ಉಪ್ಪಿ – ಶಶಾಂಕ್‌ ಚಿತ್ರಕ್ಕೆ ಮತ್ತೆ ಜೀವ


Team Udayavani, Oct 31, 2018, 11:20 AM IST

uppi.jpg

ಸದ್ಯ ನಿರ್ದೇಶಕ ಶಶಾಂಕ್‌ “ತಾಯಿಗೆ ತಕ್ಕ ಮಗ’ ಚಿತ್ರವನ್ನು ತೆರೆಗೆ ತರುವ ತಯಾರಿಯಲ್ಲಿದ್ದಾರೆ. ಇದರ ನಡುವೆಯೇ ಶಶಾಂಕ್‌ ನಿರ್ದೇಶನದ ಮುಂದಿನ ಚಿತ್ರದ ಬಗ್ಗೆಯೂ ಸುದ್ದಿಯೊಂದು ಹೊರಬಿದ್ದಿದೆ. “ತಾಯಿಗೆ ತಕ್ಕ ಮಗ’ ತೆರೆಕಂಡ ನಂತರ ಶಶಾಂಕ್‌, ರಿಯಲ್‌ ಸ್ಟಾರ್‌ ಉಪೇಂದ್ರ ನಾಯನಾಗಿ ಅಭಿನಯಿಸುವ ಚಿತ್ರವನ್ನು ನಿರ್ದೇಶಿಸಲಿದ್ದಾರೆ.

ಕಳೆದ ಒಂದೂವರೆ ವರ್ಷಗಳ ಹಿಂದೆಯೇ ಈ ಇಬ್ಬರ ಕಾಂಬಿನೇಷನ್‌ನಲ್ಲಿ ಚಿತ್ರವೊಂದು ಬರಲಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿತ್ತು. ಸ್ವತಃ ಶಶಾಂಕ್‌ ಕೂಡಾ ಈ ಸಿನಿಮಾ ಬಗ್ಗೆ ಹೇಳಿಕೊಂಡಿದ್ದರು. ಅದಾದ ನಂತರ ಉಪೇಂದ್ರ ಪ್ರಜಾಕೀಯ, ಚುನಾವಣೆ ಅಂತ ಚಿತ್ರರಂಗದಿಂದ ಕೊಂಚ ದೂರವುಳಿದ ಕಾರಣ ಈ ಸುದ್ದಿ ಅಷ್ಟಕ್ಕೆ ತಣ್ಣಗಾಗಿತ್ತು. 

ಈಗ ಉಪ್ಪಿ ಮತ್ತೆ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದು, ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಇದೇ ವೇಳೆ ಶಶಾಂಕ್‌-ಉಪ್ಪಿ ಹೊಸ ಚಿತ್ರ ಸುದ್ದಿಗೆ ಮತ್ತೆ ಕಾವು ಪಡೆದುಕೊಂಡಿದ್ದು, ಇತ್ತೀಚೆಗೆ ನಡೆದ “ತಾಯಿಗೆ ತಕ್ಕ ಮಗ’ ಚಿತ್ರದ ಆಡಿಯೋ ಸಕ್ಸಸ್‌ ಮೀಟ್‌ನಲ್ಲಿ ಉಪೇಂದ್ರ ಅವರ ಸಮ್ಮುಖದಲ್ಲೆ ತಮ್ಮ ಮತ್ತು ಉಪೇಂದ್ರ ಅವರ ಕಾಂಬಿನೇಷನ್‌ನಲ್ಲಿ ಹೊಸ ಚಿತ್ರ ಬರುತ್ತಿದೆ ಎಂದು ನಿರ್ದೇಶಕ ಶಶಾಂಕ್‌ ಘೋಷಿಸಿದ್ದಾರೆ.

ಸದ್ಯ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ, ಇದೇ ವರ್ಷಾಂತ್ಯದೊಳಗೆ ಚಿತ್ರ ಸೆಟ್ಟೇರುವ ಸಾಧ್ಯತೆ ಇದೆ. “ಶಶಾಂಕ್‌ ಸಿನಿಮಾಸ್‌’ ಬ್ಯಾನರ್‌ನಲ್ಲಿ ನಿರ್ದೇಶಕ ಶಶಾಂಕ್‌ ಅವರೇ ಈ ಚಿತ್ರದ ನಿರ್ಮಾಣ ಮತ್ತು ನಿರ್ದೇಶನದ ಹೊಣೆಯನ್ನು ಹೊತ್ತುಕೊಂಡಿದ್ದು, ಇನ್ನು ಈ ಚಿತ್ರದ ಕಥೆ, ಉಳಿದ ತಾರಾಗಣ, ತಂತ್ರಜ್ಞರ ಮಾಹಿತಿ ಇನ್ನಷ್ಟೆ ಹೊರಬರಬೇಕಿದೆ. 

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.