ಅದಿತಿ ಈಗ ಮಿನುಗು ನಕ್ಷತ್ರ!

Team Udayavani, Sep 4, 2018, 11:34 AM IST

aditi.jpg

ಕನ್ನಡದಲ್ಲೀಗ ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರಗಳ ಸಂಖ್ಯೆ ದಿನ ಕಳೆದಂತೆ ಹೆಚ್ಚುತ್ತಿವೆ. ಆ ಸಾಲಿಗೆ ಈಗ “ಆಪರೇಷನ್‌ ನಕ್ಷತ್ರ’ ಚಿತ್ರ ಹೊಸ ಸೇರ್ಪಡೆ. ಹೌದು, ಕಲಾವಿದರು ಹಾಗೂ ತಂತ್ರಜ್ಞರನ್ನು ಹೊರತುಪಡಿಸಿ ಹೊಸಬರೇ ಸೇರಿಕೊಂಡು “ಆಪರೇಷನ್‌’ ಮಾಡಲು ಹೊರಟಿದ್ದಾರೆ. ಈಗಾಗಲೇ ಸದ್ದಿಲ್ಲದೆ ಚಿತ್ರೀಕರಣ ಕೂಡ ಶುರುವಾಗಿದೆ.  ಚಿತ್ರದ ಶೀರ್ಷಿಕೆಯೇ ಹೇಳುವಂತೆ ಇದೊಂದು ನಾಯಕಿ ಪ್ರಧಾನ ಚಿತ್ರ.

ಹಾಗಂತ, ನಾಯಕಿಗಿದ್ದಷ್ಟೇ ಪ್ರಾಮುಖ್ಯತೆ ನಾಯಕನಿಗೂ ಇದೆ. ಅಂದಹಾಗೆ, ಈ ಚಿತ್ರಕ್ಕೆ ಯಜ್ಞಾ ಶೆಟ್ಟಿ ಮತ್ತು ಅದಿತಿ ಪ್ರಭುದೇವ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇಬ್ಬರಿಗೂ ಇಲ್ಲಿ ಸರಿಸಮಾನ ಪಾತ್ರವಿದೆ. ಇನ್ನು, “ಜಲ್ಸಾ’ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಿರಂಜನ್‌ ಒಡೆಯರ್‌ ಈ ಚಿತ್ರದ ಹೀರೋ. ಅವರೊಂದಿಗೆ ಲಿಖೀತ್‌ ಸೂರ್ಯ ಕೂಡ ನಾಯಕರಾಗಿ ನಟಿಸುತ್ತಿದ್ದಾರೆ. ಅಲ್ಲಿಗೆ  ಈ ಚಿತ್ರಕ್ಕೆ ಇಬ್ಬರು ನಾಯಕಿಯರು.

ಅವರಿಬ್ಬರಿಗೆ ನಾಯಕರು ಕಾಣಿಸಿಕೊಳ್ಳುತ್ತಿದ್ದಾರೆ. ಮಧುಸೂದನ್‌ ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಈ ಹಿಂದೆ “ಅಯೋಧ್ಯೆಪುರ’ ಚಿತ್ರ ನಿರ್ಮಿಸಿದ್ದ ಮಧುಸೂದನ್‌, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಫೈವ್‌ಸ್ಟಾರ್‌ ಬ್ಯಾನರ್‌ನಲ್ಲಿ ತಯಾರಾಗುತ್ತಿರುವ ಈ ಚಿತ್ರಕ್ಕೆ ಐವರು ಗೆಳೆಯರು ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.

ಸಾಫ್ಟ್ವೇರ್‌ ಕ್ಷೇತ್ರದಲ್ಲಿರುವ ನಂದಕುಮಾರ್‌, ಕಿಶೋರ್‌, ಅರವಿಂದ್‌ ಮೂರ್ತಿ, ರಾಧಾಕೃಷ್ಣ ನಿರ್ಮಾಪಕರು. ಇವರ ಜತೆ ನಿರ್ದೇಶಕ ಮಧುಸೂದನ್‌ ಕೂಡ ನಿರ್ಮಾಣಕ್ಕೆ ಸಾಥ್‌ ಕೊಟ್ಟಿದ್ದಾರೆ. ಇವರೆಲ್ಲರಿಗೂ ಇದು ಮೊದಲ ಅನುಭವ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಪೂರೈಸಿರುವ ಚಿತ್ರತಂಡ, ಎರಡನೇ ಹಂತದ ಚಿತ್ರೀಕರಣ ಶುರುಮಾಡಿದೆ. “ಆಪರೇಷನ್‌ ನಕ್ಷತ್ರ’ ಕುರಿತು ವಿವರ ಕೊಡುವ ನಿರ್ದೇಶಕ ಮಧುಸೂದನ್‌, “ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಕಥೆ.

ಇದೇ ಮೊದಲ ಸಲ ಯಜ್ಞಾ ಶೆಟ್ಟಿ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರೇ ಚಿತ್ರದ ಹೈಲೆಟ್‌. ಉಳಿದಂತೆ ಅದಿತಿ, ನಿರಂಜನ್‌ ಒಡೆಯರ್‌ ಮತ್ತು ಲಿಖೀತ್‌ ಸೂರ್ಯ ಈ ನಾಲ್ವರ ಸುತ್ತವೇ ಕಥೆ ಸಾಗುತ್ತದೆ. ಒಬ್ಬ ಮಿಲೇನಿಯರ್‌ ಆಕಸ್ಮಿಕವಾಗಿ ಸಾವಿಗೀಡಾದ ಬಳಿಕ ನಡೆಯುವ ವಿಚಿತ್ರ ಘಟನೆಗಳು ಚಿತ್ರದ ಕಥಾವಸ್ತು.

ಇಲ್ಲಿ ಮೋಸ, ದ್ವೇಷ, ಪ್ರೀತಿ, ಪ್ರಣಯ, ಆ್ಯಕ್ಷನ್‌, ಹಾಸ್ಯ ಇತ್ಯಾದಿ ಅಂಶಗಳು ತುಂಬಿಕೊಂಡಿವೆ’ ಎಂದು ಚಿತ್ರದ ಬಗ್ಗೆ ಮಾಹಿತಿ ಕೊಡುತ್ತಾರೆ ನಿರ್ದೇಶಕ ಮಧುಸೂದನ್‌. ಚಿತ್ರಕ್ಕೆ ವೀರ್‌ ಸಮರ್ಥ್ ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ. ಚಿತ್ರದ ಇನ್ನೊಂದು ವಿಶೇಷವೆಂದರೆ, ಇದೇ ಮೊದಲ ಬಾರಿಗೆ “ಆಪರೇಷನ್‌ ನಕ್ಷತ್ರ’ ಚಿತ್ರಕ್ಕೆ ಜೋರ್ಡಾನ್‌ ದೇಶದ ಲಾಮ ಜಕಾರಿಯ ಎಂಬ ಸಂಗೀತ ನಿರ್ದೇಶಕಿ ಚಿತ್ರದಲ್ಲಿರುವ ಎರಡು ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ.

ಲಂಡನ್‌ನಲ್ಲಿ ಆ ಹಾಡುಗಳ ಮಾಸ್ಟರಿಂಗ್‌ ನಡೆಯಲಿದೆ ಎಂಬುದು ಚಿತ್ರತಂಡದ ಹೇಳಿಕೆ. ಚಿತ್ರದಲ್ಲಿ ದೀಪಕ್‌ ರಾಜ್‌ಶೆಟ್ಟಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಉಳಿದಂತೆ ಶ್ರೀನಿವಾಸ ಪ್ರಭು, ಗೋವಿಂದೇಗೌಡ, ಗಣೇಶ್‌, ಅರವಿಂದ್‌ ಮೂರ್ತಿ ಇತರರು ನಟಿಸುತ್ತಿದ್ದಾರೆ. ಕಿಶೋರ್‌ ಸಂಭಾಷಣೆ ಬರೆದರೆ, “ಅಥರ್ವ’ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದ ಶಿವಸೀನ ಚಿತ್ರಕ್ಕೆ ಛಾಯಾಗ್ರಾಹಕರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.