ಅಸಮತೋಲನವೇ ಸಮಸ್ಯೆಗಳ ಮೂಲ

Team Udayavani, Feb 25, 2018, 11:49 AM IST

asamatolana.jpg

ಬೆಂಗಳೂರು: “ಫೇಸ್‌ಬುಕ್‌ನಲ್ಲಿ ಸಾವಿರಾರು ಸ್ನೇಹಿತರಿದ್ದರೂ ಹಿಂದೆಂದಿಗಿಂತ ಹೆಚ್ಚು ಏಕಾಂಗಿತನ. ಲಕ್ಷಗಟ್ಟಲೆ ಗಳಿಸುತ್ತಿದ್ದರೂ ನೆಮ್ಮದಿ ಇಲ್ಲದ ಬದುಕು. ಮನೆ ಹಿಂದಿನ ಬೇವಿನ ಮರ ಮರೆಯಾಗಿದ್ದರೂ, ನಮ್ಮ ನಡೆ-ನುಡಿಗಳಲ್ಲಿ ಉಳಿದ ಬೇವಿನೆಲೆಯ ಕಹಿ. ಈ ಅಸಮತೋಲನಗಳೇ ಸಮಾಜದ ಈಗಿನ ಎಲ್ಲ ಸಮಸ್ಯೆಗಳ ಮೂಲ,’ ಎಂದು ಸದ್ಗುರು ಮಾತಾ ಅಮೃತಾನಂದಮಯಿ ಅಭಿಪ್ರಾಯಪಟ್ಟರು.  

ಉಲ್ಲಾಳ ಉಪನಗರದ ಜ್ಞಾನಭಾರತಿ ಆಶ್ರಮದಲ್ಲಿರುವ ಬ್ರಹ್ಮಸ್ಥಾನಂ ವಾರ್ಷಿಕೋತ್ಸವದಲ್ಲಿ ಶನಿವಾರ ಪಾಲ್ಗೊಂಡು ಮಾತನಾಡಿದ ಅವರು, ಸ್ವಾರ್ಥ ಮತ್ತು ಬ್ಯುಸಿನೆಸ್‌ಗಳೇ ಇಂದು ಬಹುಮುಖ್ಯ ಮೌಲ್ಯಗಳಾಗಿವೆ. ಪ್ರಪಂಚದಾದ್ಯಂತ ಇದಕ್ಕೆ ಬೇಡಿಕೆ ಬಂದಿದೆ. ಮನೆಗಳಲ್ಲೂ ಇವುಗಳನ್ನು ಪೋಷಿಸುವ ವಾತಾವರಣ ನಿರ್ಮಾಣವಾಗಿದೆ. ಇಡೀ ಸಮಾಜವೇ ಇದರ ಹಿಡಿತದಲ್ಲಿ ಸಿಲುಕಿರುವುದರಿಂದ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. 

ಲಕ್ಷಾಂತರ ರೂ. ಗಳಿಸುತ್ತಿದ್ದರೂ ಬದುಕಿನಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಭಯೋತ್ಪಾದನೆ, ಕೊಲೆ, ಮತ-ರಾಜಕೀಯ ಹೆಸರಿನಲ್ಲಿ ನಡೆಯುವ ಹಿಂಸಾಚಾರಗಳಲ್ಲಿ ಸಮಾಜ ನಲುಗಿದೆ. ಆದರೆ, ನಿಜವಾದ ಸಂತೋಷ ಅಂತರಂಗದಿಂದ ಬರುವುದು. ಹಾಗೂ ಅದು ಮಾತ್ರ ಶಾಶ್ವತವಾಗಿರುತ್ತದೆ ಎಂದರು. 

ಮುಖವಾಡದ ಬದುಕು: ಪ್ರಸ್ತುತ ಬರೀ ಮುಖವಾಡ ತೊಟ್ಟ ಜನರೇ ನಮ್ಮ ಮಧ್ಯೆ ಇದ್ದಾರೆ. ದೈಹಿಕ ಆರೋಗ್ಯಕ್ಕೆ ಕೊಡುವ ಪ್ರಾಮುಖ್ಯತೆ ಮಾನಸಿಕ ಆರೋಗ್ಯಕ್ಕೆ ಸಿಗುತ್ತಿಲ್ಲ. ಹಾಗಾಗಿ, ಒಂದೇ ಕುಟುಂಬದಲ್ಲಿದ್ದೂ ಪರಸ್ಪರ ನಂಬಲಾರದ ಸ್ಥಿತಿಯಲ್ಲಿ ನಾವಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಮಾತಾ ಅಮೃತಾನಂದಮಯಿ, ಜಗತ್ತಿನ ಎಲ್ಲ ಚರಾಚರಗಳಿಗೆ ಎರಡೆರಡು ಭಾವಗಳಿವೆ. ಹೊರಗೊಂದು ಮತ್ತು ಒಳಗೊಂದು. ಇವೆರಡೂ ಮೇಳೈಸಿದಾಗ ಬದುಕು ಪರಿಪೂರ್ಣವಾಗುತ್ತದೆ. ಈ ಪರಿಪೂರ್ಣತೆಯತ್ತ ಸಮಾಜ ಸಾಗಬೇಕಿದೆ ಎಂದು ಅಮೃತಾನಂದಮಯಿ ಸಲಹೆ ಮಾಡಿದರು. 

ಮನೋದೌರ್ಬಲ್ಯದ ನಿವಾರಣಾ ಶಕ್ತಿ ನಮ್ಮೊಳಗೇ ಇರುತ್ತದೆ. ಅದು ಸದಾ ಜಾಗೃತವಾಗಿರುವಂತೆ ನೋಡಿಕೊಳ್ಳಬೇಕು ಎಂದ ಅವರು, ವ್ಯಕ್ತಿ ಸ್ವಾತಂತ್ರ್ಯ ಮುಖ್ಯ. ಆದರೆ, ಅದಕ್ಕಿಂತ ಮಿಗಿಲಾದುದು ಕುಟುಂಬ. ಇಡೀ ವಿಶ್ವವೇ ಒಂದು ಕುಟುಂಬವಾಗಿರುವುದರಿಂದ ವ್ಯಕ್ತಿಗಿಂತ ಸಮಾಜ ಮುಖ್ಯವಾಗುತ್ತದೆ. ಈ ದೃಷ್ಟಿಕೋನದಲ್ಲಿ ನಮ್ಮ ಆಲೋಚನೆಗಳಿರಬೇಕು. ನಮ್ಮ ಸ್ವಾತಂತ್ರ್ಯ ಮತ್ತೂಬ್ಬರ ಹಿತಕ್ಕೆ ಧಕ್ಕೆ ತರುವಂತಿರಬಾರದು ಎಂದು ಸೂಚ್ಯವಾಗಿ ಹೇಳಿದರು. 

ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಭಾಶ್ಚಂದ್ರ ಕುಂಟಿಯಾ ಮಾತನಾಡಿ, ಕೊಪ್ಪಳ, ಬೀದರ್‌ನಲ್ಲಿ ನೆರೆ ಉಂಟಾದಾಗ ನಿರಾಶ್ರಿತರಿಗೆ ಸಾವಿರಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿ, ಆಶ್ರಯ ನೀಡಿದರು. ಗಂಗಾ ಕಲುಷಿತಗೊಂಡಾಗ ಪುನಶ್ಚೇತನದ ಕಾರ್ಯಕ್ರಮದಲ್ಲಿ ಸುತ್ತಲಿನ ನಿವಾಸಿಗಳಿಗೆ ಶೌಚಾಲಯಗಳು, ಅಲ್ಲಿನ ಮಕ್ಕಳಿಗೆ ಶಾಲೆಗಳ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳನ್ನು ರೂಪಿಸುವ ಮೂಲಕ ಸಮಾಜಕ್ಕೆ ನಿಜವಾಗಿಯೂ “ಅಮ್ಮ’ ಆಗಿದ್ದಾರೆ ಎಂದು ಸ್ಮರಿಸಿದರು.  ನಟಿ ನಂದಿನಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.