ಚಿರಂಜೀವಿ ಸರ್ಜಾ ಸಿಂಗ ಆರಂಭ
Team Udayavani, Dec 2, 2018, 11:23 AM IST
ಉದಯ್. ಕೆ ಮೆಹ್ತಾ ಅವರು ನಿರ್ಮಿಸುತ್ತಿರುವ “ಸಿಂಗ’ ಚಿತ್ರದ ಮುಹೂರ್ತ ಇತ್ತೀಚೆಗೆ ಬಸವೇಶ್ವರ ನಗರದ ಶ್ರೀವಿನಾಯಕ ದೇವಸ್ಥಾನದಲ್ಲಿ ನೆರವೇರಿತು. ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಧ್ರುವ ಸರ್ಜಾ ಆರಂಭ ಫಲಕ ತೋರಿದರು.
ಚಿತ್ರದ ಟೈಟಲ್ ಟೀಸರ್ ಕೂಡ ಧ್ರುವ ಸರ್ಜಾ ಅವರಿಂದಲೇ ಅನಾವರಣವಾಯಿತು. ಈ ಹಿಂದೆ “ರಾಮ್ಲೀಲಾ’ ಚಿತ್ರವನ್ನು ನಿರ್ದೇಶಿಸಿದ್ದ, ವಿಜಯ್ ಕಿರಣ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಿರಣ್ ಹಂಪಾಪುರ ಛಾಯಾಗ್ರಹಣ, ಧರ್ಮ ವಿಶ್ ಸಂಗೀತ ನಿರ್ದೇಶನ, ಕೆ.ರವಿವರ್ಮ, ಪಳನಿರಾಜ್ ಸಾಹಸ, ಗಣೇಶ್ ಸಂಕಲನ ಈ ಚಿತ್ರಕ್ಕಿದೆ.
ವಿ.ನಾಗೇಂದ್ರ ಪ್ರಸಾದ್, ಕವಿರಾಜ್ ಹಾಗೂ ಚೇತನ್ “ಸಿಂಗ’ ಚಿತ್ರದ ಹಾಡುಗಳನ್ನು ಬರೆಯುತ್ತಿದ್ದಾರೆ. ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಅದಿತಿ ಪ್ರಭುದೇವ. ರವಿಶಂಕರ್, ತಾರಾ, ಶಿವರಾಜ್ ಕೆ.ಆರ್ ಪೇಟೆ, ಅರುಣಾ ಬಾಲರಾಜ್, ರಂಜಿತಾ, ಚಂದ್ರಪ್ರಭ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ