ಸಿನಿಮಾಗೆ ಜಾತಿ ಲೇಬಲ್‌ ಬೇಡ

Team Udayavani, Oct 10, 2018, 11:26 AM IST

sdeep-dars.jpg

ಸುದೀಪ್‌ ಹಾಗೂ ದರ್ಶನ್‌ ಇಬ್ಬರು ಪ್ರತ್ಯೇಕವಾಗಿ ವೀರಮದಕರಿ ನಾಯಕನ ಕುರಿತಾಗಿ ಸಿನಿಮಾ ಮಾಡಲು ಹೊರಟಿರುವ ವಿಚಾರ ನಿಮಗೆ ಗೊತ್ತೇ ಇದೆ. ಅದರ ಬೆನ್ನಲ್ಲೇ ಸಣ್ಣ ವಿವಾದವೂ ಆರಂಭವಾಗಿದೆ. ಮುಖ್ಯವಾಗಿ ವೀರಮದಕರಿ ನಾಯಕ ಸಿನಿಮಾಕ್ಕೆ ಈಗ ಜಾತಿ ಲೇಪನ ಅಂಟಿಕೊಂಡಿದೆ. ಕೆಲವು ಜಾತಿ ಸಂಘಟನೆಗಳು, ಸ್ವಾಮೀಜಿಗಳು ವೀರಮದಕರಿ ನಾಯಕನ ಸಿನಿಮಾವನ್ನು ಸುದೀಪ್‌ ಬಿಟ್ಟು ಬೇರೆ ಯಾರು ಮಾಡುವುದಾದರೂ ವಿರೋಧಿಸುತ್ತೇವೆ ಎನ್ನುವ ಮೂಲಕ ಜಾತಿಯ ವಿವಾದ ಚಿತ್ರಕ್ಕೆ ಅಂಟಿಕೊಂಡಿದೆ.

ಸಿನಿಮಾ ರಂಗಕ್ಕೂ ಜಾತಿ ತಳುಕು ಹಾಕಿಕೊಳ್ಳುತ್ತಿರುವುದನ್ನು ಅನೇಕರು ವಿರೋಧಿಸಿದ್ದಾರೆ. ಮುಖ್ಯವಾಗಿ ಶಾಸಕ ಹಾಗೂ ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ ಹಾಗೂ ನಟ ಜಗ್ಗೇಶ್‌, ಚಿತ್ರರಂಗಕ್ಕೆ ಜಾತಿಯನ್ನು ಎಳೆದು ತರಬೇಡಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಮುನಿರತ್ನ, ರಾಜಕೀಯಕ್ಕೆ ಜಾತಿ ಬಂದು ಹಾಳಾಗಿದೆ. ಈಗ ಸಿನಿಮಾಕ್ಕೆ ಜಾತಿಯನ್ನು ಎಳೆದು ತಂದು ಕೆಡಿಸೋದು ಬೇಡ. ಕಲೆಗೆ ಯಾವ ಜಾತಿಯೂ ಇಲ್ಲ.

ಕಲೆಯನ್ನು ಕಲೆಯಾಗಿ ನೋಡಿ. ದರ್ಶನ್‌, ಸುದೀಪ್‌ ಇಬ್ಬರೂ ಸಿನಿಮಾ ಮಾಡಲಿ. ಆದರೆ, ಕಥೆ ಒಂದೇ ಆಗಿರದಂತೆ ನೋಡಿಕೊಳ್ಳಬೇಕು. ಹಿಂದೆ ರಾಜ್‌ಕುಮಾರ್‌ ಅವರು ಹಲವು ಸಿನಿಮಾಗಳನ್ನು ಮಾಡಿದ್ದಾರೆ. ಆದರೆ, ಆಗ ಜಾತಿ ಅಡ್ಡ ಬರಲಿಲ್ಲ. ಜನರು ಒಳ್ಳೆಯ ಸಿನಿಮಾಗಳನ್ನು ನೋಡಿ ಪ್ರೋತ್ಸಾಹಿಸಬೇಕು. ಇನ್ನು, ನಟ ಜಗ್ಗೇಶ್‌ ಕೂಡಾ ಸಿನಿಮಾಕ್ಕೆ ಜಾತಿ ಅಂಟಿಕೊಂಡಿರುವ ಬಗ್ಗೆ ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.

ಟ್ವೀಟರ್‌ ಮೂಲಕ ಬೇಸರ ವ್ಯಕ್ತಪಡಿಸಿರುವ ಜಗ್ಗೇಶ್‌, “ಶಾರದೆಯ ಕಲಾ ದೇಗುಲ ಚಿತ್ರರಂಗ, ಜಾತಿ ರಹಿತ ಪುಣ್ಯ ಧಾಮ! ಕಲೆಗೆ ಜಾತಿಯಿಲ್ಲ! ವಿಶ್ವದಲ್ಲೇ ಜಾತಿ ಇಲ್ಲದೆ ಒಂದೇ ತಾಯಿ ಮಕ್ಕಳಂತೆ ಬದುಕುವ ಸ್ಥಳ ಶಾರದೆ ಮಡಿಲು! ಇಂಥ ಪವಿತ್ರ ಜಾಗದಲ್ಲಿ ಜಾತಿ ವಿಷ ಬೀಜ ಬಿತ್ತುವವರು ಅಳಿವಿನ ಅಂಚಿಗೆ ಸರಿಯುತ್ತಾರೆ. ಮತ ರಾಜಕೀಯಕ್ಕೆ ಮೀಸಲಾದ ಜಾತಿ ಕಲೆಗೆಬೇಡ! ವಿನಾಶಕಾಲಕ್ಕೆ ವಿಪರೀತ ಬುದ್ಧಿ! ಎಚ್ಚರವಾಗಿರಿ ಕಲಾ ಬಂಧುಗಳೆ..!!’ ಎಂದು ಟ್ವೀಟ್‌ ಮಾಡಿದ್ದಾರೆ. ಇನ್ನು, ಚಿತ್ರರಂಗದ ಅನೇಕರು ಸಿನಿಮಾಕ್ಕೆ ಜಾತಿ ಅಂಟಿಕೊಳ್ಳಬಾರದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.