ಪೈರಸಿ ಕಾಟ; ದರ್ಶನ್ ನಟನೆಯ ತಾರಕ್ ಸಿನಿಮಾ Facebook ನಲ್ಲಿ ಲೈವ್!
Team Udayavani, Sep 29, 2017, 12:45 PM IST
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ಸಿನಿಮಾ ತಾರಕ್ ಶುಕ್ರವಾರ ರಾಜ್ಯಾದ್ಯಂತ ತೆರೆಕಂಡ ಮೊದಲ ದಿನವೇ ಪೈರಸಿಗೆ ತುತ್ತಾಗಿದ್ದು, ಇದಕ್ಕೆ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ದರ್ಶನ್ ಅಭಿನಯದ ತಾರಕ್ ಸಿನಿಮಾ ಪ್ರದರ್ಶನವಾಗುತ್ತಿದ್ದ ವೇಳೆ ಫೇಸ್ ಬುಕ್ ಲೈವ್ ಮಾಡಿದ ಘಟನೆ ನಡೆದಿದೆ. ಅಷ್ಟೇ ಅಲ್ಲ ತಾರಕ್ ಸಿನಿಮಾದಲ್ಲಿ ದರ್ಶನ್ ರಗ್ಭಿ ಆಡುವ ಹಾಗೂ ಕೆಲವು ತುಣುಕಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.
ಪೈರಸಿ ಕಾಟಕ್ಕೆ ದರ್ಶನ್ ಅಭಿಮಾನಿಗಳು ಹಾಗೂ ತಾರಕ್ ಸಿನಿಮಾದ ನಿರ್ದೇಶಕ ಮಿಲನ ಖ್ಯಾತಿಯ ಪ್ರಕಾಶ್ ಕೂಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆಯಿಂದ ಸಾಮಾಜಿಕ ಜಾಲತಾಣದಲ್ಲಿ ತಾರಕ್ ಸಿನಿಮಾದ ಕೆಲವು ತುಣುಕುಗಳು ಹರಿದಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಆದರೆ ಯಾಕೆ ಹೀಗೆ ಮಾಡುತ್ತಿದ್ದಾರೋ ಗೊತ್ತಿಲ್ಲ, ನಮ್ಮ ಶ್ರಮಕ್ಕೆ ಬೆಲೆ ಕೊಡದೆ ಈ ರೀತಿ ಮಾಡುತ್ತಿರುವುದು ಸರಿಯಲ್ಲ ಎಂದು ಪ್ರಕಾಶ್ ಅವರು ಖಾಸಗಿ ಟಿವಿ ಚಾನೆಲ್ ಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಭರ್ಜರಿ ಸಿನಿಮಾದ ದೃಶ್ಯವನ್ನು ಲೈವ್ ಮಾಡಿರುವ ಘಟನೆ ನಡೆದಿತ್ತು. ಇದೀಗ ತಾರಕ್ ಸಿನಿಮಾ ಆ ಪಟ್ಟಿಗೆ ಸೇರಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ