ಕಿಚ್ಚು ಹಾಯಿಸುವ ಹಬ್ಬಕ್ಕೆ ಕಿಚ್ಚನ ಶುಭಾಶಯ
Team Udayavani, Jan 15, 2019, 9:04 AM IST
ಸ್ಯಾಂಡಲ್ವುಡ್ನ ಆರಡಿ ಕಟೌಟ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಂಕ್ರಾಂತಿ ಹಬ್ಬಕ್ಕೆ ಟ್ವೀಟರ್ ಮೂಲಕ ನಾಡಿನ ಸಮಸ್ತ ಜನತೆಗೆ ಶುಭ ಕೋರಿದ್ದಾರೆ. “ನಾಡಿನೆಲ್ಲಾ ಸ್ನೇಹಿತರಿಗೂ ಹಾಗೂ ನಿಮ್ಮ ಕುಟುಂಬದವರಿಗೂ ಈ ನಿಮ್ಮ ಪ್ರೀತಿಯ ಕಿಚ್ಚನಿಂದ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ಸಂಕ್ರಾಂತಿ ಹಬ್ಬದಂದು ನಿಮ್ಮ ಆಸೆಗಳೆಲ್ಲ ಉಕ್ಕಿ ಹರಿಯಲಿ..’ ಎಂದು ಶುಭ ಹಾರೈಸಿದ್ದಾರೆ.
ಅಲ್ಲದೇ ಸುದೀಪ್ ಅವರ “ಪೈಲ್ವಾನ್’ ಚಿತ್ರತಂಡ ಕೂಡಾ ಸಂಕ್ರಾಂತಿಗೆ ಅಭಿಮಾನಿಗಳಿಗೆ ಕೊಡುಗೆ ನೀಡುತ್ತಿದೆ. ಅದು ಚಿತ್ರದ ಮೊದಲ ಟೀಸರ್. ಹೌದು, ಇಂದು ಸಂಜೆ 4.45 ನಿಮಿಷಕ್ಕೆ “ಪೈಲ್ವಾನ್’ ಚಿತ್ರದ ಫಸ್ಟ್ಲುಕ್ ಟೀಸರ್ ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರತಂಡ ಇದನ್ನು ಘೋಷಿಸಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ಕಿಚ್ಚನ ಗೆಟಪ್ ನೋಡಲು ಕಾತುರರಾಗಿದ್ದಾರೆ.
ಈ ಹಿಂದೆ “ಹೆಬ್ಬುಲಿ’ ಚಿತ್ರವನ್ನು ನಿರ್ದೇಶಿಸಿದ್ದ ಕೃಷ್ಣ ಈಗ “ಪೈಲ್ವಾನ್’ ಚಿತ್ರವನ್ನು ನಿರ್ದೇಶಿಸುವ ಜೊತೆಗೆ ನಿರ್ಮಾಣ ಕೂಡಾ ಮಾಡಿದ್ದಾರೆ. ಈ ಸಿನಿಮಾ ಮೇಲೆ ಸುದೀಪ್ ಕೂಡಾ ಸಾಕಷ್ಟು ನಿರೀಕ್ಷೆ ಇಟ್ಟಿದ್ದು, ಮೊದಲ ಬಾರಿಗೆ ಕುಸ್ತಿ ಅಖಾಡದಲ್ಲಿ ತೊಡೆ ತಟ್ಟಿ ನಿಂತಿದ್ದಾರೆ. ಈಗಾಗಲೇ ಸುದೀಪ್ ಪೈಲ್ವಾನ್ ಗೆಟಪ್ನಲ್ಲಿರುವ ಫೋಟೋಗಳು ಚಿತ್ರದ ಬಗೆಗಿನ ಕುತೂಹಲವನ್ನು ಹೆಚ್ಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ