ಐ ಲವ್ ಯೂ ಟ್ರೇಲರ್ ಇಂದು ರಿಲೀಸ್
Team Udayavani, Dec 30, 2018, 5:49 AM IST
2019ರಲ್ಲಿ ನಿರೀಕ್ಷೆ ಹುಟ್ಟಿಸಿರುವ ಸ್ಟಾರ್ ಸಿನಿಮಾಗಳಲ್ಲಿ ಉಪೇಂದ್ರ ಅವರ “ಐ ಲವ್ ಯೂ’ ಚಿತ್ರ ಕೂಡಾ ಒಂದು. ಆರ್.ಚಂದ್ರು ನಿರ್ಮಾಣ, ನಿರ್ದೇಶನದ ಈ ಚಿತ್ರದ ಸ್ಟಿಲ್ಗಳು ಹಾಗೂ ಫಸ್ಟ್ಲುಕ್ ಟೀಸರ್ ಸಿನಿಮಾದ ಬಗೆಗಿನ ನಿರೀಕ್ಷೆಯನ್ನು ಹೆಚ್ಚಿಸಿರುವುದು ಸುಳ್ಳಲ್ಲ. ಆರ್.ಚಂದ್ರು ಅವರ ಸೆಂಟಿಮೆಂಟ್ ಜೊತೆಗೆ ಉಪೇಂದ್ರ ಶೈಲಿಯ ಸಿನಿಮಾ ಎಂದು ಈಗಾಗಲೇ ಬಿಂಬಿತವಾಗಿದೆ. ಸದ್ದಿಲ್ಲದೇ ಚಿತ್ರೀಕರಣ ಮುಗಿಸಿರುವ ಚಂದ್ರು, ಈಗ ಚಿತ್ರವನ್ನು ಬಿಡುಗಡೆಯ ಹಂತಕ್ಕೆ ತಂದಿದ್ದಾರೆ.
ಮೊದಲ ಹಂತವಾಗಿ ಇಂದು ಚಿತ್ರದ ಟ್ರೇಲರ್ ಬಿಡುಗಡೆಯಾಗುತ್ತಿದೆ. ನಗರದ ಅಶೋಕ ಹೋಟೆಲ್ನಲ್ಲಿ ಇಂದು ಸಂಜೆ ಚಿತ್ರದ ಟ್ರೇಲರ್ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಶಿವರಾಜಕುಮಾರ್ ಅವರು ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಿದ್ದು, ಚಿತ್ರರಂಗದ ಅನೇಕ ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಚಿತ್ರದ ಆಡಿಯೋ ಬಿಡುಗಡೆಯನ್ನು ಅದ್ಧೂರಿಯಾಗಿ ಮಾಡಲು ನಿರ್ದೇಶಕ ಆರ್.ಚಂದ್ರು ನಿರ್ಧರಿಸಿದ್ದು, ಜನವರಿ 12ರಂದು ದಾವಣಗೆರೆಯಲ್ಲಿ ಕಲರ್ಫುಲ್ ಆಗಿ ಚಿತ್ರದ ಆಡಿಯೋ ಬಿಡುಗಡೆಯಾಗಲಿದೆ.
ಸಂಗೀತ ರಸಮಂಜರಿ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿದೆ. ಚಿತ್ರ ಯಾವಾಗ ಬಿಡುಗಡೆ ಎಂದು ನೀವು ಕೇಳಬಹುದು. ಚಂದ್ರು ಈ ಬಾರಿ ಪಕ್ಕಾ ಪ್ಲ್ರಾನ್ ಮಾಡಿಕೊಂಡಿದ್ದು, ಫೆಬ್ರವರಿ 14 ರಂದು ಚಿತ್ರ ಬಿಡುಗಡೆಯಾಗಲಿದೆ. ಫೆಬ್ರವರಿ 14 ರಂದು ಚಿತ್ರ ಬಿಡುಗಡೆ ಮಾಡಲು ಒಂದು ಕಾರಣವಿದೆ. ಅದು ಚಿತ್ರದ ಕಥೆ. ಆರ್.ಚಂದ್ರು ಪ್ರೀತಿ-ಪ್ರೇಮ ಕುರಿತು ಚಿತ್ರದ ಕಥೆ ಸಾಗಲಿದ್ದು, ಈ ಚಿತ್ರ ಪ್ರೇಮಿಗಳಿಗೆ ಹೆಚ್ಚು ಇಷ್ಟವಾಗಲಿದೆಯಂತೆ.
ಆ ಕಾರಣದಿಂದ ಫೆಬ್ರವರಿ 14 ರಂದು ಚಿತ್ರ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ. ಚಿತ್ರದಲ್ಲಿ ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದು, ಪಾತ್ರಕ್ಕೆ ತಕ್ಕಂತೆ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಅಂದಹಾಗೆ, ಉಪೇಂದ್ರ ಹಾಗೂ ಆರ್.ಚಂದ್ರು ಕಾಂಬಿನೇಶನ್ನಲ್ಲಿ ಈ ಹಿಂದೆ “ಬ್ರಹ್ಮ’ ಚಿತ್ರ ಬಂದಿದ್ದು, ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಅವರಿಬ್ಬರ ಕಾಂಬಿನೇಶನ್ನಲ್ಲಿ ಬರುತ್ತಿರುವ “ಐ ಲವ್ ಯೂ’ ಚಿತ್ರ ಕೂಡಾ ನಿರೀಕ್ಷೆ ಹುಟ್ಟುಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ