“ಕುರುಕ್ಷೇತ್ರ’ ಚಿತ್ರವೇ ಮೊದಲು ಬಿಡುಗಡೆಯಾಗಬೇಕು: ನಿಖೀಲ್‌

Team Udayavani, Aug 9, 2018, 7:46 PM IST

x-18.jpg

“ಸೀತಾರಾಮ ಕಲ್ಯಾಣ’ ಚಿತ್ರ ಬಿಡುಗಡೆಗೂ ಮುನ್ನ “ಕುರುಕ್ಷೇತ್ರ’ ಮಾಡಬಾರದು ಎಂದು ಹೇಳಿಲ್ಲ ಮತ್ತು “ಕುರುಕ್ಷೇತ್ರ’ ಚಿತ್ರದ ಬಿಡುಗಡೆ ತಡವಾಗುತ್ತಿರುವುದಕ್ಕೆ ತಾವು ಕಾರಣರಲ್ಲ ಎಂದು ನಿಖೀಲ್‌ ಕುಮಾರ್‌ ಹೇಳಿದ್ದಾರೆ.

ದರ್ಶನ್‌ ಅಭಿನಯದ 50ನೇ ಚಿತ್ರವಾದ “ಕುರುಕ್ಷೇತ್ರ’ದಲ್ಲಿ ನಿಖೀಲ್‌ ಅಭಿಮನ್ಯುವಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಬಹುತೇಕ ಕೆಲಸಗಳು ಮುಗಿದಿದೆ. ಆದರೆ, ನಿಖೀಲ್‌ ಡಬ್ಬಿಂಗ್‌ ಮಾತ್ರ ಇನ್ನೂ ಮುಗಿದಿಲ್ಲ. “ಸೀತಾರಾಮ ಕಲ್ಯಾಣ’ ಚಿತ್ರವು ಮೊದಲು ಬಿಡುಗಡೆಯಾಗಲೀ ಎಂಬ ಕಾರಣಕ್ಕೆ, ನಿಖೀಲ್‌ ಡಬ್ಬಿಂಗ್‌ ಮಾಡದೆ ಚಿತ್ರವನ್ನು ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಅಕ್ಟೋಬರ್‌ನಲ್ಲಿ “ಸೀತಾರಾಮ ಕಲ್ಯಾಣ’ ಬಿಡುಗಡೆಯಾದ ನಂತರ ನಿಖೀಲ್‌ ಕುಮಾರ್‌, “ಕುರುಕ್ಷೇತ್ರ’ ಚಿತ್ರದಲ್ಲಿನ ತಮ್ಮ ಕೆಲಸವನ್ನು ಮುಗಿಸಿಕೊಡುವುದಕ್ಕೆ ಯೋಚಿಸುತ್ತಿದ್ದಾರೆ ಎಂಬ ಸುದ್ದಿಗಳು ಕೇಳಿ ಬರುತ್ತಿದೆ.

“ಸೀತಾರಾಮ ಕಲ್ಯಾಣ’ ಚಿತ್ರದ ಪತ್ರಿಕಾಗೋಷ್ಠಿಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಅವೆಲ್ಲಾ ಸುಳ್ಳು ಸುದ್ದಿಗಳು. ಅವರ ಚಿತ್ರವೇ ಮೊದಲು ಬಿಡುಗಡೆಯಾಗಲಿ. ಅದಾದ ನಂತರ ನಾವು “ಸೀತಾರಾಮ ಕಲ್ಯಾಣ’ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ಚಿತ್ರಕ್ಕೆ ನಾನಿನ್ನೂ ಡಬ್ಬಿಂಗ್‌ ಮಾಡಿಲ್ಲ. “ಸೀತಾರಾಮ ಕಲ್ಯಾಣ’ ಚಿತ್ರದಲ್ಲಿ ತೊಡಗಿಸಿಕೊಂಡಿದ್ದರಿಂದ ಆಗಲಿಲ್ಲ. ಅವರು ಯಾವಾಗ ಕರೆದರೂ ಹೋಗಿ ಡಬ್ಬಿಂಗ್‌ ಮಾಡಿ ಬರುತ್ತೇನೆ. ಒಂದೆರೆಡು ದಿನಗಳ ಕೆಲಸ ಇದೆ ಅಷ್ಟೇ. ನನ್ನಿಂದ ಯಾವತ್ತೂ ನಿರ್ಮಾಪಕರಿಗೆ ತೊಂದರೆ ಆಗಿಲ್ಲ. ಅವರು ಯಾವಾಗ ಕರೆದರೂ ನಾನು ರೆಡಿ’ ಎನ್ನುತ್ತಾರೆ ನಿಖೀಲ್‌.

ಇನ್ನು ಚಿತ್ರದಲ್ಲಿ ನಿಖೀಲ್‌ ಅವರ ಪಾತ್ರ ಸ್ವಲ್ಪ ದೊಡ್ಡದಾಯಿತು ಎಂದು ದರ್ಶನ್‌ ಬೇಸರಿಸಿಕೊಂಡಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ, “ಅಭಿಮನ್ಯು ಮಾತ್ರ ಕಾಲ್ಪನಿಕ ಪಾತ್ರವಲ್ಲ. “ಕುರುಕ್ಷೇತ್ರ’ದಲ್ಲಿ ಅಭಿಮನ್ಯು ಪಾತ್ರ ಎಷ್ಟಿರಬೇಕೋ ಅಷ್ಟಿದೆ. ನಾನು ಸಾಕಷ್ಟು ಶ್ರಮ ಹಾಕಿ ಕೆಲಸ ಮಾಡಿದ್ದೇನೆ. ದ್ವಿತೀಯಾರ್ಧದಲ್ಲಿ 12 ನಿಮಿಷಗಳ ಒಂದು ದೊಡ್ಡ ಆ್ಯಕ್ಷನ್‌ ದೃಶ್ಯವಿದೆ. ಸೆಕೆಂಡ್‌ ಹಾಫ್ನಲ್ಲಿ ಆ್ಯಕ್ಷನ್‌ ಇಲ್ಲ ಎಂದು ಮುನಿರತ್ನ ಅವರೇ ಆ ಸಾಹಸ ದೃಶ್ಯವನ್ನು ಹಾಕಿದ್ದಾರೆ. ನಾನು 70ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣದಲ್ಲಿ ಭಾಗವಹಿಸಿದ್ದೇನೆ. ಇನ್ನು 22 ದಿನಗಳ ಕಾಲ ತರಬೇತಿ ಪಡೆದಿದ್ದೇನೆ’ ಎನ್ನುತ್ತಾರೆ ನಿಖೀಲ್‌.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.