ಐಟಿ ಕಂಪೆನಿ ಲೆಡೀಸ್ ಟಾಯ್ಲೆಟ್ನಲ್ಲಿ ಮೊಬೈಲ್!;ಕಾಮುಕ ಅಂದರ್
Team Udayavani, Jun 5, 2017, 4:29 PM IST
ಬೆಂಗಳೂರು: ಇಲ್ಲಿನ ಎಚ್ಎಎಲ್ನ ಐಟಿ ಕಂಪೆನಿಯೊಂದರಲ್ಲಿ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ನಡೆಸುತ್ತಿದ್ದ ವಿಕೃತ ಕಾಮುಕನೊಬ್ಬನನ್ನು ಎಚ್ಎಎಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿ ಮಂಗಳೂರು ಮೂಲದ ಪರಮೇಶ್ವರ(24) ಎಂಬಾತನಾಗಿದ್ದು , ಐಟಿ ಕಂಪೆನಿಯ ಫುಡ್ಕೋರ್ಟ್ನಲ್ಲಿ ಕೆಲಸ ಮಾಡುತ್ತಿದ್ದ.
ಶೌಚಾಲಯಲ್ಲಿ ಮೊಬೈಲ್ ಇಟ್ಟಿರುವುದನ್ನು ಗಮನಿಸಿದ ಮಹಿಳಾ ಟೆಕ್ಕಿ ಕೂಡಲೇ ವಿಷಯವನ್ನು ಮೇಲಧಿಕಾರಿಗಳಿಗೆ ತಿಳಿಸಿದ್ದಳು. ಕೂಡಲೇ ಕಂಪೆನಿಯ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.
ತನಿಖೆಗಿಳಿದ ಪೊಲೀಸರು ಪರಮೇಶ್ವರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮೊಬೈಲ್ನಲ್ಲಿ ಕೆಲ ವಿಡಿಯೋಗಳು ಪತ್ತೆಯಾಗಿವೆ. ಆತ ವಾಸಿಸುತ್ತಿದ್ದ ರೂಮ್ ಕೂಡ ಪರಿಶೀಲನೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ