ಇಬ್ಬರು ಗಾಂಜಾ ಮಾರಾಟಗಾರರ ಸೆರೆ
Team Udayavani, Mar 1, 2018, 11:20 AM IST
ಬೆಂಗಳೂರು: ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ವಿವಿಪುರಂ ಪೊಲೀಸರು ಬಂಧಿಸಿದ್ದಾರೆ.
ಹೊಸಕೋಟೆ ತಾಲೂಕಿನ ಮಸ್ತಾನ್ ಖಾನ್(29) ಮತ್ತು ಮಂಜುನಾಥ್(26) ಬಂಧಿತರು. ಆರೋಪಿಗಳು ಸಣ್ಣ-ಸಣ್ಣ ಪ್ಯಾಕೆಟ್ಗಳ ಮೂಲಕ ಮಾದಕ ವಸ್ತು ಗಾಂಜಾವನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಇತ್ತೀಚೆಗೆ ಜೈನ್ ಟೆಂಪಲ್ ರಸ್ತೆಯಲ್ಲಿರುವ ಬಿಎಂಎಸ್ ಕಾನೂನು ಕಾಲೇಜು ಹಿಂಭಾಗದಲ್ಲಿ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಕೂಡಲೇ ದಾಳಿ ನಡೆಸಿ ಮಾಲು ಸಮೇತ ಬಂಧಿಸಲಾಗಿದೆ.
ಆರೋಪಿಗಳ ಮಾಹಿತಿ ಮೇರೆಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ದಾಸರಹಳ್ಳಿಯ ಡಿಫೆನ್ಸ್ ಕಾಲೋನಿಯಲ್ಲಿ ನೆಲೆಸಿರುವ ಮುಬಾರಕ್ ಮನೆ ಮೇಲೂ ದಾಳಿ ನಡೆಸಿ,ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ