ಸಿನಿಮಾದಲ್ಲೂ ರಾಜಕೀಯ

Team Udayavani, Apr 23, 2018, 11:52 AM IST

cinema.jpg

ಕರ್ನಾಟಕದಲ್ಲಿ ಚುನಾವಣೆಗಳು ಘೋಷಣೆಯಾಗಿ, ರಾಜಕೀಯ ಪಕ್ಷಗಳೆಲ್ಲಾ ಪ್ರಚಾರ ಮಾಡುವುದಕ್ಕೆ ಸಿನಿಮಾ ತಾರೆಯರ ಬೆನ್ನುಬಿದ್ದರೆ, ಈ ಕಡೆ ಸಿನಿಮಾದವರು ರಾಜಕೀಯವನ್ನು ತೋರಿಸುವುದಕ್ಕೆ ಮುಂದಾಗುತ್ತಿದ್ದಾರೆ. ಕನ್ನಡದಲ್ಲಿ ರಾಜಕೀಯ, ಚುನಾವಣೆಗಳಿಗೆ ಸಂಬಂಧಪಟ್ಟ ಸಿನಿಮಾಗಳು ಹೊಸದೇನಲ್ಲ. ಈಗಾಗಲೇ ಸಾಕಷ್ಟು ಅಂತಹ ಚಿತ್ರಗಳು ಬಂದಿವೆ. ಆದರೆ, ಈ ವಾರ ರಾಜಕೀಯ ಮತ್ತು ಚುನಾವಣೆಗೆ ಸಂಬಂಧಿಸಿದ ಮೂರು ಚಿತ್ರಗಳು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.

ಹೌದು, ಈ ಶುಕ್ರವಾರ (ಏಪ್ರಿಲ್‌ 27) ಮೂರು ರಾಜಕೀಯ ಕುರಿತಾದ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಟಿ.ಎಸ್‌. ನಾಗಾಭರಣರ “ಕಾನೂರಾಯಣ’, ನಂಜುಂಡೇಗೌಡರ “ಹೆಬ್ಬೆಟ್ಟ್ ರಾಮಕ್ಕ’ ಮತ್ತು ಅಶೋಕ್‌ ಕಶ್ಯಪ್‌ ಅವರ “ಧ್ವಜ’ ಚಿತ್ರಗಳು ಬಿಡುಗಡೆಯಾಗುತ್ತಿವೆ. “ಕಾನೂರಾಯಣ’ದಲ್ಲಿ ಪ್ರಮುಖವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಆರ್ಥಿಕ ಶಿಸ್ತಿನ ಬಗ್ಗೆ ಬೆಳಕು ಚೆಲ್ಲಲಾಗಿದೆ.

ಗ್ರಾಮೀಣ ಭಾಗದಲ್ಲಿ ಆರ್ಥಿಕ ಶಿಸ್ತು ಸಾಧಿಸುವುದು ಹೇಗೆ ಎಂಬ ವಿಷಯದ ಕುರಿತ ಈ ಚಿತ್ರದಲ್ಲಿ ಹಳ್ಳಿಗಳಲ್ಲಿನ ರಾಜಕೀಯ, ಚುನಾವಣೆ ಎಲ್ಲವೂ ಇದೆ. ಇನ್ನು “ಹೆಬ್ಬೆಟ್ಟ್ ರಾಮಕ್ಕ’ ಮಹಿಳೆ ಸುತ್ತ ಸಾಗುವ ಕಥೆ. ರಾಜ್ಯದಲ್ಲಿ ಮಹಿಳಾ ಮೀಸಲಾತಿ ಎಷ್ಟರಮಟ್ಟಿಗೆ ಜಾರಿಗೆ ಬಂದಿದೆ, ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಇರುವ ಮೀಸಲಾತಿ ಸರಿಯಾಗಿ ಸದ್ಬಳಕೆಯಾಗುತ್ತಿದೆಯಾ,

ಆನಕ್ಷರಸ್ಥ ಮಹಿಳೆಯರು ಚುನಾವಣೆಯಲ್ಲಿ ಗೆದ್ದು ಆ ಸ್ಥಾನವನ್ನು ಹೇಗೆ ನಿಭಾಯಿಸುತ್ತಾರೆ ಎಂಬ ವಿಷಯಗಳ ಕುರಿತಾಗಿ ಚಿತ್ರ ಸುತ್ತುತ್ತದೆ. ಇನ್ನು “ಧ್ವಜ’ ಚಿತ್ರವು ತಮಿಳಿನ “ಕೋಡಿ’ಯ ರೀಮೇಕ್‌ ಆಗಿದ್ದು, ರಾಜಕೀಯ ಪಕ್ಷದ ಒಬ್ಬ ಕಾರ್ಯಕರ್ತನ ಹತ್ಯೆಯ ಸುತ್ತ ಈ ಕಥೆಯನ್ನು ಹೆಣೆಯಲಾಗಿದೆ. ಹಾಗಾಗಿ ಈ ಮೂರೂ ಚಿತ್ರಗಳು ರಾಜಕೀಯ, ಚುನಾವಣೆಗಳ ಸುತ್ತುತ್ತವೆ ಎನ್ನುವುದು ವಿಶೇಷ.

“ಕಾನೂರಾಯಣ’ ಚಿತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಒಕ್ಕೂಟ ಟ್ರಸ್ಟ್‌ನ ವತಿಯಿಂದ ನಿರ್ಮಾಣವಾಗಿದೆ. ಆ ಟ್ರಸ್ಟ್‌ನ ವಿವಿಧ ಸಂಘಗಳಲ್ಲಿ ಸುಮಾರು 20 ಲಕ್ಷ ಸದಸ್ಯರಿದ್ದು, ಒಬ್ಬೊಬ್ಬ ಸದಸ್ಯ ತಲಾ 20 ರೂಪಾಯಿ ಹಾಕಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಒಂದು ಚಿತ್ರಕ್ಕೆ ಅಷ್ಟೊಂದು ಸಂಖ್ಯೆಯ ನಿರ್ಮಾಪಕರು ಇದೇ ಮೊದಲು.

ಈ ಚಿತ್ರದಲ್ಲಿ ಸ್ಕಂದ ಅಶೋಕ್‌, ಸೋನು ಗೌಡ, ದೊಡ್ಡಣ್ಣ, ಸುಂದರ್‌ ರಾಜ್‌, ಅಶ್ವತ್ಥ್ ನೀನಾಸಂ ಸೇರಿದಂತೆ ಹಲವರು ನಟಿಸಿದ್ದಾರೆ. “ಹೆಬ್ಬೆಟ್ಟ್ ರಾಮಕ್ಕ’ ಚಿತ್ರದಲ್ಲಿ ದೇವರಾಜ್‌, ತಾರಾ ಮುಂತಾದವರು ನಟಿಸಿದರೆ, “ಧ್ವಜ’ ಚಿತ್ರದಲ್ಲಿ ರವಿ, ಪ್ರಿಯಾಮಣಿ, ಟಿ.ಎನ್‌. ಸೀತಾರಾಂ, ದಿವ್ಯ ಉರುಡುಗ ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.