25 ದಿನ ಮುಗಿಸಿದ ಅಯೋಗ್ಯ


Team Udayavani, Sep 11, 2018, 11:29 AM IST

ayogya.jpg

ಸತೀಶ್‌ ನೀನಾಸಂ ಅಭಿನಯದ “ಅಯೋಗ್ಯ’ ಚಿತ್ರವು ಯಶಸ್ವಿಯಾಗಿ 25 ದಿನಗಳನ್ನು ಮುಗಿಸಿದೆ. 586 ಚಿತ್ರಮಂದಿರಗಳಲ್ಲಿ 25 ದಿನಗಳನ್ನು ಚಿತ್ರ ಪೂರೈಸಿದ್ದು, “ಎಲ್ಲೂ ಅಲ್ಲಾಡಿಲ್ಲ’ ಎಂದು ಖುಷಿಯಿಂದ ಹೇಳಿಕೊಳ್ಳುತ್ತಾರೆ ನಿರ್ದೇಶಕ ಮಹೇಶ್‌. ಈ 25 ದಿನಗಳು ಪೂರೈಸಿದ ಖುಷಿಯಲ್ಲಿ ಮಹೇಶ್‌, ಸತೀಶ್‌ ಮತ್ತು ನಿರ್ಮಾಪಕ ಟಿ.ಆರ್‌. ಚಂದ್ರಶೇಖರ್‌ ಅವರು ನರ್ತಕಿ ಚಿತ್ರಮಂದಿರಕ್ಕೆ ಭೇಟಿಕೊಟ್ಟಿದ್ದಾರೆ.

ಈ ಸಂದರ್ಭದಲ್ಲಿ ನೆರೆದಿದ್ದ ನೂರಾರು ಜನರ ಸಮ್ಮುಖದಲ್ಲಿ 25 ಕೆಜಿ ತೂಕದ ಕೇಕ್‌ ಕಟ್‌ ಮಾಡಲಾಗಿದೆ. ಚಿತ್ರದ ಇನ್ನೊಂದು ವಿಶೇಷವೆಂದರೆ, ತಮಿಳಿಗೆ ರೀಮೇಕ್‌ ಹಕ್ಕುಗಳು ಮಾರಾಟವಾಗಿದ್ದು. ಹೌದು, “ಅಯೋಗ್ಯ’ ಚಿತ್ರದ ರೀಮೇಕ್‌ ಹಕ್ಕುಗಳು 18 ಲಕ್ಷಕ್ಕೆ ಮಾರಾಟವಾಗಿದೆ. ತಮಿಳಿನ ದೊಡ್ಡ ಚಿತ್ರ ನಿರ್ಮಾಣ ಸಂಸ್ಥೆಯೊಂದು ಚಿತ್ರದ ರೀಮೇಕ್‌ ಹಕ್ಕುಗಳನ್ನು ಕೊಂಡಿದ್ದು, ಅದನ್ನು ತಮಿಳಿನಲ್ಲಿ ನಿರ್ಮಿಸುವುದಕ್ಕೆ ಸಜ್ಜಾಗಿದೆ.

ಇನ್ನು ಆ ಸಂಸ್ಥೆಯ ಬಳಿ ವಿಜಯ್‌ ಸೇತುಪತಿ ಅವರ ಡೇಟ್ಸ್‌ ಇದ್ದು, ಚಿತ್ರದಲ್ಲಿ ವಿಜಯ್‌ ಸೇತುಪತಿ ನಟಿಸುವ ಸಾಧ್ಯತೆ ಇದೆಯಂತೆ. ಮುರಳಿಗೆ ಚಿತ್ರ ಮಾಡುವ ಸಾಧ್ಯತೆ: ಎಲ್ಲಾ ಸರಿ, ಮಹೇಶ್‌ ಕುಮಾರ್‌ ಅವರ ಮುಂದಿನ ನಡೆಯೇನು ಎಂದು ಅವರಿಗೆ ಪ್ರಶ್ನೆ ಹಾಕಿದರೆ, ಸದ್ಯದಲ್ಲೇ ಮುಂದಿನ ಚಿತ್ರದ ಬಗ್ಗೆ ತೀರ್ಮಾನವಾಗಲಿದೆ ಎಂದು ಹೇಳುತ್ತಾರೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಧ್ರುವ ಸರ್ಜಾ ಅಭಿನಯದಲ್ಲಿ “ಮದಗಜ’ ಎಂಬ ಚಿತ್ರವನ್ನು ಮಹೇಶ್‌ ನಿರ್ದೇಶಿಸಬೇಕಿತ್ತು.

ಆದರೆ, “ಪೊಗರು’ ಚಿತ್ರದಲ್ಲಿ ಧ್ರುವ ತೊಡಗಿಸಿಕೊಂಡಿರುವದರಿಂದ ಮತ್ತು ಅದು ಮುಗಿಯುವುದಕ್ಕೆ ಇನ್ನಷ್ಟು ಸಮಯ ಬೇಕಾಗಿರುವುದರಿಂದ, ಧ್ರುವ ಸರ್ಜಾ ಅಭಿನಯದಲ್ಲಿ ಮಹೇಶ್‌ ನಿರ್ದೇಶಿಸಬೇಕಿದ್ದ ಚಿತ್ರ ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಆ ಸಮಯದಲ್ಲಿ ಮುರಳಿ ಅಭಿನಯದಲ್ಲಿ ಚಿತ್ರವನ್ನು ಮಹೇಶ್‌ ನಿರ್ದೇಶಿಸಲಿದ್ದಾರೆ ಎಂಬ ಮಾತುಗಳು ಗಾಂಧಿನಗರದಲ್ಲಿ ಕೇಳಿ ಬರುತ್ತಿವೆ.

ಟಾಪ್ ನ್ಯೂಸ್

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.