ಹಾರರ್‌, ಥ್ರಿಲ್ಲರ್‌ನತ್ತ ಮಾಲಾಶ್ರೀ!

Team Udayavani, Nov 14, 2017, 6:44 PM IST

Malasri-(3).jpg

ಮಾಲಾಶ್ರೀ ನಟಿಸಿರುವ “ಉಪ್ಪು ಹುಳಿ ಖಾರ’ ಚಿತ್ರ ನವೆಂಬರ್‌ 24 ರಂದು ಬಿಡುಗಡೆಯಾಗುತ್ತಿದೆ. ಈ ನಡುವೆಯೇ ಮಾಲಾಶ್ರೀಯವರು ಎರಡು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಬಾರಿ ಆ್ಯಕ್ಷನ್‌ ಬದಲು ಹೊಸ ಜಾನರ್‌ನಲ್ಲಿ ಮಾಲಾಶ್ರೀಯವರು ಕಾಣಿಸಿಕೊಳ್ಳುತ್ತಿದ್ದು, ಥ್ರಿಲ್ಲರ್‌ ಹಾಗೂ ಹಾರರ್‌ ಜಾನರ್‌ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಹೊಸ ಗೆಟಪ್‌ನಲ್ಲಿ ದರ್ಶನ ಕೊಡಲಿದ್ದಾರೆ. ಈ ಎರಡು ಚಿತ್ರಗಳು ಹೊಸ ವರ್ಷಕ್ಕೆ ಅಂದರೆ ಜನವರಿಯಲ್ಲಿ ಆರಂಭವಾಗಲಿವೆ. 

ಅಂದಹಾಗೆ, ಈ ಚಿತ್ರಗಳಿಗಾಗಿ ಮಾಲಾಶ್ರೀ ತಮ್ಮ ಲುಕ್‌, ಗೆಟಪ್‌ ಎಲ್ಲವನ್ನು ಬದಲಿಸಿಕೊಳ್ಳಲಿದ್ದಾರೆ. ಏಕೆಂದರೆ, ಚಿತ್ರದ ಪಾತ್ರ ತುಂಬಾ ವಿಶೇಷವಾಗಿದ್ದು, ಅದಕ್ಕಾಗಿ ಈಗಾಗಲೇ ತಯಾರಿ ನಡೆಸುತ್ತಿದ್ದಾರಂತೆ. ಮತ್ತೂಂದೆಡೆ ಮಾಲಾಶ್ರೀಯವರು ಈಗ ಸಖತ್‌ ಸ್ಲಿಮ್‌ ಆಗಿದ್ದಾರೆ. 9 ಕೆಜಿಯಷ್ಟು ತೂಕ ಇಳಿಸಿಕೊಂಡಿರುವ ಅವರು ಸತತವಾಗಿ ವರ್ಕೌಟ್‌ನಲ್ಲಿ ತೊಡಗಿದ್ದಾರೆ. ದಿನಕ್ಕೆ ಮೂರು ಗಂಟೆಗಳ ಕಾಲ ವರ್ಕೌಟ್‌ ಮಾಡಿ ತೂಕ ಇಳಿಸಿಕೊಂಡಿರುವ ಮಾಲಾಶ್ರೀಯವರಿಗೆ ಮತ್ತಷ್ಟು ಕೆಜಿ ಇಳಿಸಿಕೊಳ್ಳುವ ಇರಾದೆ ಇದೆ. ಆ ನಿಟ್ಟಿನಲ್ಲಿ ಅವರ ವರ್ಕೌಟ್‌ ಸಾಗುತ್ತಿದೆ.

“ನಾನು “ಉಪ್ಪು ಹುಳಿ ಖಾರ’ ಚಿತ್ರದ ನಂತರ ಯಾವೊಂದು ಚಿತ್ರವನ್ನೂ ಒಪ್ಪಿಕೊಂಡಿರಲಿಲ್ಲ. ಬಹಳಷ್ಟು ಜನ ಚಿತ್ರ ಮಾಡೋಕೆ ಬಂದಿದ್ದರು. ಈ ಬಾರಿ ವಿಭಿನ್ನ ಚಿತ್ರವಷ್ಟೇ ಅಲ್ಲ, ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಬೇಕು ಅಂತಾಸೆ. “ದುರ್ಗಿ’ ಚಿತ್ರದಲ್ಲಿ ಮೊದಲ ಬಾರಿಗೆ ಬಾಯ್‌ಕಟ್‌ನಲ್ಲಿ ಕಾಣಿಸಿಕೊಂಡೆ. ಅಲ್ಲಿಂದ, ಇಲ್ಲಿಯವರೆಗೂ ಒಂದೇ ಹೇರ್‌ಸ್ಟೈಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಹಾಗಾಗಿ ಈ ಬಾರಿ ಗೆಟಪ್‌ ಸಹ ಬದಲಾಗಿದೆ. ಇನ್ನು ಈಗಾಗಲೇ 9 ಕೆಜಿಯಷ್ಟು ತೂಕ ಇಳಿಸಿಕೊಂಡಿದ್ದೇನೆ. ಹಾಗಂತ ಡಯಟಿಂಗ್‌ ಮಾಡಿಲ್ಲ.

ಜನವರಿಯಲ್ಲಿ ಚಿತ್ರ ಪ್ರಾರಂಭವಾಗುವಷ್ಟರಲ್ಲಿ ಇನ್ನೊಂದಿಷ್ಟು ತೂಕ ಕಳೆದುಕೊಂಡಿರುತ್ತೇನೆ’ ಎನ್ನುತ್ತಾರೆ ಮಾಲಾಶ್ರೀ. ಈ ಎರಡು ಚಿತ್ರಗಳ ಪೈಕಿ ಒಂದನ್ನು ರಾಮು ನಿರ್ಮಿಸಿದರೆ, ಇನ್ನೊಂದು ಚಿತ್ರವನ್ನು ಬೇರೆ ನಿರ್ಮಾಪಕರು ನಿರ್ಮಿಸುತ್ತಿದ್ದಾರೆ. ಚಿತ್ರದ ಹೆಸರೇನು, ನಿರ್ದೇಶಕರು ಯಾರು ಎಂಬ ವಿಷಯ ಕೇಳಿದರೆ, ಅವೆಲ್ಲಾ ರಾಮು ಅವರ ಬಾಯಿಂದಲೇ ಬರಲಿ ಎಂದು ತಪ್ಪಿಸಿಕೊಳ್ಳುತ್ತಾರೆ ಮಾಲಾಶ್ರೀ. ಅಂದ ಹಾಗೆ, ಈ ಚಿತ್ರ 2018ರ ಜನವರಿಯಲ್ಲಿ ಪ್ರಾರಂಭವಾಗಲಿದೆ.

ಟಾಪ್ ನ್ಯೂಸ್

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.