮಕ್ಕೆ ತೆರಳಿದರು.

ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಅವರೇ ಸ್ವತಃ ಬಸ್‌ನಲ್ಲಿ ಕುಳಿತ ಎಲ್ಲ ಅಧಿಕಾರಿಗಳ ಹಾಜರಾತಿ ಪಡೆದರು. ಬಳಿಕ ರಾತ್ರಿ ಆಲಬಾಳ ಗ್ರಾಮದಲ್ಲಿ ಗ್ರಾಮಸ್ಥರ ಸಭೆ ನಡೆಸಿ, ಕುಂದು-ಕೊರತೆ ಆಲಿಸಿದರು. ರಾತ್ರಿ ಇಡೀ ಗ್ರಾಮದಲ್ಲೇ ವಾಸ್ತವ್ಯ ಇದ್ದು, ರಾಜ್ಯ, ಕೇಂದ್ರ ಸರ್ಕಾರದ ಸೌಲಭ್ಯಗಳು ಜನರಿಗೆ ತಿಳಿಸುವ ಜತೆಗೆ, ಗ್ರಾಮದ ಸಮಸ್ಯೆ ಆಲಿಸಿದರು. 

ಶ್ರಮ-ಇಂಧನ ಉಳಿತಾಯ: ಡಿಸಿ ಮತ್ತು ಜಿಪಂ ಸಿಇಒ ಕೈಗೊಂಡ ಈ ಗ್ರಾಮ ವಾಸ್ತವ್ಯ ವಿಶೇಷತೆಯಿಂದ ಕೂಡಿತ್ತು. 28 ಜನ ಜಿಲ್ಲಾ ಮಟ್ಟದ ಅಧಿಕಾರಿಗಳು, ಅವರ ವಾಹನ, ಚಾಲಕರನ್ನು ಕರೆದುಕೊಂಡು ಹೋಗಿ, ಎಲ್ಲಾ ವಾಹನಗಳ ಇಂಧನ, ಚಾಲಕರ ಶ್ರಮ ವ್ಯಯಿಸುವ ಬದಲು, ಸಾರಿಗೆ ಸಂಸ್ಥೆಯ ಬಸ್‌ ಬಳಸಲಾಯಿತು. ಎಲ್ಲಾ ಅಧಿಕಾರಿಗಳೂ ಒಟ್ಟಿಗೆ ತೆರಳಿ, ಗ್ರಾಮ ವಾಸ್ತವ್ಯದ ಬಳಿಕ ಶುಕ್ರವಾರ ಒಟ್ಟಿಗೆ ಬಾಗಲಕೋಟೆಗೆ ಮರಳಲು ನಿರ್ಧರಿಸಿ, ಬಸ್‌ನಲ್ಲೇ ಸಂಚರಿಸಿ, ಬಸ್‌ನಲ್ಲೇ ಆಗಮಿಸಿದರು.

ಜಿಲ್ಲಾಡಳಿತದ ಸೇವೆಯನ್ನು ಗ್ರಾಮ ಮಟ್ಟದಲ್ಲಿ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಈ ಗ್ರಾಮ ವಾಸ್ತವ್ಯ ನಡೆಸಲಾಗುತ್ತಿದೆ. ಜನರ ಕುಂದು-ಕೊರತೆ ಆಲಿಸಿ, ಸ್ಥಳೀಯವಾಗಿ ಪರಿಹರಿಸಲು ಪ್ರಯತ್ನಿಸಲಾಗುವುದು. ಜಿಪಂ ಸಿಇಒ ವಿಶೇಷ
ಮುತುವರ್ಜಿ ವಹಿಸಿದ್ದು, ಜಿ.ಪಂ. ಮತ್ತು ಕಂದಾಯ ಇಲಾಖೆಯ ಸೌಲಭ್ಯ ಜನತೆಗೆ ಕಲ್ಪಿಸಲಾಗುವುದು.
 ಆರ್‌. ರಾಮಚಂದ್ರನ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.