ವಾಸು ನಾನ್ ಪಕ್ಕಾ ಕಮರ್ಷಿಯಲ್ ರೆಡಿ
Team Udayavani, May 19, 2018, 10:59 AM IST
ಅನೀಶ್ ತೇಜಶ್ವರ್ ಅಭಿನಯದ “ವಾಸು ನಾನ್ ಪಕ್ಕಾ ಕಮರ್ಷಿಯಲ್’ ಚಿತ್ರದ ಮೊದಲ ಪ್ರತಿ ಸಿದ್ಧವಾಗಿದೆ. ವಿಂಕ್ ವಿಷಲ್ ಪೊ›ಡಕ್ಷನ್ಸ್ ಬ್ಯಾನರ್ನಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರವನ್ನು ಅಜಿತ್ ವಾಸನ್ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ದಿಲೀಪ್ ಚಕ್ರವರ್ತಿ ಛಾಯಾಗ್ರಹಣವಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
ಶ್ರೀಕಾಂತ್ ಸಂಕಲನ ಮಾಡಿದ್ದಾರೆ. ಚಿತ್ರದಲ್ಲಿ ಅನೀಶ್ ತೇಜೇಶ್ವರ್ಗೆ ನಿಶ್ವಿಕಾ ನಾಯ್ಡು ನಾಯಕಿಯಾಗಿದ್ದಾರೆ. ಉಳಿದಂತೆ ಚಿತ್ರದಲ್ಲಿ ಅವಿನಾಶ್, ಮಂಜುನಾಥ ಹೆಗಡೆ, ಅರುಣ ಬಾಲರಾಜ್, ಗಿರೀಶ್, ದೀಪಕ್ ಶೆಟ್ಟಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿತ್ತು. ಅನೀಶ್ ನಟನೆ ಜೊತೆಗೆ ನಿರ್ಮಾಣವನ್ನೂ ಮಾಡಿದ್ದಾರೆ.