ಇಂದು ಚಮಕ್ ಫಸ್ಟ್ ಟೀಸರ್ ರಿಲೀಸ್
Team Udayavani, Nov 27, 2017, 11:58 AM IST
ಸುನಿ ನಿರ್ದೇಶನದ, ಗಣೇಶ್ ನಾಯಕರಾಗಿ ನಟಿಸುತ್ತಿರುವ “ಚಮಕ್’ ಚಿತ್ರ ಚಿತ್ರೀಕರಣ ಮುಗಿಸಿದ್ದು, ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರತಂಡ ಚಿತ್ರದ ಟೀಸರ್ ಬಿಡುಗಡೆ ಮಾಡುತ್ತಿದೆ. ಹೌದು, “ಚಮಕ್’ ಚಿತ್ರದ ಟೀಸರ್ ಇಂದು ಬಿಡುಗಡೆಯಾಗುತ್ತಿದೆ. ಸಿನಿಮಾ ಶುರುವಾಗಿ ವರ್ಷವಾಗುತ್ತಾ ಬಂದರೂ ಚಿತ್ರತಂಡ ಟೀಸರ್ ಆಗಲೀ, ಟ್ರೇಲರ್ ಆಗಲೀ ಬಿಟ್ಟಿರಲಿಲ್ಲ. ಈಗ ಟೀಸರ್ ಬಿಡುಗಡೆ ಮಾಡುತ್ತಿದ್ದು, ಈ ಮೂಲಕ ಚಿತ್ರತಂಡ ಪ್ರಚಾರ ಶುರುವಿಟ್ಟುಕೊಂಡಿದೆ.
ಈ ಚಿತ್ರವನ್ನು ಟಿ.ಆರ್.ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ.
ಈ ಚಿತ್ರದಲ್ಲಿ ಗಣೇಶ್ ಡಾಕ್ಟರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಇದುವರೆಗೂ ಹೆಚ್ಚಾಗಿ ಲವ್ವರ್ ಬಾಯ್ ಪಾತ್ರಗಳಲ್ಲೇ ಕಾಣಿಸಿಕೊಂಡಿದ್ದ ಗಣೇಶ್, ಇದೇ ಮೊದಲ ಬಾರಿಗೆ ಡಾಕ್ಟರ್ ಪಾತ್ರದಲ್ಲಿ ಕಾಣಿಸಿಕೊಂಡಿರೋದು ವಿಶೇಷ.
ಇನ್ನು, “ಚಮಕ್’ನಲ್ಲಿ ಗಣೇಶ್ ಜೊತೆಗೆ ಮಗಳು ಚಾರಿತ್ರ್ಯ ಕೂಡಾ ನಟಿಸಿದ್ದಾರೆ. ಚಾರಿತ್ರ್ಯ ಇಲ್ಲೂ ಗಣೇಶ್ ಮಗಳಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಅಪ್ಪ-ಮಗಳ ಭಾವನಾತ್ಮಕ ಸನ್ನಿವೇಶಗಳಿದ್ದು, ಆ ದೃಶ್ಯವನ್ನು ಚಿತ್ರೀಕರಿಸಲಾಗಿದೆ. ಚಿತ್ರಕ್ಕೆ ಜ್ಯೂಡಾ ಸ್ಯಾಂಡಿ ಸಂಗೀತ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ