ಮರುಭೂಮಿಯಲ್ಲಿ ರೋರಿಂಗ್ ಸ್ಟಾರ್
Team Udayavani, Jul 10, 2018, 5:20 PM IST
ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ “ಭರಾಟೆ’ ಚಿತ್ರದ ಫೋಟೋಶೂಟ್ ರಾಜಸ್ತಾನದ ಮರುಭೂಮಿಯ ಸುಡುಬಿಸಿಲಿನಲ್ಲಿ ಮಾಡಲಾಗುತ್ತಿದ್ದು, ಈ ಪ್ರದೇಶದಲ್ಲಿ ಫೋಟೋ ಶೂಟ್ ಮಾಡಲಾಗುತ್ತಿರುವ ಮೊದಲ ಕನ್ನಡ ಚಿತ್ರವಾಗಿದೆ. ಅಲ್ಲದೇ ಶ್ರೀಮುರಳಿಯವರಿಗೆ ಜೋಡಿಯಾಗಿ “ಕಿಸ್’ ಚಿತ್ರದಲ್ಲಿ ಅಭಿನಯಿಸುತ್ತಿರುವ ಶ್ರೀಲೀಲಾ ಅವರು ನಟಿಸುತ್ತಿದ್ದಾರೆ.
ಚಿತ್ರದ ಫೋಟೋ ಶೂಟ್ ಭುವನ್ ಗೌಡ ಮಾಡುತ್ತಿದ್ದು, ಚಿತ್ರ ತಂಡದ ಹಲವರು ಈಗಾಗಲೇ ರಾಜಸ್ತಾನದ ಮರುಭೂಮಿಗೆ ತೆರಳಿದ್ದಾರೆ. ಮತ್ತು ಚಿತ್ರದ ಫೋಟೋಗಳು ಸಿನಿಪ್ರಿಯರ ನಿರೀಕ್ಷೆಯನ್ನು ದುಪ್ಪಟ್ಟು ಮಾಡುತ್ತವೆ ಎಂಬುದು ಚಿತ್ರತಂಡದ ಮಾತು.
ಚಿತ್ರವನ್ನು ಬಹದ್ದೂರ್ ಮತ್ತು ಭರ್ಜರಿ ಚಿತ್ರಗಳ ಮೂಲಕ ಸ್ಯಾಂಡಲ್ವುಡ್ ನಲ್ಲಿ ಬಹುಬೇಡಿಕೆಯಲ್ಲಿರುವ ನಿರ್ದೇಶಕ ಚೇತನ್ ಕುಮಾರ್ ನಿರ್ದೇಶಿಸುತ್ತಿದ್ದು, ಸುಪ್ರೀತ್ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ರಾಜಸ್ತಾನದಲ್ಲಿ 20 ದಿನಗಳ ಶೂಟಿಂಗ್ಗೆ ಚಿತ್ರತಂಡ ಯೋಜನೆ ಹಾಕಿಕೊಂಡಿದ್ದು, ಇದರ ಪೂರ್ವಭಾವಿಯಾಗಿ ಹಲವು ತಂತ್ರಜ್ಞರು ರಾಜಸ್ತಾನವನ್ನು ಸೇರಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!