ಅಭಿನಯ ಚಕ್ರವರ್ತಿಗೆ “ಪೈಲ್ವಾನ್’ ಟೀಸರ್ ಗಿಫ್ಟ್: Watch
Team Udayavani, Sep 2, 2018, 2:18 PM IST
ಆರಡಿ ಕಟೌಟ್ ಕಿಚ್ಚ ಸುದೀಪ 45ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ “ಪೈಲ್ವಾನ್’ ಚಿತ್ರತಂಡ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದು, ಈ ಮೂಲಕ ಅಭಿನಯ ಚಕ್ರವರ್ತಿಗೆ ಭರ್ಜರಿ ಗಿಫ್ಟ್ ನೀಡಿದೆ. ಇದೊಂದು ಬಾಕ್ಸಿಂಗ್ ಮತ್ತು ಕುಸ್ತಿ ಕುರಿತಾದ ಚಿತ್ರವಾಗಿದ್ದು, ಈ ಹಿಂದೆ ಚಿತ್ರದ ಮೊದಲ ಲುಕ್ ಸಖತ್ ವೈರಲ್ ಆಗಿತ್ತು.
ಅಲ್ಲದೇ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದ್ದು, ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ನಟಿಸುತ್ತಿದ್ದಾರೆ. ತ್ರದಲ್ಲಿ ಸುದೀಪ ಎದುರಿಗೆ ನಾಯಕಿಯಾಗಿ ಮುಂಬೈ ಮೂಲದ ಆಕಾಂಕ್ಷಾ ಸಿಂಗ್ ತೆರೆ ಹಂಚಿಕೊಳ್ಳುತ್ತಿದ್ದು, ಕಬೀರ್ ಸಿಂಗ್ ದುಹಾನ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅಲ್ಲದೇ ಆರ್.ಆರ್.ಆರ್. ಮೋಷನ್ ಪಿಕ್ಚರ್ ಬ್ಯಾನರ್ನಡಿ ಸ್ವಪ್ನ ಕೃಷ್ಣ ಮತ್ತು ಕೃಷ್ಣ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಇನ್ನು ನಿರ್ದೇಶನ ಮಾಡುವ ಜೊತೆಗೆ ಕಥೆ ಹಾಗೂ ಚಿತ್ರಕಥೆಯನ್ನು ಕೃಷ್ಣ ರಚಿಸಿದ್ದಾರೆ. ಇದೊಂದು ಬಾಕ್ಸಿಂಗ್ ಮತ್ತು ಕುಸ್ತಿ ಕುರಿತಾದ ಚಿತ್ರವಾಗಿದ್ದು, ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದರೆ, ಕರುಣಾಕರನ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಉಳಿದಂತೆ ಶರತ್ ಲೋಹಿತಾಶ್ವ, ಸಾಧುಕೋಕಿಲ, ಚಿಕ್ಕಣ್ಣ ಸೇರಿದಂತೆ ಅನೇಕರ ತಾರಾಬಳಗವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ