ಗುಪ್ತಚರ ದಳಕ್ಕೆ ಪ್ರತ್ಯೇಕ ನೇಮಕಾತಿ

Team Udayavani, Jan 18, 2018, 1:31 PM IST

blore-3.jpg

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯ ಗುಪ್ತಚರ ದಳದ ಕಾರ್ಯವೈಖರಿ ಬಗ್ಗೆ ಆರೋಪಗಳು ಕೇಳಿಬರುತ್ತಿರುವ
ಹಿನ್ನೆಲೆ ಯಲ್ಲಿ ಇದಕ್ಕಾಗಿಯೇ ಪ್ರತ್ಯೇಕ ನೇಮಕಾತಿ ಪ್ರಕ್ರಿಯೆ ನಡೆಸಿ ಅವರಿಗೆ ವಿಶೇಷ ತರಬೇತಿ ನೀಡಲು ರಾಜ್ಯ
ಸರ್ಕಾರ ತೀರ್ಮಾನಿಸಿದೆ.

ಬೆಂಗಳೂರಿನ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ಬುಧವಾರ ನಡೆದ ಹಿರಿಯ ಪೊಲೀಸ್‌ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈಗಾಗಲೇ ನೇಮಕಾತಿ ಪ್ರಕ್ರಿಯೆಯನ್ನೂ ಆರಂಭಿಸಲಾಗಿದೆ ಎಂದಿದ್ದಾರೆ. ಈ ಸಂದರ್ಭದಲ್ಲೇ ರಾಜ್ಯ ಗುಪ್ತಚರ ದಳದಲ್ಲಿ ಬಹಳಷ್ಟು ಲೋಪದೋಷಗಳಿವೆ. ಇದನ್ನು ಸರಿಪಡಿಸಲು ಕೆಲ ಕಟ್ಟುನಿಟ್ಟಿನ ನಿಯಮಗಳನ್ನು ತೆಗೆದುಕೊಂಡಿದ್ದೇವೆ ಎಂದರು. ಗುಪ್ತದಳ ವಿಭಾಗಕ್ಕೆಂದೇ ಪ್ರತ್ಯೇಕ ನೇಮಕಾತಿ ಪ್ರಕ್ರಿಯೆ ನಡೆಸಲು ಆದೇಶಿಸಲಾಗಿದೆ.

ಅದರಂತೆ ಸಂದರ್ಶನ ಪ್ರಕ್ರಿಯೆ ನಡೆಯುತ್ತಿದೆ. ನೇಮಕ ಪ್ರಕ್ರಿಯೆ ವಿಶೇಷವಾಗಿ ನಡೆಯುತ್ತಿದೆ. ನೇಮಕಗೊಂಡ ಸಿಬ್ಬಂದಿಗೆ ಅತ್ಯಾಧುನಿಕ ತರಬೇತಿ ನೀಡಿ ಸಮರ್ಥರನ್ನಾಗಿ ರೂಪಿಸಲಾಗುವುದು ಎಂದು ಹೇಳಿದರು. ಗುಪ್ತಚರ ದಳಕ್ಕೆ ವರ್ಗಾವಣೆ ಎಂದರೆ ಅದೊಂದು ಶಿಕ್ಷೆ ಎಂಬ ಮಾತು ಇಲಾಖೆಯಲ್ಲಿದೆ. ಅಷ್ಟೇ ಅಲ್ಲ, ಕೆಲವೊಮ್ಮೆ ಸಾಮಾನ್ಯ ಪೊಲೀಸ್‌ ವಿಭಾಗದಲ್ಲಿ ಸರಿಯಾಗಿ ಕೆಲಸ ಮಾಡುತ್ತಿಲ್ಲವೆಂಬ ಕಾರಣಕ್ಕೆ ಪೊಲೀಸರನ್ನು ಗುಪ್ತಚರ ವಿಭಾಗಕ್ಕೆ ವರ್ಗಾವಣೆ ಮಾಡುವುದೂ ಇದೆ. ಈ ಸಮಸ್ಯೆ ತಪ್ಪಿಸಿ ಗುಪ್ತಚರ ವಿಭಾಗವನ್ನು ಶಕ್ತಿಯುತವಾಗಿ ರೂಪಿಸಲು ಪ್ರತ್ಯೇಕ ನೇಮಕಾತಿ ನಡೆಸಲಾಗುತ್ತಿದೆ. ಒಮ್ಮೆ ಗುಪ್ತಚರ ದಳಕ್ಕೆ ನೇಮಕಗೊಂಡರೆ ನಿವೃತ್ತಿವರೆಗೆ ಅಲ್ಲೇ ಕಾರ್ಯನಿರ್ವಹಿಸಬೇಕು ಎಂದರು.

ಮಾದಕ ಜಾಲ ಪತ್ತೆಗೆ ಸೂಚನೆ: ಮಾದಕ ವಸ್ತುಗಳ ಮಾರಾಟ ವಿದ್ಯಾರ್ಥಿಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಮಾದಕ ವಸ್ತು ಮಾರಾಟಗಾರರನ್ನು ಬಂಧಿಸುವುದರ ಜತೆಗೆ ಅದು ಎಲ್ಲಿಂದ ಸರಬರಾಜು ಆಗುತ್ತಿದೆ ಎಂಬುದನ್ನು ಪತ್ತೆಹಚ್ಚುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಾದಕ ವಸ್ತುಗಳ ಮಾರಾಟದ ಮೂಲಬೇರು ಪತ್ತೆ ಹಚ್ಚಿ ಕಡಿವಾಣ ಹಾಕುವಂತೆಯೂ ಪೊಲೀಸ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ರಾಜ್ಯದಲ್ಲಿ 2016ಕ್ಕೆ ಹೋಲಿಸಿದರೆ 2017ರಲ್ಲಿ ಅಪರಾಧಗಳ ಸಂಖ್ಯೆ ಕೊಂಚ ಇಳಿಮುಖವಾಗಿದೆ. ರಾಜ್ಯದಲ್ಲಿ ಶೇ.1ರಷ್ಟು, ರಾಷ್ಟ್ರೀಯ ಮಟ್ಟದಲ್ಲಿ ಶೇ.6ರಷ್ಟು ಕಡಿಮೆಯಾಗಿದೆ. ಇನ್ನೂ ಗಣನೀಯವಾಗಿ ಕಡಿಮೆ ಮಾಡಲು ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲ ಮಣಿ ಎನ್‌.ರಾಜು, ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ, ಮುಖ್ಯಮಂತ್ರಿಯರ ಪ್ರಧಾನ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಸೇರಿ ಹಿರಿಯ ಮತ್ತು ಕಿರಿಯ ಐಪಿಎಸ್‌ ಅಧಿಕಾರಿಗಳು ಇದ್ದರು

32 ಸಾವಿರ ಹುದ್ದೆಗಳ ಭರ್ತಿ ಇದೇ ಮೊದಲ ಬಾರಿಗೆ ಭಾರಿ ಪ್ರಮಾಣದಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆದಿದೆ. ಸದ್ಯ ಖಾಲಿ ಇರುವ 42 ಸಾವಿರ ಹುದ್ದೆಗಳ ಪೈಕಿ 32 ಸಾವಿರ ಹುದ್ದೆಗಳನ್ನು ಈಗಾಗಲೇ ತುಂಬಲಾಗಿದೆ. 2,272 ಕೋಟಿ ರೂ.ವೆಚ್ಚದಲ್ಲಿ ಸಿಬ್ಬಂದಿ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ. ಜತೆಗೆ 12 ಸಾವಿರ ಮಂದಿಗೆ ಏಕ ಕಾಲದಲ್ಲಿ ಬಡ್ತಿ ನೀಡಲಾಗಿದೆ. ಇಂತಹ ಕಾರ್ಯ ಈ ಹಿಂದೆ ನಡೆದಿರಲಿಲ್ಲ. ಪೊಲೀಸರು, ವೈದ್ಯರು ಹಾಗೂ ಶಿಕ್ಷಕರ ನೇಮಕ ವಿಚಾರದಲ್ಲಿ ಆರ್ಥಿಕ ಮಿತಿ ನಿರ್ಬಂಧ ಹೇರದಂತೆ ಸೂಚನೆಯನ್ನು ಕೂಡ ಕೊಟ್ಟಿದ್ದೇನೆ ಎಂದು ಇದೇ ವೇಳೆ ಸಿಎಂ ಹೇಳಿದರು.

ಇತ್ತೀಚೆಗೆ ಭೂಗತ ಪಾತಕಿ ರವಿಪೂಜಾರಿ ಹೆಸರಿನಲ್ಲಿ ಉದ್ಯಮಿಗಳು, ಶಾಸಕರು ಹಾಗೂ ಸಚಿವರಿಗೆ ಬರುತ್ತಿರುವ ಕರೆಗಳ ಕುರಿತು ತನಿಖೆ ನಡೆಸಲು ಸೂಚಿಸಲಾಗಿದೆ. ಸರ್ಕಾರ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಬೆದರಿಕೆ ಕರೆ ಮಾಡುವವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು.  
ಸಿದ್ದರಾಮಯ್ಯ, ಮುಖ್ಯಮಂತ್ರಿ 

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.