ಕದ್ದುಮುಚ್ಚಿ ಹಾಡು ಬಂತು


Team Udayavani, Nov 15, 2018, 3:33 PM IST

95.jpg

ಸುಮಾರು ನಾಲ್ಕು ವರ್ಷಗಳ ಹಿಂದೆಯೇ ಆರಂಭವಾಗಿದ್ದ “ಕದ್ದು ಮುಚ್ಚಿ’ ಚಿತ್ರ ಅಂತೂ ತೆರೆಗೆ ಬರಲು ತಯಾರಾಗಿದೆ. ಹಂಸಲೇಖ ಅವರ ಗರಡಿಯಲ್ಲಿ ಪಳಗಿರುವ ವಂಸತ್‌ ರಾಜ್‌ ಈ ಚಿತ್ರದ ಮೊದಲ ಬಾರಿಗೆ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಕಿರುತೆರೆಯ ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವಿಜಯ್‌ ಸೂರ್ಯ “ಕದ್ದು ಮುಚ್ಚಿ’ ಚಿತ್ರದಲ್ಲಿ ನಾಯಕ ನಟನಾಗಿದ್ದು, ಮೇಘಶ್ರೀ ನಾಯಕಿಯಾಗಿ ಜೋಡಿಯಾಗಿದ್ದಾರೆ. ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ “ಕದ್ದು ಮುಚ್ಚಿ’ ಚಿತ್ರತಂಡ ಇತ್ತೀಚೆಗೆ ತನ್ನ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ. 

ಇತ್ತೀಚೆಗೆ ನಡೆದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ ಚಿನ್ನೆಗೌಡ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್‌, ಭಾ.ಮಾ ಹರೀಶ್‌, ಚಂದ್ರಶೇಖರ ಸಾcಮೀಜಿ, ಹಿರಿಯ ನಟ ದೊಡ್ಡಣ್ಣ, ಹಿರಿಯ ನಿರ್ದೇಶಕ ಕೂಡ್ಲು ರಾಮಕೃಷ್ಣ, ಲತಾ ಹಂಸಲೇಖ, ನಿರ್ಮಾಪಕ ಉಮೇಶ ಬಣಕಾರ್‌ ಸೇರಿದಂತೆ ಹಲವು ಗಣ್ಯರು ಆಗಮಿಸಿ ಚಿತ್ರದ ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. 

ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ವಸಂತ್‌ ರಾಜ್‌, ಇತ್ತೀಚಿನ ದಿನಗಳಲ್ಲಿ ಫ್ಯಾಮಿಲಿ ಓರಿಯೆಂಟೆಡ್‌ ಚಿತ್ರಗಳ ಮಾಡೋದು ತುಂಬಾ ಕಡಿಮೆಯಾಗಿದೆ. ಕದ್ದು ಮುಚ್ಚಿ ಪಕ್ಕಾ ಕೌಟುಂಬಿಕ ಕಥಾಹಂದರದ ಚಿತ್ರ. ಕೆಲ ಕಾರಣಗಳಿಂದ ಚಿತ್ರ ತೆರೆಗೆ ಬರುವಲ್ಲಿ ವಿಳಂಬವಾಗಿದೆ. ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗುವುದೆಂಬ ನಂಬಿಕೆ ಇದೆ ಎಂದರು. 

ಚಿತ್ರದ ಬಗ್ಗೆ ಮಾತನಾಡಿದ ನಾಯಕ ನಟ ವಿಜಯ್‌ ಸೂರ್ಯ, “ಇದು ನನ್ನ ಎರಡನೇ ಚಿತ್ರ. ಧಾರಾವಾಹಿ ಮತ್ತು ನನ್ನ ಈ ಹಿಂದಿನ ಚಿತ್ರದಲ್ಲಿ ಲವರ್‌ ಬಾಯ್‌ ಪಾತ್ರಗಳಲ್ಲಿ ನಟಿಸಿದ್ದೆ.  ಈ ಚಿತ್ರದಲ್ಲಿ ಆ್ಯಕ್ಷನ್‌ ದೃಶ್ಯಗಳಲ್ಲೂ ಕಾಣಿಸಿಕೊಂಡಿದ್ದೇನೆ ಎಂದರು. ಉಳಿದಂತೆ “ಕದ್ದು ಮುಚ್ಚಿ’ ಚಿತ್ರದಲ್ಲಿ ದೊಡ್ಡಣ್ಣ, ಚಿಕ್ಕಣ್ಣ,  ಸುಚೇಂದ್ರ ಪ್ರಸಾದ್‌, ಹೊನ್ನಾವಳಿ ಕೃಷ್ಣ, ಉಮೇಶ್‌ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ವಿ.ಜಿ. ಮಂಜುನಾಥ್‌ “ಕದ್ದು ಮುಚ್ಚಿ’ ಚಿತ್ರವನ್ನು ನಿರ್ಮಾಣ ಮಾಡಿದ್ದು, ಚಿತ್ರದಲ್ಲಿರುವ ಆರು ಹಾಡುಗಳಿಗೆ ಹಂಸಲೇಖ ಸಂಗೀತ ಸಂಯೋಜಿಸಿದ್ದಾರೆ. ಇದೇ ತಿಂಗಳ ಕೊನೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ. 

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.