ಆಟೋಗೆ ಆಟೋಗ್ರಾಫ್


Team Udayavani, Jun 10, 2018, 11:01 AM IST

darshan.jpg

ಆಟೋ ಚಾಲಕರಿಗೂ ಕನ್ನಡ ಚಿತ್ರರಂಗಕ್ಕೂ ಒಂದು ಅವಿನಾಭಾವ ಸಂಬಂದವಿದೆ. ಕನ್ನಡ ಸಿನಿಮಾಗಳನ್ನು ಹೆಚ್ಚು ಪ್ರೀತಿಸುವವರಲ್ಲಿ ಆಟೋ ಚಾಲಕರ ಸಂಖ್ಯೆ ಹೆಚ್ಚಿದೆ ಎಂದರೆ ತಪ್ಪಲ್ಲ. ಇವತ್ತಿಗೂ ಅನೇಕ ನಟರನ್ನು ಆರಾಧಿಸುತ್ತಾ, ಜನಮಾನಸದಲ್ಲಿ ನೆನಪಿನಲ್ಲಿರುವಂತೆ ಮಾಡುವುದು ಆಟೋದವರು. ಅದೇ ಕಾರಣದಿಂದ ಬಹುತೇಕ ಆಟೋಗಳ ಹಿಂದೆ ಯಾವುದಾದರೂ ಒಬ್ಬ ಹೀರೋನಾ ಫೋಟೋ, ಆತನ ಬಿರುದು ಅಥವಾ ಸಿನಿಮಾ ಡೈಲಾಗ್‌ ಇದ್ದೇ ಇರುತ್ತದೆ.

ದರ್ಶನ್‌ ಅವರನ್ನು ಪ್ರೀತಿಸುವವ ಆಟೋದವರ ಸಂಖ್ಯೆಯೇನೂ ಕಡಿಮೆಯಿಲ್ಲ. ದರ್ಶನ್‌ ಸಿನಿಮಾಗಳಿಗೆ ಫ‌ಸ್ಟ್‌ ಡೇ ಫ‌ಸ್ಟ್‌ ಶೋ ನೋಡುವ, ಜೈಕಾರ ಹಾಕುವ ಆಟೋ ಚಾಲಕರ ಸಂಖ್ಯೆ ದೊಡ್ಡದಿದೆ. ಅದೇ ತರಹ ತಮ್ಮ ಆಟೋ ಹಿಂದೆ ದರ್ಶನ್‌ ಫೋಟೋ ಹಾಕಿ, “ಚಾಲೆಂಜಿಂಗ್‌ ಸ್ಟಾರ್‌’, “ಬಾಕ್ಸ್‌ ಆಫೀಸ್‌ ಸುಲ್ತಾನ್‌’, “ದಾಸ’, “ಚಕ್ರವರ್ತಿ’ … ಹೀಗೆ ಬರೆಸಿಕೊಂಡು ಅಭಿಮಾನ ಮೆರೆಯುತ್ತಿದ್ದಾರೆ.

ಈಗ “ಆಟೋ’ ಅಭಿಮಾನಿಗಳು ಒಂದು ಹೆಜ್ಜೆ ಮುಂದೆ ಹೋಗಿ, ನೇರವಾಗಿ ದರ್ಶನ್‌ ಅವರಿಂದಲೇ ತಮ್ಮ ಆಟೋಗೆ ಆಟೋಗ್ರಾಪ್‌ ಹಾಕಿಸಿಕೊಳ್ಳುತ್ತಿದ್ದಾರೆ. ಅದೇ ಕಾರಣದಿಂದ ದರ್ಶನ್‌ ಅವರ ರಾಜರಾಜೇಶ್ವರಿ ನಗರದ ಮನೆ ಮುಂದೆ ಆಟೋಗಳ ಸಂಖ್ಯೆ ಹೆಚ್ಚುತ್ತಿದೆ. ತಮ್ಮ ನೆಚ್ಚಿನ ನಟನನ್ನು ಭೇಟಿಯಾಗಿ ಅವರಿಂದ ನೇರವಾಗಿ ಆಟೋ ಹಿಂದೆ ಆಟೋಗ್ರಾಫ್ ಹಾಕಿಸಿಕೊಳ್ಳುತ್ತಿದ್ದಾರೆ. 

ದರ್ಶನ್‌ ಕೂಡಾ ತಮ್ಮ ಅಭಿಮಾನಿಗಳ ಪ್ರೀತಿಗೆ ಸ್ಪಂಧಿಸಿ ಮನೆ ಬಳಿ ಬಂದ ಆಟೋಗಳಿಗೆ ಆಟೋ “ನಿಮ್ಮ ದಾಸ ದರ್ಶನ್‌’ ಎಂದು ಆಟೋ ಹಿಂದೆ ಆಟೋಗ್ರಾಫ್ ಹಾಕುತ್ತಿದ್ದಾರೆ.  ಈ ಮೂಲಕ ದರ್ಶನ್‌ ಅಭಿಮಾನಿಗಳು ಖುಷಿಯಾಗಿದ್ದಾರೆ. ಇನ್ನು, ದರ್ಶನ್‌ ಅವರ “ಸಾರಥಿ’ ಚಿತ್ರದಲ್ಲಿನ ಆಟೋ ಕುರಿತಾದ “ಕೈ ಮುಗಿದು ಏರು ಇದು ಕನ್ನಡದ ತೇರು’ ಹಾಡು ಸಖತ್‌ ಹಿಟ್‌ ಆಗಿತ್ತು. ಆಟೋ ಚಾಲಕರು ಈ ಹಾಡಿಗೆ ಸ್ವಲ್ಪ ಹೆಚ್ಚೇ ಫಿದಾ ಆಗಿದ್ದರು. 

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.