ಬೀದಿ ನಾಯಿಗಳಿಗೆ ಮೈಕ್ರೋ ಚಿಪ್‌

Team Udayavani, Nov 22, 2017, 11:57 AM IST

street-dogs.jpg

ಬೆಂಗಳೂರು: ಸಂತಾನಹರಣ ಶಸ್ತ್ರಚಿಕಿತ್ಸೆಗೊಳಪಡಿಸಿದ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್‌ ಅಳವಡಿಕೆಗೆ ಬಿಬಿಎಂಪಿ ನಿರ್ಧರಿಸಿದೆ. ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ನಿರಂತವಾಗಿ ನಡೆಯುತ್ತಿದ್ದರೂ ನಗರದಲ್ಲಿ ಅವುಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೊಳಪಟ್ಟ ಬೀದಿನಾಯಿಗಳಿಗೆ ಮೈಕ್ರೋ ಚಿಪ್‌ ಅಳವಡಿಸಲು ಉದ್ದೇಶಿಸಲಾಗಿದೆ.

ಈ ಸಂಬಂಧ ಬಿಬಿಎಂಪಿ ಆರೋಗ್ಯ ಇಲಾಖೆ (ಪ್ರಾಣಿಗಳು ಮತ್ತು ಪಶುಸಂಗೋಪನೆ)ಗೆ ಮೇಯರ್‌ ಆರ್‌. ಸಂಪತ್‌ ರಾಜ್‌ ಸೂಚನೆ ನೀಡಿದರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ ರಾಜರಾಜೇಶ್ವರಿನಗರ ವಲಯದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮೇಯರ್‌, ಸಾಕಷ್ಟು ಕ್ರಮ ಕೈಗೊಂಡಿದ್ದರೂ ನಾಯಿಗಳ ಹಾವಳಿ ಕುರಿತು ದೂರುಗಳು ಕೇಳಿಬರುತ್ತಲೇ ಇವೆ.

ಯಾವ ನಾಯಿಗೆ ಶಸ್ತ್ರಚಿಕಿತ್ಸೆ ಮಾಡಿದೆ ಎಂಬ ನಿಖರ ಮಾಹಿತಿಯೂ ಇಲ್ಲ. ಆದ್ದರಿಂದ ಶಸ್ತ್ರಚಿಕಿತ್ಸೆಗೆ ಒಳಪಡಿಸಿದ ನಾಯಿಗಳಿಗೆ ಮೈಕ್ರೋ ಚಿಪ್‌ ಅಳವಡಿಸಬೇಕು. ಆಗ ಶಸ್ತ್ರಚಿಕಿತ್ಸೆಗೆ ಒಳಗಾಗದ ನಾಯಿಗಳ ಸಂಖ್ಯೆ ಗೊತ್ತಾಗುತ್ತದೆ. ಈ ನಿಟ್ಟಿನಲ್ಲಿ ತಕ್ಷಣ ಕಾರ್ಯೋನ್ಮುಖರಾಗಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ದ್ರವರೂಪ: ಮೈಕ್ರೋಚಿಪ್‌ ದ್ರವ ರೂಪದಲ್ಲಿರುತ್ತದೆ. ಇದನ್ನು ಸಿರೆಂಜ್‌ ಮೂಲಕ ಆ ಪ್ರಾಣಿಗಳ ಕೊರಳಿನ ಮೃದು ಭಾಗಕ್ಕೆ ಕಳುಹಿಸಲಾಗುವುದು. ಈ ಎಲೆಕ್ಟ್ರಾನಿಕ್‌ ಉಪಕರಣದಲ್ಲಿ ವಿಶೇಷ ಗುರುತಿನ ಸಂಖ್ಯೆ ನೀಡಲಾಗಿರುತ್ತದೆ. ಬೆಲೆ 200 ರೂ. ಆಗುತ್ತದೆ. ಈ ಚಿಪ್‌ ಅಳವಡಿಕೆಯಿಂದ ಒಂದೇ ನಾಯಿಗೆ ಒಂದಕ್ಕಿಂತ ಹೆಚ್ಚು ಬಾರಿ ಅನಗತ್ಯವಾಗಿ ಲಸಿಕೆ ಹಾಕುವುದು ತಪ್ಪುತ್ತದೆ. ಎಷ್ಟು ಬೀದಿ ನಾಯಿಗಳಿಗೆ ಲಸಿಕೆ ಹಾಕಲಾಗಿದೆ?

ಎಷ್ಟು ನಾಯಿಗಳನ್ನು ಸಂತಾನಹರಣ ಶಸ್ತ್ರಚಿಕಿತ್ಸೆಗೊಳಪಡಿಸಲಾಗಿದೆ? ಎಂಬುದರ ನಿಖರ ಮಾಹಿತಿ ದೊರೆಯುತ್ತದೆ. ಇದರ ಮುಂದುವರಿದ ಭಾಗವಾಗಿ ಜಿಪಿಎಸ್‌ ಆಧಾರಿತ ಕಾಲರ್‌ ಐಡಿ ಕೂಡ ಇದರೊಂದಿಗೆ ಅಳವಡಿಸಲು ಅವಕಾಶ ಇದೆ. ಇದರಿಂದ ಬೀದಿ ನಾಯಿಗಳ ಚಲನವಲನಗಳ ಬಗ್ಗೆ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು. ಆದರೆ, ಇದರ ಬೆಲೆ ಸಾವಿರ ರೂ. ಆಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. 

ಕೆರೆಗಳ ಮಾಹಿತಿ ಕಡ್ಡಾಯ: ಇದಕ್ಕೂ ಮೊದಲು ಸಭೆಯಲ್ಲಿ ಮಾತನಾಡಿದ ಮೇಯರ್‌, ರಾಜರಾಜೇಶ್ವರಿ ನಗರ ವಲಯದಲ್ಲಿ ಒಟ್ಟು 22 ಕೆರೆಗಳಿದ್ದು, ಪ್ರತಿ ಕೆರೆಗಳ ವಿಸ್ತೀರ್ಣ, ಅವುಗಳ ವಿಶೇಷತೆ, ಖರ್ಚು ಮಾಡಿದ ಅನುದಾನ ಮತ್ತಿತರ ಮಾಹಿತಿಗಳು ನಾಮಫ‌ಲಕದಲ್ಲಿ ಕಡ್ಡಾಯವಾಗಿ ನಮೂದಿಸಬೇಕು. ಕೆರೆಗಳಿಗೆ ವಲಸೆ ಬಂದ ಹಕ್ಕಿಗಳ ವಿವರ ಮತ್ತು ಅವುಗಳ ಪೋಷಣೆ ಮಾಡಬೇಕು. ಕೆರೆಯ ಸುತ್ತ ಸಾರ್ವಜನಿಕರ ವಾಯುವಿಹಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತೆರಿಗೆ ವಸೂಲಿಯಲ್ಲಿ ರಾಜರಾಜೇಶ್ವರಿನಗರದ ಕಂದಾಯ ಅಧಿಕಾರಿಗಳು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಿಲ್ಲ. ಹಾಗಾಗಿ, ರಾಜರಾಜೇಶ್ವರಿನಗರ ವಲಯದಲ್ಲಿ ಹೆಚ್ಚು ತೆರಿಗೆ ವಸೂಲಿಗೆ ಗಮನಹರಿಸಬೇಕು. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ಸಹಾಯಕವಾಗಲಿದೆ. ವಲಯದ ವ್ಯಾಪ್ತಿಯಲ್ಲಿ ನೆಟ್ಟ ಗಿಡಗಳ ಸಂರಕ್ಷಣೆ ಜತೆಗೆ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು. ಉಪ ಮೇಯರ್‌ ಪದ್ಮಾವತಿ ನರಸಿಂಹಮೂರ್ತಿ ಹಾಗೂ ರಾಜರಾಜೇಶ್ವರಿನಗರ ವಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.