ಸೆಪ್ಟೆಂಬರ್ 23ಕ್ಕೆ “ಯಜಮಾನ’ ಫಸ್ಟ್ ಲುಕ್
Team Udayavani, Sep 19, 2018, 3:33 PM IST
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ಯಜಮಾನ’ ಚಿತ್ರದ ಶೂಟಿಂಗ್ ಬಹುತೇಕ ಮುಕ್ತಾಯದ ಹಂತದಲ್ಲಿದ್ದು, ಸದ್ಯ ಚಿತ್ರದ ಫಸ್ಟ್ ಲುಕ್ ರಿಲೀಸ್ಗೆ ದಿನಾಂಕ ಫಿಕ್ಸ್ ಆಗಿದೆ. ಹೌದು! ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಅವರ ಬಹುನಿರೀಕ್ಷಿತ “ಯಜಮಾನ’ ಚಿತ್ರದ ಫಸ್ಟ್ ಲುಕ್ ಇದೇ ತಿಂಗಳು 23ರ ಬೆಳಗ್ಗೆ 10 ಗಂಟೆಗೆ “ಡಿ ಬಿಟ್ಸ್’ ಯುಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಲಿದೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ “ಡಿ ಬಿಟ್ಸ್’ ಪೋಸ್ಟ್ ಮಾಡಿದೆ.
ಇನ್ನು ಚಿತ್ರದಲ್ಲಿ ದರ್ಶನ್ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ತಾನ್ಯಾ ಎಂಬ ಮತ್ತೊಬ್ಬ ನಾಯಕಿ ಕೂಡಾ ಚಿತ್ರದಲ್ಲಿದ್ದಾರೆ. ಬಾಲಿವುಡ್ನ ಠಾಕೂರ್ ಅನೂಪ್ ಸಿಂಗ್ ಪ್ರಮುಖ ವಿಲನ್ ಪಾತ್ರದಲ್ಲಿದ್ದರೆ, ರವಿಶಂಕರ್ ಹಾಗೂ ಧನಂಜಯ್ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಹಿರಿಯ ನಟ ದೇವರಾಜ್, ರಶ್ಮಿಕಾ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಮೀಡಿಯಾ ಹೌಸ್ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಶೈಲಜಾ ನಾಗ್ ಹಾಗೂ ಬಿ. ಸುರೇಶ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಪಿ. ಕುಮಾರ್ ಚಿತ್ರವನ್ನು ನಿರ್ದೇಶನ ಮಾಡಿದ್ದು, ವಿ. ಹರಿಕೃಷ್ಣ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಭರ್ಜರಿ ಹಾಗೂ ಬಹದ್ದೂರ್ ಚಿತ್ರವನ್ನು ನಿರ್ದೇಶಿಸಿದ್ದ ಚೇತನ್ ಕುಮಾರ್ ಸಂಭಾಷಣೆ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಯರಡಾಲ ಗ್ರಾಮ; ಇಲ್ಲಿ ಮೂಲ ಸೌಕರ್ಯಗಳದ್ದೇ ಕೊರತೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?