ಪುನೀತ್ – ರಶ್ಮಿಕಾ ಡ್ಯಾನ್ಸ್ ಡ್ಯಾನ್ಸ್!
Team Udayavani, Aug 24, 2017, 12:41 PM IST
ಪುನೀತ್ ಅಭಿನಯದ “ಅಂಜನಿಪುತ್ರ’ ತಂಡವು ಸ್ಕಾಟ್ಲ್ಯಾಂಡ್ನಿಂದ ವಾಪಸ್ಸಾಗಿದೆ. ಇಷ್ಟಕ್ಕೂ ಸ್ಕಾಟ್ಲ್ಯಾಂಡ್ಗೆ ಚಿತ್ರತಂಡ ಹೋಗಿದ್ದೇಕೆ ಎಂದರೆ, ಹಾಡುಗಳ ಚಿತ್ರೀಕರಣ ಎಂಬ ಉತ್ತರ ತಂಡದಿಂದ ಬರುತ್ತದೆ. ಕೆಲವು ದಿನಗಳ ಹಿಂದೆ ರಾಜಸ್ಥಾನದಲ್ಲಿ
ಚಿತ್ರೀಕರಣ ಮಾಡಿದ ಚಿತ್ರತಂಡವು, ಆ ನಂತರ ಸ್ಕಾಟ್ಲ್ಯಾಂಡ್ಗೆ ಪ್ರಯಾಣ ಬೆಳೆಸಿತ್ತು. ಅಲ್ಲಿ ಹರ್ಷ ನೃತ್ಯ ನಿರ್ದೇಶನದಲ್ಲಿ ಕೆಲವು ಹಾಡುಗಳನ್ನು ಚಿತ್ರೀಕರಣ ಮಾಡಿ ಚಿತ್ರತಂಡ ಬೆಂಗಳೂರಿಗೆ ವಾಪಸ್ಸಾಗಿದೆ. ಈ ಹಾಡಿನ ಚಿತ್ರೀಕರಣದಲ್ಲಿ
ಪುನೀತ್, ರಶ್ಮಿಕಾ ಮಂದಣ್ಣ ಮುಂತಾದವರು ಭಾಗವಹಿಸಿದ್ದರು.
“ಅಂಜನಿಪುತ್ರ’ ಚಿತ್ರದ ಚಿತ್ರೀಕರಣ ಈಗಾಗಲೇ ಶೇ 80ರಷ್ಟು ಮುಕ್ತಾಯವಾಗಿದ್ದು, ಇನ್ನೂ 25 ದಿನಗಳ ಚಿತ್ರೀಕರಣ ಬಾಕಿ ಇದೆಯಂತೆ. ಉಳಿದ ಭಾಗದ ಚಿತ್ರೀಕರಣವನ್ನು ಆದಷ್ಟು ಬೇಗ ಮುಗಿಸಿ, ಈ ವರ್ಷದ ಕೊನೆಯಲ್ಲಿ ಚಿತ್ರ ಬಿಡುಗಡೆ
ಮಾಡುವುದಕ್ಕೆ ಚಿತ್ರತಂಡ ಯೋಚಿಸುತ್ತಿದೆ.
ಅಂದಹಾಗೆ, ಇದು ತಮಿಳಿನ “ಪೂಜೈ’ ಚಿತ್ರದ ರೀಮೇಕ್ ಆಗಿದ್ದು, ಬಹುತೇಕ ಬದಲಾವಣೆ ಮಾಡಿಕೊಳ್ಳಲಾಗಿದೆಯಂತೆ. ರಮ್ಯಾ ಕೃಷ್ಣ ಪ್ರಮುಖ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆ. ಮಿಕ್ಕಂತೆ ಸಾಧು ಕೋಕಿಲ, ಚಿಕ್ಕಣ್ಣ, ಮುಕೇಶ್ ರಿಷಿ, ರವಿಶಂಕರ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ.
ಹರಿಪ್ರಿಯಾ ಚಿತ್ರದ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಎಂ.ಎನ್. ಕುಮಾರ್ ನಿರ್ಮಿಸಿದರೆ, ನೃತ್ಯ ನಿರ್ದೇಶಕ ಹರ್ಷ ಈ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ. ಚಿತ್ರಕ್ಕೆ ರವಿ ಬಸ್ರೂರು ಅವರ ಸಂಗೀತ ಮತ್ತು ಸ್ವಾಮಿ ಅವರ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು