ಗಣೇಶ್ಗೆ ಜೋಡಿಯಾದ ಶಾನ್ವಿ
Team Udayavani, Nov 11, 2018, 2:56 PM IST
1981 ರಲ್ಲಿ ಶಂಕರ್ ನಾಗ್ ನಟಿಸಿದ್ದ “ಗೀತಾ’ ಸಿನಿಮಾ ಅಭಿಮಾನಿಗಳ ಮನಸ್ಸಿನಲ್ಲಿ ಇಂದಿಗೂ ಅಚ್ಚಳಿಯದೇ ಉಳಿದಿದೆ. ಇದೀಗ ಅದೇ ಟೈಟಲ್ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಟಿಸುತ್ತಿರುವ ವಿಚಾರ ಗೊತ್ತೇ ಇದೆ. ಈ ಚಿತ್ರಕ್ಕೆ ಈಗಾಗಲೇ ಚಾಲನೆ ಕೂಡಾ ಸಿಕ್ಕಿದೆ. ಇದೇ ಸಮಯದಲ್ಲಿ ಬಾಕಿ ಉಳಿದಿದ್ದ ಮೂರನೇ ನಾಯಕಿಯ ಆಯ್ಕೆಯೂ ನಡೆದಿದೆ. ಹೌದು! ಶಾನ್ವಿ ಶ್ರೀವಾಸ್ತವ ಈ ಚಿತ್ರಕ್ಕೆ ಹೊಸತಾಗಿ ಎಂಟ್ರಿ ಕೊಟ್ಟಿದ್ದಾರೆ.
“ಗೀತಾ’ ಚಿತ್ರದಲ್ಲಿ ಮೂವರು ನಾಯಕಿಯರು ನಟಿಸಲಿದ್ದು, ಈಗಾಗಲೇ ಮಲೆಯಾಳಿ ಬೆಡಗಿಯರಾದ ಪ್ರಯಾಗಾ ಮಾರ್ಟಿನ್ ಮತ್ತು ಪಾರ್ವತಿ ಅರುಣ್ ನಾಯಕಿಯರಾಗಿ ಆಯ್ಕೆಯಾಗಿದ್ದರು. ಆದರೆ ಮೂರನೇ ನಾಯಕಿಗಾಗಿ ಹುಡುಕಾಟ ಆರಂಭವಾಗಿತ್ತು. ಇದೀಗ ಆ ಪಾತ್ರಕ್ಕೆ ಶಾನ್ವಿ ಆಗಮನವಾಗಿದ್ದು, ಚಿತ್ರಕ್ಕೆ ಮೂವರು ನಾಯಕಿಯರು ಸಿಕ್ಕಂತಾಗಿದೆ.
ಇನ್ನು ಚಿತ್ರವನ್ನು ವಿಜಯ್ ನಾಗೇಂದ್ರ ನಿರ್ದೇಶಿಸುತ್ತಿದ್ದು, ವಿ. ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ. ಅಲ್ಲದೇ ಸೈಯ್ಯದ್ ಸಲಾಮ್ ಮತ್ತು ಗಣೇಶ್ ಹೋಮ್ ಬ್ಯಾನರ್ ನಲ್ಲಿ ಚಿತ್ರ ತಯಾರಾಗುತ್ತಿದ್ದು, ಉಳಿದ ಕಲಾವಿದ, ತಂತ್ರಜ್ಞರನ್ನು ಇನ್ನಷ್ಟೇ ಆಯ್ಕೆ ಮಾಡಬೇಕಿದೆ. “ಗೀತಾ’ ಚಿತ್ರದ ಶೂಟಿಂಗ್ ಕೊಲ್ಕತಾ, ಕಾಶ್ಮೀರ, ಮೈಸೂರು ಮತ್ತು ಬೆಂಗಳೂರಿನಲ್ಲಿ ನಡೆಸಲು ಚಿತ್ರತಂಡ ತೀರ್ಮಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ