CONNECT WITH US  

26, 27 ರಾಹುಲ್ ರಾಜ್ಯ ಪ್ರವಾಸ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಏಪ್ರಿಲ್ 26 ಮತ್ತು 27 ರಂದು ಎರಡು ದಿನ ರಾಜ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ. ರಾಹುಲ್‌ಗಾಂಧಿಯವರು ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ನಂತರ ಮೇ 2 ಮತ್ತು 3 ರಂದು ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳುವ ಅವರು ಮೇ 5 ರಿಂದ ಚುನಾವಣೆಗೆ ಬಹಿರಂಗ ಪ್ರಚಾರ ಮುಕ್ತಾಯವಾಗುವವರೆಗೂ ರಾಜ್ಯದಲ್ಲಿಯೇ ವಾಸ್ತವ್ಯ ಹೂಡಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
 

Trending videos

Back to Top