ರುಸ್ತುಂ ಪೋಸ್ಟರ್ ರಿಲೀಸ್
Team Udayavani, Apr 24, 2018, 2:33 PM IST
ಸಾಹಸ ನಿರ್ದೇಶಕ ರವಿವರ್ಮ ಅವರು ಶಿವರಾಜಕುಮಾರ್ ಅವರಿಗೆ “ರುಸ್ತುಂ’ ಚಿತ್ರ ನಿರ್ದೇಶಿಸುತ್ತಿರುವ ಸುದ್ದಿ ಗೊತ್ತೇ ಇದೆ. ರಾಜಕುಮಾರ್ ಅವರ ಬರ್ತ್ಡೇ ದಿನದಂದು ಚಿತ್ರಕ್ಕೆ ಮುಹೂರ್ತ ನೆರವೇರುತ್ತಿದ್ದು, ಅಂದೇ ಚಿತ್ರ ಪೋಸ್ಟರ್ ಕೂಡ ರಿಲೀಸ್ ಮಾಡಲು ತಯಾರಿ ನಡೆಸಿದ್ದಾರೆ ರವಿವರ್ಮ.
ಈ ಚಿತ್ರವನ್ನು ಜಯಣ್ಣ -ಭೋಗೇಂದ್ರ ನಿರ್ಮಿಸುತ್ತಿದ್ದಾರೆ. ರವಿವರ್ಮ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುವುದರೊಂದಿಗೆ ಸಾಹಸ ನಿರ್ದೇಶನವನ್ನು ಮಾಡುತ್ತಿದ್ದಾರೆ. ಮಹೇನ್ ಸಿಂಹ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದಾರೆ.
ದೀಪು ಎಸ್ ಕುಮಾರ್ ಸಂಕಲನ ಹಾಗೂ ಆರ್.ಕೆ.ನಾಗು (ಚೆನ್ನೈ) ಕಲಾ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಶಿವರಾಜಕುಮಾರ್, ಶ್ರದ್ಧಾ ಶ್ರೀನಾಥ್, ಮಯೂರಿ, ಅರ್ಜುನ್ ಗೌಡ, ಶತ್ರು ಮುಂತಾದವರಿದ್ದಾರೆ. ಬೆಂಗಳೂರು, ಮೈಸೂರು, ಪಾಟ್ನಾ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.