ಅಂಬಿ ವಯಸ್ಸಿಗೆ ಸಿಕ್ತು ಯು ಪ್ರಮಾಣ ಪತ್ರ

Team Udayavani, Sep 15, 2018, 11:17 AM IST

ambi.jpg

ಅಂಬರೀಶ್‌ ಅಭಿನಯದ “ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರಕ್ಕೆ “ಯು’ ಪ್ರಮಾಣ ಪತ್ರ ಸಿಕ್ಕಿದೆ. ಶುಕ್ರವಾರ ಚಿತ್ರ ವೀಕ್ಷಿಸಿದ ಸೆನ್ಸಾರ್‌ ಮಂಡಳಿ, ಯಾವುದೇ ಕಟ್‌ ಹಾಗೂ ಮ್ಯೂಟ್‌ ಇಲ್ಲದೆ “ಯು’ ಪ್ರಮಾಣ ಪತ್ರ ನೀಡಿದೆ. ನಿರ್ಮಾಪಕ ಜಾಕ್‌ಮಂಜು ಸೆನ್ಸಾರ್‌ ಬಳಿಕ ಚಿತ್ರದ ದಿನಾಂಕ ಘೋಷಿಸುವುದಾಗಿ ಹೇಳಿದ್ದರು. ಅದರಂತೆ, ಈಗ ಚಿತ್ರವನ್ನು ಸೆಪ್ಟೆಂಬರ್‌ 28 ರಂದು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಅಲ್ಲಿಗೆ ಇಷ್ಟು ದಿನಗಳಿಂದ ಚಿತ್ರ ಯಾವಾಗ ಬಿಡುಗಡೆಯಾಗುತ್ತೋ ಎಂದು ಕಾತುರದಿಂದ ಕಾಯುತ್ತಿದ್ದ ಅಂಬರೀಶ್‌ ಮತ್ತು ಸುದೀಪ್‌ ಅಭಿಮಾನಿಗಳಿಗೆ ಚಿತ್ರ ಬಿಡುಗಡೆ ಪಕ್ಕಾ ಆಗಿರುವುದರಿಂದ ಅವರ ಸಂತಸಕ್ಕೆ ಪಾರವೇ ಇಲ್ಲ. ಇದು ತಮಿಳಿನ “ಪವರ್‌ ಪಾಂಡಿ’ ಚಿತ್ರದ ಅವತರಣಿಕೆ. ಚಿತ್ರದಲ್ಲಿ ಅಂಬರೀಶ್‌ ಪಾತ್ರವೇ ಹೈಲೆಟ್‌. ಅಂಬರೀಶ್‌ ಅವರ ಯೌವ್ವನದ ಪಾತ್ರವನ್ನು ಸುದೀಪ್‌ ನಿರ್ವಹಿಸಿದ್ದಾರೆ. ಈ ಚಿತ್ರದ ಮೂಲಕ ಗುರುದತ್‌ ಗಾಣಿಗ ನಿರ್ದೇಶಕನ ಪಟ್ಟ ಅಲಂಕರಿಸಿದ್ದಾರೆ.

ತಮ್ಮ ಮೊದಲ ನಿರ್ದೇಶನದ ಚಿತ್ರದ ಕುರಿತು “ಉದಯವಾಣಿ’ಯೊಂದಿಗೆ ಮಾತನಾಡಿದ ನಿರ್ದೇಶಕ ಗುರುದತ್‌ ಗಾಣಿಗ, “ಸೆನ್ಸಾರ್‌ ಮಂಡಳಿ ಚಿತ್ರ ವೀಕ್ಷಿಸಿ, ಒಂದು ಕಟ್‌ ಇಲ್ಲದಂತೆ, “ಯು’ ಪ್ರಮಾಣ ಪತ್ರ ನೀಡಿದೆ. ಇದರರ್ಥ. ಕುಟುಂಬ ಸಮೇತ ಈ ಚಿತ್ರವನ್ನು ಯಾವುದೇ ಮುಜುಗರ ಇಲ್ಲದಂತೆ ನೋಡಬಹುದು. ಗಣೇಶ ಹಬ್ಬ ಆಚರಿಸಿ, ಸಂಭ್ರಮದಲ್ಲಲಿರುವ ಮನೆಯವರೆಲ್ಲರೂ ಅಂಥದ್ದೇ ಸಂಭ್ರಮ ಕಾಣಬಹುದಾದ ಚಿತ್ರವಿದು.

ಎಲ್ಲಾ ವರ್ಗದವರಿಗೂ ಇದು ಇಷ್ಟವಾಗುವ ಸಿನಿಮಾ. ಇಲ್ಲಿ ಪ್ರೀತಿ, ವಿಶ್ವಾಸ, ಗೆಳೆತನ ಇತ್ಯಾದಿ ವಿಷಯಗಳಿವೆ. ಚಿಕ್ಕವರು, ದೊಡ್ಡವರು ಎಂಬ ಬೇಧ-ಭಾವ ಇಲ್ಲದಂತೆಯೇ ಒಟ್ಟಿಗೆ ಕುಳಿತು ನೋಡುವ ಚಿತ್ರ ಎಂಬ ಹೆಮ್ಮೆ ನಮ್ಮದು. ಸೆಪ್ಟೆಂಬರ್‌ 28 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ’ ಎಂದು ಹೇಳುತ್ತಾರೆ. ಮೊದಲ ಸಿನಿಮಾ ನಿರ್ದೇಶಿಸಿರುವುದರಿಂದ ಸಹಜವಾಗಿಯೇ ನನಗೆ ಭಯ ಮತ್ತು ಖುಷಿ ಎರಡೂ ಇದೆ ಎನ್ನುವ ಗುರುದತ್‌,

“ಮೊದಲ ಚಿತ್ರದಲ್ಲೇ ದಿಗ್ಗಜರನ್ನು ನಿರ್ದೇಶಿಸಿದ ಅವಕಾಶ ಬಹಳಷ್ಟು ಮಂದಿಗೆ ಸಿಗುವುದಿಲ್ಲ. ಇಂಥದ್ದೊಂದು ಅವಕಾಶ ಮಾಡಿಕೊಟ್ಟ ಅಂಬರೀಶ್‌ ಸರ್‌, ಸುದೀಪ್‌ ಸರ್‌ ಮತ್ತು ನಿರ್ಮಾಪಕ ಜಾಕ್‌ ಮಂಜು ಅವರಿಗೆ ಥ್ಯಾಂಕ್ಸ್‌ ಹೇಳ್ತೀನಿ. ಇನ್ನು, ನನ್ನ ಕಲ್ಪನೆಗೆ ಸಹಕರಿಸಿದ ತಂತ್ರಜ್ಞರಿಗೂ ಕೃತಜ್ಞತೆ ಸಲ್ಲಿಸುವುದಾಗಿ’ ಹೇಳುತ್ತಾರೆ ನಿರ್ದೇಶಕ ಗುರುದತ್‌ ಗಾಣಿಗ. ಅಂದ ಹಾಗೆ, ಚಿತ್ರದ ಹಾಡುಗಳು ನಾಳೆ (ಸೆಪ್ಟೆಂಬರ್‌ 16) ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.