ಪಕ್ಷಾಂತರ ಮಾಡಿದ ಎಂ.ಶ್ರೀನಿವಾಸ್‌ ನನ್ನ ಗುರುವಲ್ಲ

Team Udayavani, Apr 24, 2018, 3:46 PM IST

pakshantara.jpg

ಬೆಂಗಳೂರು: ಒಂಬತ್ತು ಬಾರಿ ಪಕ್ಷಾಂತರ ಮಾಡಿರುವ ಎಂ.ಶ್ರೀನಿವಾಸ್‌ ನನ್ನ ಗುರುವಲ್ಲ. ಬಿಜೆಪಿ ನನಗೆ ಗುರು ಎಂದು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಹೇಳಿದರು.

ನಗರದಲ್ಲಿ ಸೋಮವಾರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಪದ್ಮನಾಭನಗರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಎಂ.ಶ್ರೀನಿವಾಸ್‌ ಸ್ಪರ್ಧೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 10ನೇ ವರ್ಷ ವಯಸ್ಸಿನಿಂದ ನಾನು ಬಿಜೆಪಿಯಲ್ಲಿದ್ದು, ಶ್ರೀನಿವಾಸ್‌ ಅವರು ನಮ್ಮ ಪಕ್ಷಕ್ಕೆ ಬಂದು ಹೋಗಿದ್ದಾರೆ.

ಶ್ರೀನಿವಾಸ್‌ ಅವರು ನಾಲ್ಕು ಬಾರಿ ಬಿಜೆಪಿಗೆ ಬಂದು ಹೋಗಿದ್ದಾರೆ. ಮೂರು ಬಾರಿ ಜೆಡಿಎಸ್‌ಗೆ ಹೋಗಿ ಬಂದಿದ್ದಾರೆ. ಎರಡನೇ ಬಾರಿ ಕಾಂಗ್ರೆಸ್‌ ಸೇರಿದ್ದಾರೆ. ಒಂಬತ್ತು ಬಾರಿ ಪಕ್ಷಾಂತರ ಮಾಡಿರುವ ಶ್ರೀನಿವಾಸ್‌ ನನ್ನ ಗುರು ಎಂಬ ಪ್ರಶ್ನೆಯೇ ಇಲ್ಲ ಎಂದು ಮಾರ್ಮಿಕವಾಗಿ ನುಡಿದರು.

2004ರಲ್ಲೇ ಉತ್ತರಹಳ್ಳಿ ಕ್ಷೇತ್ರದಲ್ಲಿ ಶ್ರೀನಿವಾಸ್‌ ನನ್ನ ವಿರುದ್ಧ ಸ್ಫರ್ಧಿಸಿದ್ದರು. ನಾನು ಆಗ ಭಾರಿ ಮತಗಳ ಅಂತರದಿಂದ ಗೆದ್ದಿದೆ. ಐದು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ಮಂದಿ ಬಂದು ಹೋಗಿದ್ದಾರೆ.

ಹಲವರು ಠೇವಣಿ ಕಳೆದುಕೊಂಡಿದ್ದಾರೆ. ಪದ್ಮನಾಭನಗರ ಬಿಜೆಪಿ ಭದ್ರಕೋಟೆ. ಕ್ಷೇತ್ರ ಬಿಜೆಪಿ ಪರವಾಗಿದ್ದು, ಮುಂದೆಯೂ ಪಕ್ಷದ ಪರವಾಗಿರಲಿದೆ ಎಂದು ಹೇಳಿದರು. ಕೇಂದ್ರ ಸಚಿವ ಅನಂತಕುಮಾರ್‌, ಎಂ.ಶ್ರೀನಿವಾಸ್‌ ಅವರಿಗೆ ಗುರುವೂ ಇಲ್ಲ. ಗುರಿಯೂ ಇಲ್ಲ ಎಂದು ಹೇಳಿದರು. 

ಪಕ್ಷ ಸೇರ್ಪಡೆ: ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಡಾ.ಅಪ್ಪಾಜಿಗೌಡ, ಮಾಜಿ ಸಚಿವ ದಿವಂಗತ ಎಸ್‌.ರಮೇಶ್‌ ಪುತ್ರ ಪವನ್‌, ಅಗ್ರಹಾರ ದಾಸರಹಳ್ಳಿಯ ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಮೇಶ್‌, ಗೋವಿಂದರಾಜನಗರ ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಮಣ್ಣ ಸೋಮವಾರ ಬಿಜೆಪಿ ಸೇರ್ಪಡೆಯಾದರು.

ಕೇಂದ್ರ ಸಚಿವ ಅನಂತಕುಮಾರ್‌, ಮಾಜಿ ಸಚಿವ ವಿ.ಸೋಮಣ್ಣ ಅವರು ಮುಖಂಡರನ್ನು ಪಕ್ಷಕ್ಕೆ ಬರ ಮಾಡಿಕೊಂಡರು. ಬಳಿಕ ಮಾತನಾಡಿದ ಆರ್‌.ಅಶೋಕ, ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಪೂರಕವಾದ ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸಲಾಗುತ್ತಿದ್ದು, ಮೂರ್‍ನಾಲ್ಕು ದಿನದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಹೇಡಿತನದ ಪ್ರದರ್ಶನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದ ಜತೆಗೆ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುತ್ತಿರುವುದು ಹೇಡಿತನದ ಪ್ರದರ್ಶನ. ತವರು ಜಿಲ್ಲೆಯಲ್ಲೇ ತಮಗೆ ಬೆಂಬಲವಿಲ್ಲ ಎಂಬುದನ್ನು ತೋರಿಸಿಕೊಳ್ಳುವ ಮೂಲಕ ನಗೆಪಾಟಿಲಿನ ಸ್ಥಿತಿಗೆ ತಲುಪಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಕಾಂಗ್ರೆಸ್‌ ಮುಕ್ತವಾಗಲು ಮುಖ್ಯಮಂತ್ರಿ ನಾಂದಿ ಹಾಡಿದ್ದಾರೆ ಎಂದು ಆರ್‌.ಅಶೋಕ ಮಾರ್ಮಿಕವಾಗಿ ನುಡಿದರು.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.