ಯಶ್‌ ಹುಟ್ಟುಹಬ್ಬಕ್ಕೆ ಕೆಜಿಎಫ್ ಟೀಸರ್‌

Team Udayavani, Nov 22, 2017, 10:53 AM IST

KGF-2.jpg

ಕನ್ನಡದಲ್ಲಿ ಈಗಲೇ ನಿರೀಕ್ಷೆ ಹುಟ್ಟಿಸಿರುವ ಯಶ್‌ ಅಭಿನಯದ “ಕೆಜಿಎಫ್’ ಚಿತ್ರವು ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಡಿಸೆಂಬರ್‌ ಕೊನೆಯ ವಾರದಲ್ಲಿ ಬಿಡುಗಡೆಯಾಗಬೇಕಿತ್ತು. ಚಿತ್ರದ ಚಿತ್ರೀಕರಣವೇ ಇನ್ನೂ ಮುಕ್ತಾಯವಾಗದ ಕಾರಣ, ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಸದ್ಯದ ಮಟ್ಟಿಗೆ ಹೇಳುವುದಾದರೆ, ಚಿತ್ರದ ಬಿಡುಗಡೆ ಏನಿದ್ದರೂ ಮುಂದಿನ ವರ್ಷ ಯುಗಾದಿ ಹಬ್ಬದ ಸಂದರ್ಭದಲ್ಲೇ.

ಅಲ್ಲಿಗೆ ಈ ವರ್ಷ ಯಶ್‌ ಅಭಿನಯದ ಯಾವೊಂದು ಚಿತ್ರ ಸಹ ಬಿಡುಗಡೆಯಾಗುತ್ತಿಲ್ಲ. ಈ ಮಧ್ಯೆ ಬಂದಿರುವ ಸುದ್ದಿಯ ಪ್ರಕಾರ, “ಕೆಜಿಎಫ್’ ಚಿತ್ರದ ಟೀಸರ್‌ ಯಶ್‌ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗಲಿರುವುದು. ಯಶ್‌ ಜನವರಿ ಎಂಟರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅಂದು “ಕೆಜಿಎಫ್’ ಚಿತ್ರದ ಮೊದಲ ಟೀಸರ್‌ ಬಿಡುಗಡೆಯಾಗಲಿದೆ.

ಇಲ್ಲಿಯವರೆಗೂ ಚಿತ್ರದ ಎರಡು ಪೋಸ್ಟರ್‌ಗಳು ಮಾತ್ರ ಬಿಡುಗಡೆಯಾಗಿದ್ದು, ಚಿತ್ರದ ಕುರಿತು ಯಾವುದೇ ರೀತಿಯ ಮಾಹಿತಿಗಳು ಸಿಕ್ಕಿಲ್ಲ. ಹಾಗಾಗಿ ಚಿತ್ರದಲ್ಲಿ ಏನಿರಬಹುದು ಎಂಬ ಕುತೂಹಲವು ಯಶ್‌ ಅಭಿಮಾನಿಗಳಿಗೆ ಸೇರಿದಂತೆ ಎಲ್ಲರಿಗೂ ಇದೆ. ಅದು ಯಶ್‌ ಅವರ ಹುಟ್ಟುಹಬ್ಬಕ್ಕೆ ತಣಿಯುವ ಸಾಧ್ಯತೆ ಇದೆ. ಅಂದಹಾಗೆ, ನಿರ್ದೇಶಕ ಪ್ರಶಾಂತ್‌ ನೀಲ್‌ ಈ ಚಿತ್ರವನ್ನು ನಾಲ್ಕು ಭಾಷೆಯಲ್ಲಿ ಮಾಡುತ್ತಿದ್ದಾರೆ.

ಅಂತೆಯೇ ಪೋಸ್ಟರ್‌ನಲ್ಲೂ ಕೂಡ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಶೀರ್ಷಿಕೆ ಹಾಕಿ ಬಿಡುಗಡೆ ಮಾಡಲಾಗಿದೆ. ಸದ್ಯಕ್ಕೆ ಇದು ಎರಡನೇ ಪೋಸ್ಟರ್‌ ರಿಲೀಸ್‌ ಆಗಿದ್ದು, ಸಿನಿಮಾದ ಚಿತ್ರೀಕರಣ ಜೋರಾಗಿಯೇ ಸಾಗುತ್ತಿದೆ. ಇನ್ನು, “ಕೆಜಿಎಫ್’ ಮೂಲಕ ಶ್ರೀನಿಧಿ ಶೆಟ್ಟಿ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.  

ಮೂಲತಃ ಮಂಗಳೂರಿನ ಬೆಡಗಿಯಾಗಿರುವ ಶ್ರೀನಿಧಿ ಶೆಟ್ಟಿ, 2015 ರಲ್ಲಿ ಮಣಪ್ಪುರಂ ಮಿಸ್‌ ಸೌತ್‌ ಇಂಡಿಯಾ ಬ್ಯೂಟಿ ಕಾಂಟೆಸ್ಟ್‌ ಆಗಿ ಭಾಗವಹಿಸಿ ಮಿಸ್‌ ಕರ್ನಾಟಕ ಮತ್ತು ಮಿಸ್‌ಬ್ಯೂಟಿಫ‌ುಲ್ ಸ್ಮೈಲ್ ಪ್ರಶಸ್ತಿ ಗೆದ್ದಿದ್ದರು. ಇನ್ನು, ವಿಜಯ್‌ ಕಿರಗಂದೂರು ಚಿತ್ರದ ನಿರ್ಮಾಪಕರು. ಈಗಾಗಲೇ ವಿಜಯ್‌ಕಿರಗಂದೂರು ಕೂಡ ಯಶಸ್ವಿ ನಿರ್ಮಾಪಕರೆನಿಸಿಕೊಂಡಿದ್ದಾರೆ.

ರವಿ ಬಸ್ರೂರ್‌ ಸಂಗೀತವಿದೆ. ಸ್ಥಿರಚಿತ್ರ ಛಾಯಾಗ್ರಾಹಕ ಭುವನ್‌ ಗೌಡ ಛಾಯಾಗ್ರಹಣ ಮಾಡುತ್ತಿದ್ದಾರೆ. ಉಳಿದಂತೆ, ರವಿ ಸಂತೇಹಕ್ಲು ಮತ್ತು ಸುರೇಶ್‌ ದೊಡ್ಡಮನಿ ಕಲಾ ನಿರ್ದೇಶನವಿದೆ. ರವಿವರ್ಮ ಸಾಹಸ ಸಂಯೋಜನೆ, ರಾಮರಾವ್‌ ಮತ್ತು ಕಾರ್ತಿಕ್‌ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.