ಬ್ಯಾಕ್ ಟು ಬ್ಯಾಕ್ ರಶ್ಮಿಕಾ
Team Udayavani, Dec 14, 2017, 11:41 AM IST
ರಶ್ಮಿಕಾ ಮಂದಣ್ಣಗೆ ಡಿಸೆಂಬರ್ ತಿಂಗಳು ಬಹಳ ಲಕ್ಕಿ ಎಂದನಿಸುತ್ತಿದೆ. ಏಕೆಂದರೆ, ಕಳೆದ ವರ್ಷ ಡಿಸೆಂಬರ್ನಲ್ಲಿ ರಶ್ಮಿಕಾ ಅಭಿನಯದ ಮೊದಲ ಚಿತ್ರ “ಕಿರಿಕ್ ಪಾರ್ಟಿ’ ಬಿಡುಗಡೆಯಾಗಿತ್ತು. ಈ ವರ್ಷದ ಡಿಸೆಂಬರ್ನಲ್ಲಿ ರಶ್ಮಿಕಾ ಅಭಿನಯದ ಎರಡು ಕನ್ನಡ ಚಿತ್ರಗಳು ಬ್ಯಾಕ್ ಟು ಬ್ಯಾಕ್ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.
ಹೌದು, ರಶ್ಮಿಕಾ ಮಂದಣ್ಣ ಅಭಿನಯದ ಎರಡು ಚಿತ್ರಗಳು ಈ ತಿಂಗಳು ಬಿಡುಗಡೆಯಾಗುತ್ತಿದೆ. “ಕಿರಿಕ್ ಪಾರ್ಟಿ’ ಯಶಸ್ಸಿನ ನಂತರ ರಶ್ಮಿಕಾ ಕನ್ನಡದಲ್ಲಿ ಎರಡು ಚಿತ್ರಗಳನ್ನು ಒಪ್ಪಿಕೊಂಡಿದ್ದರು. ಪುನೀತ್ ರಾಜಕುಮಾರ್ ಅಭಿನಯದ “ಅಂಜನಿಪುತ್ರ’ ಒಂದಾದರೆ, ಗಣೇಶ್ ಅಭಿನಯದ “ಚಮಕ್’ ಇನ್ನೊಂದು ಚಿತ್ರವಾಗಿತ್ತು. ಈಗ ಆ ಎರಡೂ ಚಿತ್ರಗಳು ಒಂದರ ಹಿಂದೊಂದು ಬಿಡುಗಡೆಯಾಗುತ್ತಿದೆ.
ಈಗಾಗಲೇ “ಚಮಕ್’ ಚಿತ್ರದ ಸೆನ್ಸಾರ್ ಆಗಿದ್ದು, ಚಿತ್ರಕ್ಕೆ “ಯು/ಎ’ ಪ್ರಮಾಣ ಪತ್ರ ಸಿಕ್ಕಿತ್ತು. ಈಗ ಪ್ರಮಾಣ ಪತ್ರ ಸಿಕ್ಕಿರುವುದರಿಂದ, ಚಿತ್ರವನ್ನು ಡಿಸೆಂಬರ್ 29ರಂದು ಬಿಡುಗಡೆ ಮಾಡುವುದಕ್ಕೆ ನಿರ್ದೇಶಕ ಸುನಿ ಮತ್ತು ನಿರ್ಮಾಪಕ ಚಂದ್ರಶೇಖರ್ ತೀರ್ಮಾನಿಸಿದ್ದಾರೆ. ಅದಕ್ಕೂ ಒಂದು ವಾರದ ಮುನ್ನ, ಅಂದರೆ ಡಿಸೆಂಬರ್ 22ರಂದು “ಅಂಜನಿಪುತ್ರ’ ಚಿತ್ರವು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಮಧ್ಯೆ ರಶ್ಮಿಕಾ ತೆಲುಗಿನ ನಾಗಶೌರ್ಯ ಅಭಿನಯದ “ಚಲೋ’ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಚಿತ್ರದ ಟೀಸರ್ಗಳು ಇತ್ತೀಚೆಗಷ್ಟೇ ಬಿಡುಗಡೆಯಾಗಿವೆ. ಇನ್ನು ರಶ್ಮಿಕಾ, ಧ್ರುವ ಸರ್ಜಾ ಅಭಿನಯದ “ಪೊಗರು’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದು, ಸದ್ಯದಲ್ಲಿಯೇ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ