ಯೂಟ್ಯೂಬ್ ಟ್ರೆಂಡಿಂಗ್ನಲ್ಲಿ ನಂಬರ್ 1 “ಕೋಟಿಗೊಬ್ಬ-3′: Watch
Team Udayavani, Sep 2, 2018, 2:18 PM IST
ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ ಅವರ ಹುಟ್ಟುಹಬ್ಬದ ಪ್ರಯುಕ್ತ “ಕೋಟಿಗೊಬ್ಬ-3′ ಚಿತ್ರತಂಡ ಸೆಪ್ಟೆಂಬರ್ 2ರ ಮಧ್ಯರಾತ್ರಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದು, ಕಿಚ್ಚನಿಗೆ ಉಡುಗೊರೆ ನೀಡಿದೆ. ಅಂತಾರಾಷ್ಟ್ರೀಯ ಕಳ್ಳನ ಪಾತ್ರದಲ್ಲಿ ಸುದೀಪ್ ನಟಿಸಿದ್ದಾರೆ. ಅಲ್ಲದೇ ಯೂಟ್ಯೂಬ್ ಟ್ರೆಂಡಿಂಗ್ನಲ್ಲಿ ಟೀಸರ್ ನಂಬರ್ 1 ನೇ ಸ್ಥಾನದಲ್ಲಿದೆ. ಈ ಮೂಲಕ ಸುದೀಪ್ ಅಭಿಮಾನಿಗಳು ಸೇರಿದಂತೆ ಸಿನಿಪ್ರಿಯರು ಖುಷಿಯಾಗಿದ್ದಾರೆ.
ಸೂರಪ್ಪ ಬಾಬು “ಕೋಟಿಗೊಬ್ಬ-3′ ಚಿತ್ರವನ್ನು ನಿರ್ಮಿಸುತ್ತಿದ್ದು, ಶಿವಕಾರ್ತಿಕ್ ಈ ಚಿತ್ರದ ನಿರ್ದೇಶಕರು. ಈಗಾಗಲೇ ಸುಮಾರು 40 ದಿನಗಳ ಕಾಲ ಸರ್ಬಿಯಾದಲ್ಲಿ “ಕೋಟಿಗೊಬ್ಬ-3′ ಚಿತ್ರೀಕರಣವಾಗಿದೆ. ಈ ಚಿತ್ರದಲ್ಲಿ ಮಡ್ಡೋನ ಸೆಬಾಸ್ಟಿಯನ್ ನಾಯಕಿಯಾಗಿ ನಟಿಸುತ್ತಿದ್ದು, ಇದು ಅವರ ಮೊದಲ ಚಿತ್ರವಾಗಿದೆ. ಬಾಲಿವುಡ್ ನಟ ಅಫ್ತಾಬ್ ಶಿವದಾಸಾನಿ ನಟಿಸುತ್ತಿರುವುದು.
ಈ ಚಿತ್ರದಲ್ಲಿ ಇಂಟರ್ಪೋಲ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿರುವ ಅವರಿಗಿದು ಮೊದಲ ಕನ್ನಡ ಚಿತ್ರ. ಇನ್ನು ಚಿತ್ರದಲ್ಲಿ ಸುದೀಪ್, ಮಡ್ಡೋನ, ಅಫ್ತಾಬ್ ಜೊತೆಗೆ ನವಾಬ್ ಷಾ, ಶ್ರದ್ಧಾ, ರವಿಶಂಕರ್, ರಂಗಾಯಣ ರಘು ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ಶೇಖರ್ ಚಂದ್ರ ಅವರ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ