ಇನ್ಸ್‌ಪೆಕ್ಟರ್‌ ವಿಕ್ರಂ ಜೊತೆ ರಘು ಮುಖರ್ಜಿ

Team Udayavani, Feb 11, 2019, 5:17 AM IST

inspector.jpg

ಪ್ರಜ್ವಲ್‌ ಅಭಿನಯದ “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರದಲ್ಲಿ ದಿನ ಕಳೆದಂತೆ ಅತಿಥಿ ಪಾತ್ರಗಳ ಎಂಟ್ರಿ ಹೆಚ್ಚಾಗುತ್ತಲೇ ಇದೆ. ಈ ಹಿಂದೆ ದರ್ಶನ್‌ ಅವರು ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ ಎಂಬ ಸುದ್ದಿ ಜೋರಾಗಿತ್ತು. ಅದರ ಬೆನ್ನ ಹಿಂದೆಯೇ ರಮೇಶ್‌ ಅರವಿಂದ್‌ ಅವರು ಸಹ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದೂ ಸುದ್ದಿಯಾಗಿತ್ತು. ಈಗ ರಘು ಮುಖರ್ಜಿ ಅವರ ಸರದಿ. ಹೌದು, ರಘು ಮುಖರ್ಜಿ ಅವರು “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಅಂದಹಾಗೆ, ರಘು ಮುಖರ್ಜಿ ಅವರು ಈ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ನೆಗೆಟಿವ್‌ ಶೇಡ್‌ನ‌ಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಇಂದಿನಿಂದ (ಫೆ.11) ಚಿತ್ರದ ಚಿತ್ರೀಕರಣ ಶುರುವಾಗಲಿದೆ. ಚಿತ್ರದ ಕೊನೆಯ ಹಂತದ ಚಿತ್ರೀಕರಣ ಇದಾಗಿದ್ದು, 18 ದಿನಗಳ ಕಾಲ ನಡೆದರೆ, ಚಿತ್ರೀಕರಣ ಪೂರ್ಣಗೊಳ್ಳಲಿದೆ. ರಘುಮುಖರ್ಜಿ ಅವರಿಲ್ಲಿ ವಿಂಟೇಜ್‌ ಎಪಿಸೋಡ್‌ನ‌ಲ್ಲಿ ಕಾಣಿಸಿಕೊಳ್ಳುತ್ತಿದ್ದು, ಮೆಟ್ರೋ ಶೈಲಿಯ ದೃಶ್ಯಗಳು ಇರಲಿವೆ.

ನಾಯಕನ ಜೊತೆ ಅವರ ಜುಗಲ್‌ಬಂಧಿ ನಡೆಯಲಿದೆ. ಒಂದು ರೀತಿಯ ನಾನಾ-ನೀನಾ ಎನ್ನುವ ರೀತಿಯ ಪಾತ್ರ ಇಲ್ಲಿರಲಿದೆ. ಇದೇ ಮೊದಲ ಬಾರಿಗೆ ರಘುಮುಖರ್ಜಿ ಅವರು ನೆಗೆಟಿವ್‌ ಶೇಡ್‌ ಪಾತ್ರದಲ್ಲಿ ನಟಿಸುತ್ತಿದ್ದು, ಅವರ ಬಳಿಕ ಕಥೆ ಮತ್ತು ಪಾತ್ರದ ಬಗ್ಗೆ ವಿವರಿಸಿದಾಗ, ಮೊದಲು ಪಾತ್ರ ಮಾಡುವುದಾ, ಬಿಡುವುದಾ ಎಂಬ ಗೊಂದಲದಲ್ಲಿದ್ದರಂತೆ. ಕೊನೆಗೆ, ಪಾತ್ರ ಚೆನ್ನಾಗಿದೆ ಎಂದು ನೆಗೆಟಿವ್‌ ಶೇಡ್‌ ಪಾತ್ರ ಮಾಡ್ತೀನಿ ಅಂತ ಒಪ್ಪಿಕೊಂಡು ಮಾಡುತ್ತಿದ್ದಾರೆ ಎಂಬುದು ನಿರ್ಮಾಪಕ ವಿಖ್ಯಾತ್‌ ಅವರ ಮಾತು.

ಇಷ್ಟಕ್ಕೂ ರಘುಮುಖರ್ಜಿ ಅವರನ್ನೇ ಆ ನೆಗೆಟಿವ್‌ ಶೇಡ್‌ ಪಾತ್ರಕ್ಕೆ ಆಯ್ಕೆ ಮಾಡಿಕೊಳ್ಳಲು ಕಾರಣದ ಬಗ್ಗೆ ವಿವರಿಸುವ, ವಿಖ್ಯಾತ್‌, ರಘುಮುಖರ್ಜಿ ಅವರದು ಬೇಸ್‌ ವಾಯ್ಸ ಇದೆ. ಇದುವರೆಗೆ ಆ ವಾಯ್ಸ ಪಾಸಿಟಿವ್‌ ಪಾತ್ರಗಳಿಗೆ ಸೀಮಿತವಾಗಿತ್ತು. ಆದರೆ, ಈ ಚಿತ್ರದಲ್ಲಿ ನೆಗೆಟಿವ್‌ ಶೇಡ್‌ ಇರುವ ಪಾತ್ರದಲ್ಲಿ ಅವರ ಬೇಸ್‌ ವಾಯ್ಸ ಕೇಳಲಿದೆ. ಇದೊಂದು ರೀತಿಯ ಹೊಸ ಪ್ರಯತ್ನದ ಪಾತ್ರ ಕಟ್ಟಿಕೊಡಲಾಗಿದೆ ಎನ್ನುವ ನಿರ್ಮಾಪಕರು, ಚಿತ್ರ ಕಳೆದ ಎರಡು ತಿಂಗಳ ಹಿಂದೆಯೇ ಮುಗಿಯಬೇಕಿತ್ತು. ಆದರೆ, ಹಲವು ಕಾರಣಗಳಿಂದ ಸಾಧ್ಯವಾಗಲಿಲ್ಲ.

ಈಗ ಕೊನೆಯ ಹಂತದ ಚಿತ್ರೀಕರಣಕ್ಕೆ ಚಾಲನೆ ಸಿಗುತ್ತಿದೆ’ ಎನ್ನುತ್ತಾರೆ ಅವರು. “ಇನ್ಸ್‌ಪೆಕ್ಟರ್‌ ವಿಕ್ರಂ’ ಪ್ರಜ್ವಲ್‌ ದೇವರಾಜ್‌ ಅಭಿನಯದ 30 ನೇ ಸಿನಿಮಾ ಎಂಬುದು ವಿಶೇಷ. ನರಸಿಂಹ ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಪ್ರಜ್ವಲ್‌ ದೇವರಾಜ್‌ ಅವರಿಲ್ಲಿ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತುಂಬಾ ಸ್ಟೈಲಿಶ್‌ ಪಾತ್ರ ಕಟ್ಟಿಕೊಟ್ಟಿರುವ ನಿರ್ದೇಶಕರು, ಕ್ಲಾಸ್‌ ಜೊತೆಗೆ ಮಾಸ್‌ ಎಲಿಮೆಂಟ್ಸ್‌ ಇಟ್ಟುಕೊಂಡು ಈ ಚಿತ್ರವನ್ನು ಮಾಡುತ್ತಿದ್ದಾರೆ. ಇದೊಂದು ಫ‌ನ್‌ ಬೇಸ್ಡ್ ಆ್ಯಕ್ಷನ್‌ ಚಿತ್ರ ಎಂಬುದು ಚಿತ್ರತಂಡದ ಮಾತು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.