ಬಾಯ್‌ ಮಾತು ತಾಯಿ ಮತ್ತು ತಾಯ್ನಾಡಿನ ಕಥೆ

Team Udayavani, Sep 14, 2018, 6:00 AM IST

missing-boy.jpg

“ಮಿಸ್ಸಿಂಗ್‌ ಬಾಯ್‌…’
– ಕಾಣೆಯಾದ ಹುಡುಗನೊಬ್ಬನ ಸತ್ಯಕಥೆ ಇದು. ಕನ್ನಡದಲ್ಲಿ ಅನೇಕ ನೈಜ ಘಟನೆ ಚಿತ್ರಗಳು ಬಂದಿವೆ. ಆ ಸಾಲಿಗೆ “ಮಿಸ್ಸಿಂಗ್‌ ಬಾಯ್‌’ ಕೂಡ ಸೇರ್ಪಡೆ. ಇದು ವಿದೇಶದಿಂದ ಸ್ವದೇಶಕ್ಕೆ ಅಪ್ಪ-ಅಮ್ಮನ ಹುಡುಕಿ ಬಂದವನ ಕಥೆ ಮತ್ತು ವ್ಯಥೆ. ಚಿತ್ರ ಈಗ ಬಿಡುಗಡೆಗೆ ರೆಡಿಯಾಗಿದ್ದು, ಆ ಕುರಿತು ಒಂದಷ್ಟು ಮಾಹಿತಿ ಹಂಚಿಕೊಳ್ಳಲು ನಿರ್ದೇಶಕ ರಘುರಾಮ್‌ ಚಿತ್ರತಂಡದೊಂದಿಗೆ ಮಾಧ್ಯಮ ಎದುರು ಬಂದಿದ್ದರು. 

ಮೊದಲು ಮಾತಿಗಿಳಿದ ನಿರ್ದೇಶಕ ರಘುರಾಮ್‌, “ಇದು ನೈಜ ಘಟನೆಯ ಸಿನಿಮಾ. 27 ವರ್ಷದ ಹಿಂದೆ ನಡೆದ ಘಟನೆಯನ್ನು ಪೊಲೀಸ್‌ ಅಧಿಕಾರಿಯೊಬ್ಬ ಹೇಗೆ ಪತ್ತೆ ಹಚ್ಚುತ್ತಾನೆ ಎಂಬ ಥ್ರಿಲ್ಲರ್‌ ಅಂಶದೊಂದಿಗೆ ಕಥೆ ಸಾಗಲಿದೆ. ಇದು ಉತ್ತರ ಕರ್ನಾಟಕದಲ್ಲಿ ನಡೆದ ನೈಜ ಘಟನೆ. ಕಥೆಯಲ್ಲಿ ಸುಮಾರು ಏಳು ವರ್ಷದ ಹುಡುಗನೊಬ್ಬ, ಆಟವಾಡುತ್ತಲೇ ರೈಲಿನಲ್ಲಿ ಪಯಣ ಬೆಳೆಸಿ ಕಾಣೆ­ಯಾಗು­ತ್ತಾನೆ. ಹಾಗೆ ಕಾಣೆಯಾ­ದವನು ದೂರದ ಸ್ವೀಡನ್‌ ದೇಶ ಸೇರಿಕೊಳ್ಳು­ತ್ತಾನೆ. ಇಪ್ಪತ್ತೇಳು ವರ್ಷದ ಬಳಿಕ ಸ್ವೀಡನ್‌ನಿಂದ ಬರುವ ಸುಮಾರು 35 ವರ್ಷದ ಯುವಕ, ತನ್ನ ಅಪ್ಪ-ಅಮ್ಮನನ್ನು ಹುಡುಕಿಕೊಡಿ ಎಂದು ಪೊಲೀಸ್‌ ಠಾಣೆಯ ಮೊರೆ ಹೋಗುತ್ತಾನೆ. ಕಳೆದು ಹೋಗಿದ್ದ ಹುಡುಗ ಪುನಃ ವಿದೇಶದಿಂದ ಸ್ವದೇಶಕ್ಕೆ ಬಂದು ಅಪ್ಪ-ಅಮ್ಮ ಬೇಕು ಅಂದಾಗ, ಪೊಲೀಸರು ಹೇಗೆಲ್ಲಾ ಅವನ ಹೆತ್ತವರನ್ನು ಹುಡುಕುತ್ತಾರೆ., ಎಷ್ಟೆಲ್ಲಾ ಸಮಸ್ಯೆ ಎದುರಿಸುತ್ತಾರೆ ಎಂಬುದು ಚಿತ್ರದ ಕಥೆ’ ಎಂದು ವಿವರ ಕೊಡುತ್ತಾರೆ ರಘುರಾಮ್‌.

ಇದು ಪೊಲೀಸ್‌ ಇಲಾಖೆಗೆ ಸವಾಲು ಎನಿಸುವಂತಹ ಪ್ರಕರಣ. ಪ್ರತಿಯೊಬ್ಬರ ಹೃದಯ ತಟ್ಟುವ ಕಥೆ ಇದಾಗಿರುವುದರಿಂದ ಎಲ್ಲವನ್ನೂ ಸೂಕ್ಷ್ಮವಾಗಿ, ಅಷ್ಟೇ ಭಾವುಕತೆ ಹೆಚ್ಚಿಸುವ ಪ್ರಯತ್ನ ಮಾಡಲಾಗಿದೆ. ಸ್ವೀಡನ್‌ಗೆ ಹೋಗಿ ನೆಲೆಸಿರುವ ಯುವಕ ಈಗ ಎಲ್ಲಿದ್ದಾನೆ, ಅವನ ಹೆತ್ತವರು ಹೇಗಿದ್ದಾರೆ ಎಂಬ ಕುರಿತ ಕಥೆ ಸಾಗಲಿದೆ ಎಂಬುದು ರಘುರಾಮ್‌ ಮಾತು.

ಚಿತ್ರದಲ್ಲಿ ಗುರುನಂದನ್‌ ನಾಯಕರಾದರೆ, ಕೇರಳ ಮೂಲದ ಅರ್ಚನಾ ಜಯಕೃಷ್ಣ ನಾಯಕಿ, ರಂಗಾಯಣ ರಘು ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಮಾಸ್ಟರ್‌ ಅಭಿಜಯ್‌ ಬಾಲನಟನಾಗಿ ನಟಿಸಿದ್ದಾನೆ. ಉಳಿದಂತೆ ಲಹರಿ ವೇಲು ಇತರರು ಇದ್ದಾರೆ. ಚಿತ್ರಕ್ಕೆ ಹರಿಕೃಷ್ಣ ಸಂಗೀತವಿದೆ. ಜೋನಿ ಹರ್ಷ ಸಂಕಲನ ಮಾಡಿದರೆ, ಜಗದೀಶ್‌ ವಾಲಿ ಛಾಯಗ್ರಹಣವಿದೆ.  ಕೊಲ್ಲ ಪ್ರವೀಣ್‌ ಚಿತ್ರದ ನಿರ್ಮಾಣ ಮಾಡಿದ್ದಾರೆ. ಈ ವೇಳೆ ಮಾಜಿ ಪೊಲೀಸ್‌ ಅಧಿಕಾರಿಗಳು ಸಹ ಚಿತ್ರದ ಕಥೆ ಬಗ್ಗೆ ಮೆಚ್ಚುಗೆ ಸೂಚಿಸಿ, ಶುಭಹಾರೈಸಿದ್ದು ವಿಶೇಷ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.