ಪುಟ 109 ತೆರೆಯಲು ದಿನಗಣನೆ

Team Udayavani, Nov 9, 2018, 10:54 AM IST

puta-109.jpg

“ಆ ಕರಾಳ ರಾತ್ರಿ’ ಚಿತ್ರವನ್ನು ಯಶಸ್ವಿಯಾಗಿ ಪ್ರೇಕ್ಷಕರ ಮುಂದೆ ತಂದಿದ್ದ ನಿರ್ದೇಶಕ ದಯಾಳ್‌ ಪದ್ಮನಾಭನ್‌, ಈಗ “ಪುಟ 109′ ಚಿತ್ರವನ್ನು ಪ್ರೇಕ್ಷಕರ ಮುಂದೆ ತೆರೆದಿಡುವ ತಯಾರಿಯಲ್ಲಿದ್ದಾರೆ. ಸದ್ಯ  “ಪುಟ 109′ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಚಿತ್ರವನ್ನು ಪ್ರೇಕ್ಷಕರಿಗೆ ತಲುಪಿಸುವ ಅಂತಿಮ ಹಂತದ ಪ್ರಚಾರ ಕಾರ್ಯಗಳಲ್ಲಿ ಚಿತ್ರತಂಡ ನಿರತವಾಗಿದೆ. ಇದೇ ನ. 16ರಂದು ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ದಯಾಳ್‌ ಪದ್ಮನಾಭವ್‌  “ಪುಟ 109’ರಲ್ಲಿ ಅಡಗಿರುವ ಒಂದಷ್ಟು ಕೌತುಕ ಸಂಗತಿಗಳನ್ನು ತೆರೆದಿಟ್ಟಿದ್ದಾರೆ. ಏಕಕಾಲಕ್ಕೆ  “ಆ ಕರಾಳ ರಾತ್ರಿ’ ಮತ್ತು “ಪುಟ 109′ ಚಿತ್ರವನ್ನು ಆರಂಭಿಸಲಾಗಿತ್ತು. ನಮ್ಮ ಯೋಜನೆಯಂತೆ  “ಆ ಕರಾಳ ರಾತ್ರಿ’ ಚಿತ್ರವನ್ನು ಮೊದಲು ಬಿಡುಗಡೆ ಮಾಡಿದ್ದೇವು. ಆ ಚಿತ್ರಕ್ಕೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿತು.

ಈಗ “ಪುಟ 109′ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ. ಇದೊಂದು ಸಸ್ಪೆನ್ಸ್‌ ಚಿತ್ರವಾಗಿದ್ದು, ಪ್ರೇಕ್ಷಕನಿಗೆ ಖಂಡಿತ ಇಷ್ಟವಾಗುತ್ತೆ ಎನ್ನುತ್ತಾರೆ ನಿರ್ದೇಶಕ ದಯಾಳ್‌. ಸಾಮಾನ್ಯವಾಗಿ ನಾವೆಲ್ಲ ಪೊಲೀಸ್‌ ತನಿಖೆಯ ಬಗ್ಗೆ ಕೇಳಿರುತ್ತೇವೆ. ಅದನ್ನು ನೇರವಾಗಿ ನೋಡಿರುವ ಸಾಧ್ಯತೆ ತುಂಬ ಕಡಿಮೆ. ಆದರೆ “ಪುಟ 109′ ಅಂತಹ ಪೊಲೀಸ್‌ ತನಿಖೆಯೊಂದನ್ನು ರೋಚಕವಾಗಿ ನಿಮ್ಮ ಮುಂದೆ ತೆರೆದಿಡುತ್ತದೆ.

ಕೇವಲ ಮೂರ್‍ನಾಲ್ಕು ಪಾತ್ರಗಳು, ಮೂರ್‍ನಾಲ್ಕು ಲೊಕೇಷನ್‌ಗಳ ಸುತ್ತವೇ ಇಡೀ ಚಿತ್ರದ ಕಥೆ ನಡೆಯುತ್ತದೆ. ಆರಂಭದಿಂದ ಕೊನೆಯವರೆಗೂ ನೋಡುಗರನ್ನ ಸೀಟ್‌ನ ತುದಿಯಲ್ಲಿ ಕೂರಿಸುತ್ತದೆ ಎನ್ನುವುದು ದಯಾಳ್‌ ಅವರ ಭರವಸೆಯ ಮಾತು. ಕನ್ನಡದ ಪ್ರೇಕ್ಷಕರು ಇತ್ತೀಚೆಗೆ ಹೊಸಥರದ ಚಿತ್ರಗಳತ್ತ ಆಸಕ್ತರಾಗುತ್ತಿದ್ದಾರೆ. ಚಿತ್ರಗಳಲ್ಲಿ ಪ್ರೇಕ್ಷಕರನ್ನು ಬೇರೆ ಬೇರೆ ರೀತಿಯಲ್ಲಿ ರಂಜಿಸಬಹುದು. ಅದಕ್ಕೆ “ಆ ಕರಾಳ ರಾತ್ರಿ’ ಚಿತ್ರವೇ ಉತ್ತಮ ಉದಾಹರಣೆ.

ಈ ಚಿತ್ರ ಕೂಡ ಪ್ರೇಕ್ಷಕರಿಗೆ ಹೊಸ ಅನುಭವ ಕೊಡುವುದರಲ್ಲಿ ಅನುಮಾನವಿಲ್ಲ ಎಂಬ ವಿಶ್ವಾಸ ದಯಾಳ್‌ ಅವರದ್ದು. “ಪುಟ 109′  ಚಿತ್ರದಲ್ಲಿ ಜೆ.ಕೆ ಹಾಗೂ ನವೀನ್‌ ಕೃಷ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ನಾಯಕಿಯಾಗಿ ವೈಷ್ಣವಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ದಯಾಳ್‌ ಪದ್ಮನಾಭನ್‌ ನಿರ್ದೇಶನದ ಜತೆಗೆ ನಿರ್ಮಾಣವನ್ನೂ ಮಾಡಿದ್ದಾರೆ. ನಿರ್ಮಾಪಕ ಮತ್ತು ವಿತರಕ ಜಾಕ್‌ ಮಂಜು ಚಿತ್ರದ ವಿತರಣೆ ಹಕ್ಕುಗಳನ್ನು ಪಡೆದಿದ್ದಾರೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.