“ಕೆಜಿಎಫ್’ ಐಟಂ ಸಾಂಗ್: ತಮನ್ನಾ ಜಾಗಕ್ಕೆ ಮೋನಿ ರಾಯ್
Team Udayavani, Dec 6, 2018, 4:43 PM IST
ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ರಾಕಿಂಗ್ ಸ್ಟಾರ್ ಯಶ್ ಅಭಿನಯದ “ಕೆಜಿಎಫ್’ ಸಿನಿಮಾ ಈಗಾಗಲೇ ಟ್ರೈಲರ್ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದು, ಕನ್ನಡ ಸಿನಿಮಾರಂಗದಲ್ಲಿ ಹೊಸ ದಾಖಲೆಯನ್ನು ಸೃಷ್ಟಿ ಮಾಡಲು ಮುಂದಾಗಿದೆ. ಈಗಾಗಲೇ ಚಿತ್ರತಂಡದಿಂದ ಪ್ರಮೋಷನ್ ಕಾರ್ಯ ಕೂಡ ಭರ್ಜರಿಯಾಗಿ ನಡೆಯುತ್ತಿದೆ. ಇದರ ಮಧ್ಯೆಯೇ “ಕೆಜಿಎಫ್’ ಕುರಿತು ಹೊಸ ಸುದ್ದಿಯೊಂದು ಹೊರ ಬಿದ್ದಿದೆ.
ಹೌದು, “ಕೆಜಿಎಫ್’ ಹಿಂದಿ ವರ್ಷನ್ ಚಿತ್ರಕ್ಕಾಗಿ ರೆಟ್ರೋ ಸಾಂಗ್ವೊಂದನ್ನು ಶೂಟ್ ಮಾಡಲಾಗುತ್ತಿದೆ. ಈಗಾಗಲೇ ಕನ್ನಡ ವರ್ಷನ್ ಚಿತ್ರಕ್ಕಾಗಿ ಸಿದ್ಧವಾಗಿರುವ “ಜೋಕೆ ನಾನು ಬಳ್ಳಿಯ ಮಿಂಚು’ ಹಾಡಿನಲ್ಲಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಸೊಂಟ ಬಳುಕಿಸಿದ್ದರು. ಈಗ ಹಿಂದಿಯ ಹಾಡಿಗೆ ನಟಿ ಮೋನಿ ರಾಯ್ ರಾಕಿಂಗ್ ಸ್ಟಾರ್ ಜತೆ ಹೆಜ್ಜೆ ಹಾಕಲಿದ್ದಾರೆ.
ಇನ್ನು ಜಾಕಿಶ್ರಾಫ್ ಹಾಗೂ ಸಂಗೀತಾ ಬಿಜ್ಲಾನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ (1989) ತ್ರಿದೇವ ಚಿತ್ರದಲ್ಲಿಯ ಗಲ್ಲಿ ಗಲ್ಲಿ ಮೇ ಫಿರ್ತಾ ಹೈ ಸಾಂಗ್ನ್ನು “ಕೆಜಿಎಫ್’ಗಾಗಿ ರಿಕ್ರಿಯೇಟ್ ಮಾಡಲಾಗುತ್ತಿದೆ. ಡಿಸೆಂಬರ್ 7 ಮತ್ತು 8 ಗೋರೆಗಾಂವ್ ಸ್ಟುಡಿಯೋದಲ್ಲಿ ಈ ಹಾಡಿನ ಚಿತ್ರೀಕರಣ ನಡೆಯಲಿದೆ. “ಕೆಜಿಎಫ್’ ಸಿನಿಮಾ ಈಗಾಗಲೇ ಎರಡು ಟ್ರೈಲರ್ ಮತ್ತು ಒಂದು ಹಾಡು ಬಿಡುಗಡೆಯಾಗಿ ಸದ್ದು ಮಾಡುತ್ತಿದೆ. ಅಲ್ಲದೇ ಸಿನಿಮಾ ತೆಲುಗು, ಹಿಂದಿ, ತಮಿಳು, ಮಲಯಾಳಂ ಹಾಗೂ ಕನ್ನಡ ಭಾಷೆಯಲ್ಲಿ ಇದೇ ತಿಂಗಳು 21 ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ