ಅಮೇರಿಕಾದಲ್ಲಿ “ಟಗರು’ ಪೊಗರು
Team Udayavani, Mar 8, 2018, 9:00 PM IST
ಶಿವರಾಜಕುಮಾರ್ ಅಭಿನಯದ “ಟಗರು’ ಚಿತ್ರವು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಮಧ್ಯೆ ಚಿತ್ರವನ್ನು ಸ್ಯಾಂಡಲ್ವುಡ್ ಗೆಳೆಯರ ಬಳಗದ ವತಿಯಿಂದ ಅಮೇರಿಕಾದಲ್ಲಿ ಬಿಡುಗಡೆ ಮಾಡಲಾಗುತ್ತಿದೆ.
ಹೌದು, ಇಂದಿನಿಂದ ಚಿತ್ರವು ಅಮೇರಿಕಾದ ವಿವಿಧ ನಗರಗಳಲ್ಲಿ ಬಿಡುಗಡೆಯಾಗುತ್ತಿದೆ. ಡೆಟ್ರಾಯ್, ಬೋಸ್ಟಾನ್, ಫಿಲಾಡೆಲ್ಫಿಯಾ, ಸ್ಯಾನ್ಡಿಯಾಗೋ, ಡೆನ್ವರ್ ಮುಂತಾದ ಶನಿವಾರ ಮತ್ತು ಭಾನುವಾರ (ಮಾರ್ಚ್ 10 ಮತ್ತು 11) ಪ್ರದರ್ಶನಗೊಂಡರೆ, ಅಟ್ಲಾಂಟ, ಚಿಕಾಗೋ, ದಲ್ಲಾಸ್, ವಾಷಿಂಗ್ಟನ್ ಡಿಸಿ ಮುಂತಾದ ಕಡೆ ಇಡೀ ವಾರ ಪ್ರದರ್ಶನಗೊಳ್ಳಲಿದೆ. “ಟಗರು’ ಚಿತ್ರವನ್ನು “ದುನಿಯಾ’ ಸೂರಿ ನಿರ್ದೇಶಿಸಿದ್ದಾರೆ.
ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆ ಅವರದ್ದೇ. ಮಹೇಂದ್ರ ಸಿಂಹ ಛಾಯಾಗ್ರಹಣ ಮಾಡಿದರೆ, “ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಖ್ಯಾತಿಯ ಚರಣ್ರಾಜ್ ಸಂಗೀತ ಸಂಯೋಜಿಸಿದ್ದಾರೆ. ಇನ್ನು ಚಿತ್ರದಲ್ಲಿ ಶಿವರಾಜಕುಮಾರ್ ಅವರ ಜೊತೆಗೆ ಮಾನ್ವಿತಾ, ಭಾವನಾ ಮೆನನ್, ದೇವರಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ವಿಲನ್ ಆಗಿ ಧನಂಜಯ್ ಮತ್ತು ವಸಿಷ್ಠ ಸಿಂಹ ಕಾಣಿಸಿಕೊಂಡಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’