ಬಿಡುಗಡೆ ಮುನ್ನ ಹೈಪ್‌ ಆದ ಹೈಪರ್‌!

Team Udayavani, Jun 25, 2018, 10:56 AM IST

hyper-2.jpg

ಯಾವುದೇ ಒಂದು ಸಿನಿಮಾ ಸಾಮಾಜಿಕ ತಾಣದಲ್ಲಿ ಸಿಕ್ಕಾಪಟ್ಟೆ ಹೈಪ್‌ ಆಗುತ್ತೆ ಅಂದರೆ, ಅದಕ್ಕೆ ಮುಖ್ಯ ವಾಗಿ ಚಿತ್ರದಲ್ಲಿರುವ ಗಟ್ಟಿತನ. ಈಗಾಗಲೇ 20 ಲಕ್ಷಕ್ಕೂ ಹೆಚ್ಚು ಹಿಟ್ಸ್‌ ಪಡೆದಿರುವ ಹೊಸಬರ ಚಿತ್ರವೊಂದು ಸದ್ಯಕ್ಕೆ ಸಾಮಾಜಿಕ ತಾಣದಲ್ಲಿ ಸದ್ದು ಮಾಡುತ್ತಿದೆ. ಬಿಡುಗಡೆಗೆ ಮುನ್ನವೇ ಹೈಪ್‌ ಆದ ಚಿತ್ರದ ಹೆಸರು “ಹೈಪರ್‌’. ಬೆರಳೆಣಿಕೆ ಕಲಾವಿದರನ್ನು ಹೊರತುಪಡಿಸಿದರೆ. ಇದು ಬಹುತೇಕ ಹೊಸಬರ ಚಿತ್ರ.

ಈ ಚಿತ್ರದ ಟ್ರೈಲರ್‌ ಮತ್ತು ಹಾಡುಗಳಿಗೆ ಎಲ್ಲೆಡೆಯಿಂದ ಒಳ್ಳೆಯ ಮೆಚ್ಚುಗೆ ಸಿಕ್ಕಿದೆ. ಇತ್ತೀಚೆಗಷ್ಟೇ ಚಿತ್ರತಂಡ ಟ್ರೈಲರ್‌ ಒಂದನ್ನು ಬಿಡುಗಡೆ ಮಾಡಿತ್ತು. ಆ ಟ್ರೈಲರ್‌ ವೀಕ್ಷಿಸಿದ ಮಂದಿಯ ಸಂಖ್ಯೆ ಬರೋಬ್ಬರಿ 20 ಲಕ್ಷ ನೋಟವನ್ನು ಮೀರಿದೆ. ಸಹಜವಾಗಿಯೇ ಚಿತ್ರತಂಡಕ್ಕೆ ಈ ಬೆಳವಣಿಗೆ ಖುಷಿ ಕೊಟ್ಟಿದೆ. ಅಂದಹಾಗೆ, ಅರ್ಜುನ್‌ ಆರ್ಯ ಚಿತ್ರದ ನಾಯಕ. ಇವರಿಗೆ ಶೀಲಾ ನಾಯಕಿ. ಗಣೇಶ್‌ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಎಂ.ಕಾರ್ತಿಕ್‌ ಈ ಚಿತ್ರದ ನಿರ್ಮಾಪಕರು. “ಎಮ್‌ ಬಿಗ್‌ ಪಿಕ್ಚರ್’ ಬ್ಯಾನರ್‌ನಲ್ಲಿ ಚಿತ್ರ ತಯಾರಾಗಿದೆ. ಡಿ.ಇಮಾನ್‌ ಸಂಗೀತ ನೀಡಿದ್ದಾರೆ. ವಿಶೇಷವೆಂದರೆ, ನಾಲ್ವರು ನಿರ್ದೇಶಕರು ಈ ಚಿತ್ರದ ಹಾಡುಗಳಿಗೆ ಗೀತೆ ರಚಿಸಿದ್ದಾರೆ.  “ಭರ್ಜರಿ’ ಚೇತನ್‌ಕುಮಾರ್‌, ಎ.ಪಿ.ಅರ್ಜುನ್‌, ಗೌಸ್‌ಪೀರ್‌ ಮತ್ತು “ರ್‍ಯಾಂಬೋ’ ನಿರ್ದೇಶಕ ಅನಿಲ್‌ ಅವರು ಗೀತೆ ರಚಿಸಿದ್ದಾರೆ. ವಿಜಯಪ್ರಕಾಶ್‌, ವೈಕೂಮ್‌ ವಿಜಯಲಕ್ಷ್ಮೀ, ಅನುರಾಧಭಟ, ಚೇತನ್‌, ಮಾಲತಿ ಹಾಡಿದ್ದಾರೆ.

“ಹೈಪರ್‌’ ಪಕ್ಕಾ ಕಮರ್ಷಿಯಲ್‌ ಚಿತ್ರವಾಗಿದ್ದು, ಇಲ್ಲಿ ಪ್ರೀತಿ, ಆ್ಯಕ್ಷನ್‌ ಹಾಗೂ ಸೆಂಟಿಮೆಂಟ್‌ ಅಂಶಗಳು ತುಂಬಿಕೊಂಡಿವೆ. ಇಲ್ಲಿ ಇನ್ನೊಂದು ವಿಶೇಷತೆಯೂ ಇದೆ. ಅದು ರೈತರಿಗೆ ಸಂಬಂಧಿಸಿದ್ದು. ಯಾಕೆಂದರೆ, ಚಿತ್ರದ ನಾಯಕ ಅರ್ಜುನ್‌ ಆರ್ಯ ಅವರೇ ಚಿತ್ರಕ್ಕೆ ಕಥೆ ಬರೆದು, ಅವರಿಲ್ಲಿ ಪರಿಸರ ಪ್ರೇಮಿಯಾಗಿ ಕಾಣಿಸಿಕೊಂಡಿದ್ದಾರೆ. ಜಮ್ಮು, ಕಾಶ್ಮೀರದ ಸೂಕ್ಷ್ಮ ಪ್ರದೇಶದಲ್ಲಿ “ಹೈಪರ್‌’ ಚಿತ್ರೀಕರಣಗೊಂಡಿದೆ.

 ಚಿತ್ರಕ್ಕೆ ಥ್ರಿಲ್ಲರ್‌ ಮಂಜು, ಮಾಸ್‌ ಮಾದ, ವಿಕ್ರಮ್‌ ಮೋರ ಹಾಗೂ ನೂರ್‌ ಚಿತ್ರದ ಭರ್ಜರಿ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ. ಚಿತ್ರದಲ್ಲಿ ರಂಗಾಯಣ ರಘು, ಅಚ್ಯುತ್‌ಕುಮಾರ್‌, ಶೋಭರಾಜ್‌, ಬುಲೆಟ್‌ ಪ್ರಕಾಶ್‌, ಶ್ರೀನಿವಾಸ್‌ ಪ್ರಭು, ವೀಣಾ ಸುಂದರ್‌ ಸೇರಿದಂತೆ ಇತರೆ ಕಲಾವಿದರು ನಟಿಸಿದ್ದಾರೆ. ಜೂನ್‌ 29 ರಂದು ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.