ಅಂಜಲಿ ಕೇರ್‌ ಆಫ್ ಮನೋರಥ

Team Udayavani, Sep 6, 2018, 12:56 PM IST

57.jpg

ಸಾಫ್ಟ್ವೇರ್‌ ಕ್ಷೇತ್ರದಿಂದ ಸಿನಿಮಾರಂಗಕ್ಕೆ ಬಂದವರ ಸಂಖ್ಯೆಗೇನೂ ಕಮ್ಮಿಯಿಲ್ಲ. ಅಲ್ಲಿಂದ ಬಂದವರೀಗ ನಿರ್ದೇಶನ, ನಿರ್ಮಾಣ, ನಟನೆ ಹೀಗೆ ಹಲವು ವಿಭಾಗದಲ್ಲಿ ತೊಡಗಿಸಿಕೊಂಡಿದ್ದಾರೆ. ಆ ಸಾಲಿಗೆ ಮತ್ತೂಬ್ಬ ನಟಿ ಸೇರಿದ್ದಾರೆ. ಹೆಸರು ಅಂಜಲಿ. ಯಾರು ಈ ಅಂಜಲಿ ಅಂದರೆ, “ಮನೋರಥ’ ಚಿತ್ರ ತೋರಿಸಬೇಕು. ಈ ವಾರ ತೆರೆಕಾಣುತ್ತಿರುವ ಚಿತ್ರವಿದು. ಅಂಜಲಿ ಈ ಚಿತ್ರದ ಮೂಲಕ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಕ್ಕೂ ಮುನ್ನ, ಸುಮನ ಕಿತ್ತೂರ್‌ ನಿರ್ದೇಶನದ “ಕಿರಗೂರಿನ ಗಯ್ನಾಳಿಗಳು’ ಚಿತ್ರದಲ್ಲೊಂದು ಪಾತ್ರ ನಿರ್ವಹಿಸಿದ್ದರು. ಅದಾದ ಬಳಿಕ “ರನ್‌ ಆಂಟೋನಿ’ ಚಿತ್ರದಲ್ಲೂ ಕಾಣಿಸಿಕೊಂಡರು. ದಿನೇಶ್‌ ಬಾಬು ನಿರ್ದೇಶನದ “ನನಗಿಷ್ಟ’ ಚಿತ್ರದಲ್ಲಿ ಪಾತ್ರ ಮಾಡಿದ ಬಳಿಕ “ಮನೋರಥ’ ಚಿತ್ರ ಸಿಕ್ಕಿದೆ.

ಚಿತ್ರದ ಬಗ್ಗೆ ಹೇಳುವ ಅಂಜಲಿ, “”ಮನೋರಥ’ ಒಂದು ಸೈಕಲಾಜಿಕಲ್‌ ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರ. ಮನುಷ್ಯನ ಮನಸ್ಥಿತಿ ಮೇಲೆ ಸಾಗುವ ಚಿತ್ರವಿದು. ಮಾನಸಿಕ ದೌರ್ಬಲ್ಯ ಇರುವ ವ್ಯಕ್ತಿ ಮೇಲೆ ಒಂದಷ್ಟು ಘಟನೆಗಳು ನಡೆಯುತ್ತವೆ. ಒಂದು ಫೋಬಿಯಾ ಖಾಯಿಲೆ ಸುತ್ತ ನಡೆಯೋ ಕಥೆಯೇ ಚಿತ್ರದ ಜೀವಾಳ. ಇದೊಂದು ಪ್ರಯೋಗಾತ್ಮಕ ಚಿತ್ರ. ಇಲ್ಲಿ ಎರಡು ಶೇಡ್‌ ಪಾತ್ರಗಳಿವೆ. ಒಂದು ಡಾಕ್ಟರ್‌ ಪಾತ್ರ. ಅದು ಪಾಸಿಟಿವ್‌ ಆಗಿರುತ್ತೆ. ಇನ್ನೊಂದು ನೆಗೆಟಿವ್‌ ಪಾತ್ರ. ಅದನ್ನು ಚಿತ್ರಮಂದಿರದಲ್ಲೇ ನೋಡಬೇಕು ಎಂಬುದು ಅಂಜಲಿ ಮಾತು.

ಅಂಜಲಿ ಮೂರನೇ ತರಗತಿ ಓದುವಾಗಲೇ ಭರನಾಟ್ಯ ಕಲಿತವರು. ವಿದ್ವತ್‌ ಕೂಡ ಆಗಿದೆ. ಎಂಜಿನಿಯರಿಂಗ್‌ ಮುಗಿಸಿ, ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಂಜಲಿಗೆ, ಅದೇಕೋ ಸಾಫ್ಟ್ವೇರ್‌ ಕ್ಷೇತ್ರ ಬೇಡವಾಗಿ, ಸಿನಿಮಾ ಕಡೆ ವಾಲಿದ್ದಾರೆ. ಅದಕ್ಕೂ ಮುನ್ನ, ರಂಗಭೂಮಿಗೆ ಕಾಲಿಟ್ಟು, ಸಾತ್ವಿಕ ರಂಗಪಯಣ ತಂಡದಲ್ಲಿ ಹಲವು ನಾಟಕ ಪ್ರದರ್ಶನ ಮಾಡಿದ್ದಾರೆ. ಆ ಬಳಿಕ ಒಂದಷ್ಟು ಕಾರ್ಪೋರೇಟ್‌ ಇವೆಂಟ್‌ಗಳಿಗೆ ನಿರೂಪಣೆ ಮಾಡಿಕೊಂಡು, ಕಿರುತೆರೆಯಲ್ಲೂ ರಿಯಾಲಿಟಿ ಶೋ ನಡೆಸಿಕೊಟ್ಟಿದ್ದಾರೆ. ಎರಡು ವರ್ಷದ ಅನುಭವ ಪಡೆದ ಅಂಜಲಿಗೆ ಈಗ ಮೊದಲ ಸಲ ನಾಯಕಿ ಆಗುವ ಅವಕಾಶ ಸಿಕ್ಕಿದೆ. ಇದೊಂದು ಗುರುತಿಸಿಕೊಳ್ಳುವ ಚಿತ್ರವಾಗುತ್ತೆ ಎಂಬ ನಂಬಿಕೆ ಇಟ್ಟುಕೊಂಡಿದ್ದಾರೆ. ಈ ಚಿತ್ರಕ್ಕೆ ಪ್ರಸನ್ನಕುಮಾರ್‌ ನಿರ್ದೇಶಕರು. ರಾಜ್‌ಚರಣ್‌ ನಾಯಕರಾಗಿದ್ದಾರೆ. ಚಂದ್ರು ಓಬಯ್ಯ ಸಂಗೀತವಿದೆ. ಮುರಳಿ ಅವರ ಛಾಯಾಗ್ರಹಣವಿದೆ. ಸದ್ಯಕ್ಕೆ ಅಂಜಲಿ “ಸ್ವತ್ಛ ಕರ್ನಾಟಕ’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅದರೊಂದಿಗೆ ಇನ್ನೂ ಹೆಸರಿಡದ ಎರಡು ಚಿತ್ರ ಒಪ್ಪಿದ್ದಾರೆ.

ಟಾಪ್ ನ್ಯೂಸ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.