“ಜಾನಿ ಜಾನಿ ಎಸ್ ಪಪ್ಪಾ’ ಹಾಡಿಗೆ ದನಿಯಾದ ಪುನೀತ್ ರಾಜಕುಮಾರ್
Team Udayavani, Mar 16, 2018, 4:15 PM IST
“ಜಾನಿ ಮೇರಾ ನಾಮ್’ ಚಿತ್ರದ ಮುಂದುವರಿದ ಭಾಗ ಎನ್ನಲಾಗಿರುವ “ಜಾನಿ ಜಾನಿ ಎಸ್ ಪಪ್ಪಾ’ ಚಿತ್ರದ ಟ್ರೈಲರ್ ಮತ್ತು ಹಾಡುಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಬ್ಯಾಂಡ್ ಬಜಾಯಿಸುತ್ತಿದ್ದರೆ, ಇತ್ತ ಚಿತ್ರತಂಡ ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ಮಾಡಿದೆ. ಚಿತ್ರದ ಟೈಟಲ್ ಸಾಂಗ್ಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಧ್ವನಿಯಾಗಿದ್ದಾರೆ.
‘ಅಂಜೋದಿಲ್ಲ… ಗಿಂಜೋದಿಲ್ಲ… ಮುಖಾಮುಖಿ ಮುಕಾಬುಲ್ಲಾ, ಅಡ್ರೆಸ್ ಇಲ್ಲಾ ಫೇಸ್ಬುಕ್ ಇಲ್ಲಾ ನನ್ನಷ್ಟು ಫೇಮಸ್ ಯಾರು ಇಲ್ಲ’… ಇದು ‘ಜಾನಿ ಜಾನಿ ಯೆಸ್ ಪಪ್ಪಾ’ ಚಿತ್ರದ ಟೈಟಲ್ ಸಾಂಗ್ನ ಮೊದಲ ಲೈನ್. ಯೂಟ್ಯೂಬ್ ನಲ್ಲಿ ರಿಲೀಸ್ ಆಗಿರುವ ಈ ಹಾಡನ್ನು ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ.
ಚಿತ್ರದ ನಾಯಕಿಯಾಗಿ ರಚಿತಾ ರಾಮ್ ಮತ್ತು ನಾಯಕ ದುನಿಯಾ ವಿಜಿ ಇದೇ ಮೊದಲ ಬಾರಿಗೆ ತೆರೆಯ ಮೇಲೆ ಜೋಡಿಯಾಗಿ ತೆರೆ ಹಂಚಿಕೊಂಡಿದ್ದು, ವಿಭಿನ್ನ ಗೆಟಪ್ನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.
“ಜಾನಿ ಮೇರಾ ನಾಮ್’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದ ಪ್ರೀತಂ ಗುಬ್ಬಿ ಅವರೇ “ಜಾನಿ ಜಾನಿ ಎಸ್ ಪಪ್ಪಾ’ ಚಿತ್ರವನ್ನೂ ನಿರ್ದೇಶಿಸಿದ್ದಾರೆ. ತಿಥಿ ಚಿತ್ರದ ಗಡ್ಡಪ್ಪ ವಿಶೇಷ ಪಾತ್ರದಲ್ಲಿ ನಟಿಸಿದ್ದು, ಸಾಧು ಕೋಕಿಲಾ, ರಂಗಾಯಣ ರಘು ಚಿತ್ರದಲ್ಲಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್ ಕನಸು: ಇಂದು ತೆರೆಗೆ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್ ಅಂತ್ಯಕ್ರಿಯೆ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!