ನಗರದ ಹಲವೆಡೆ ಅಮಾಯಕರ ಥಳಿತ


Team Udayavani, May 26, 2018, 11:52 AM IST

nagarada.jpg

ಬೆಂಗಳೂರು: ರಾಜ್ಯದ ಗ್ರಾಮಾಂತರ ಪ್ರದೇಶ ಮಾತ್ರವಲ್ಲದೆ ರಾಜಧಾನಿಯಲ್ಲೂ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿ ದಟ್ಟವಾಗಿ ಹಬ್ಬಿದ್ದು, ಕಳೆದ ಕೆಲ ದಿನಗಳಲ್ಲಿ ಶಿವಾಜಿನಗರ, ವಿದ್ಯಾರಣ್ಯಪುರ, ಕಾಟನ್‌ಪೇಟೆ, ವೈಟ್‌ಫೀಲ್ಡ್‌, ಪುಲಿಕೇಶಿನಗರ ಸೇರಿದಂತೆ ನಗರದ ವಿವಿಧೆಡೆ ಮಕ್ಕಳ ಕಳ್ಳರೆಂದು ಭಾವಿಸಿ ನೆರೆ ರಾಜ್ಯದವರು, ಭಿಕ್ಷುಕರನ್ನು ಥಳಿಸಿರುವ ಘಟನೆಗಳು ವರದಿಯಾಗಿವೆ.

ಚಾಮರಾಜಪೇಟೆಯಲ್ಲಿ ರಾಜಸ್ಥಾನ ಮೂಲದ ಅಮಾಯಕನನ್ನು ಹಿಡಿದು ಕೊಲೆಗೈದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕೆಲವೆಡೆ ಗಡ್ಡ ಮೀಸೆ ಬಿಟ್ಟು ಓಡಾಡುವ ಕೂಲಿ ಕಾರ್ಮಿಕರು, ಭಿಕ್ಷುಕರನ್ನು, ಹರಿದ ಬಟ್ಟೆ ಧರಿಸಿ ಓಡಾಡುವ ಮಹಿಳೆಯರನ್ನು ಸಾರ್ವಜನಿಕರು ಕೂಡಲೇ ಹಿಡಿದು ಪೊಲೀಸರಿಗೊಪ್ಪಿಸುತ್ತಿದ್ದಾರೆ. ಅಲ್ಲದೆ, ಅಲ್ಲಲ್ಲಿ ನೂರಾರು ಮಂದಿ ಸೇರಿ ಆತಂಕದ ವಾತಾವರಣ ಸೃಷ್ಟಿಸುತ್ತಿದ್ದಾರೆ.

ಗುರುವಾರ ಮತ್ತು ಶುಕ್ರವಾರ ಶಿವಾಜಿನಗರ, ವಿದ್ಯಾರಣ್ಯಪುರ, ಕಾಟನ್‌ಪೇಟೆ, ವೈಟ್‌ಫೀಲ್ಡ್‌, ಪುಲಿಕೇಶಿನಗರ ಸೇರಿದಂತೆ ನಗರದ ವಿವಿಧೆಡೆ ಮಕ್ಕಳ ಕಳ್ಳರೆಂದು ಭಾವಿಸಿ 15ಕ್ಕೂ ಅಧಿಕ ಮಂದಿ ಅಮಾಯಕರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದ್ದಾರೆ. ಈ ಸಂಬಂಧ 20 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರಣ್ಯಪುರದಲ್ಲಿ ಓಡಾಡುತ್ತಿದ್ದ ಆಂಧ್ರ ಪ್ರದೇಶ ಮೂಲದ ಮೂವರು ಮಹಿಳೆಯರನ್ನು ಮಕ್ಕಳ ಕಳ್ಳರೆಂದು ಭಾವಿಸಿದ ಸ್ಥಳೀಯರು ಕೂಡಿ ಹಾಕಿದ್ದರು. ಕೂಲಿ ಕೆಲಸ ಮಾಡುವ ಸುಮಾರು 30 ವರ್ಷದ ಮೂವರು ಮಹಿಳೆಯರು ವಿದ್ಯಾರಣ್ಯಪುರದ ವಡೇರಹಳ್ಳಿ ಸರ್ಕಾರಿ ಶಾಲೆ ಬಳಿ ಓಡಾಡುತ್ತಿದ್ದರು. ಇವರನ್ನು ಕಂಡು ಅನುಮಾನಗೊಂಡ ಸ್ಥಳೀಯರು ಮಹಿಳೆಯರನ್ನು ಹಿಡಿದು ವಿಚಾರಣೆ ನಡೆಸಿದ್ದಾರೆ. ಬಳಿಕ ಪೊಲೀಸರಿಗೊಪ್ಪಿಸಿದ್ದಾರೆ. ವಿಚಾರಣೆ ನಡೆಸಿದ ಪೊಲೀಸರು ಮಕ್ಕಳು ಕಳ್ಳರಲ್ಲ ಎಂದು ವಾಪಸ್‌ ಕಳುಹಿಸಿದ್ದಾರೆ.

ಮೂವರು ಮೂರು ವರ್ಷಗಳ ಹಿಂದೆ ನಗರಕ್ಕೆ ಬಂದು ಮಹದೇವಪುರದಲ್ಲಿ ವಾಸಿಸುತ್ತಿದ್ದು, ಮನೆ ಕೆಲಸಕ್ಕೆ ಹೋಗುತ್ತಾರೆ. ಇವರ ಗಂಡಂದಿರು ಕಟ್ಟಡ ಸೆಂಟ್ರಿಂಗ್‌ ಕೆಲಸ ಮಾಡುತ್ತಾರೆ. ಇವರ ಉಡುಗೆ-ತೊಡುಗೆ ನೋಡಿ ಮಕ್ಕಳ ಕಳ್ಳರೆಂದು ಭಾವಿಸಿ ಠಾಣೆಗೆ ಕರೆತಂದಿದ್ದರು. ವಿಚಾರಣೆ ನಡೆಸಿ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಗುರುವಾರ ಮಧ್ಯಾಹ್ನ ವೈಟ್‌ಫೀಲ್ಡ್‌ ಠಾಣಾ ವ್ಯಾಪ್ತಿಯ ವಿಜಯನಗರ ಗುಟ್ಟೆಯಲ್ಲಿ 3 ಜನ ಹೆಣ್ಣು ಮಕ್ಕಳನ್ನು ಸಾರ್ವಜನಿಕರು ಕೂಡಿ ಹಾಕಿದ್ದರು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು ಮಹಿಳೆಯರನ್ನು ರಕ್ಷಿಸಿದ್ದಾರೆ. ಮಹಿಳೆಯರು ಹೂಡಿಯವರಾಗಿದ್ದು, ಹೌಸ್‌ ಕೀಪಿಂಗ್‌ ಕೆಲಸ ಮಾಡುತ್ತಾರೆ. ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಶಿವಾಜಿನಗರದಲ್ಲಿ ಉತ್ತರ ಭಾರತ ಮೂಲದ 26 ವರ್ಷದ ಕೂಲಿ ಕಾರ್ಮಿಕನನ್ನು ಹಿಡಿದು ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ. ಗಾಯಗೊಂಡಿದ್ದ ಈತನನ್ನು ಪೊಲೀಸರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಆತನನ್ನು ವಿಚಾರಿಸಿದಾಗ ಕೂಲಿ ಕೆಲಸ ಮುಗಿಸಿಕೊಂಡು ದಂಡು ರೈಲ್ವೆ ನಿಲ್ದಾಣ ಮಾರ್ಗದಲ್ಲಿ ನಡೆದು ಬರುತ್ತಿದ್ದು, ಏಕಾಏಕಿ ನಾಲ್ಕೈದು ಮಂದಿ ಮಕ್ಕಳ ಕಳ್ಳ ಎಂದು ಥಳಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಪುಲಿಕೇಶಿನಗರದ ಫ್ರೆಜರ್‌ಟೌನ್‌ನಲ್ಲಿ ನೇಪಾಳ ಮೂಲದ ದಂಪತಿ ಹಾಗೂ ಯುವತಿಯೊಬ್ಬರ ಮೇಲೆ ಇದೇ ಕಾರಣಕ್ಕೆ ಸಾರ್ವಜನಿಕರು ಹಲ್ಲೆ ನಡೆಸಿದ್ದರು. ಕೂಡಲೇ ಹೊಯ್ಸಳ ಪೊಲೀಸರು ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಭಾರತೀನಗರದಲ್ಲಿ ಕೂಲಿ ಕೆಲಸ ಮಾಡಿ ಮನೆಗೆ ಹೋಗುತ್ತಿದ್ದ ನಾಲ್ವರ ಮೇಲೆ ಸಾರ್ವಜನಿಕರು ಹಲ್ಲೆ ಮಾಡಿದ್ದು, ಪ್ರಕರಣ ದಾಖಲಾಗಿದೆ.

ಕಾಟನ್‌ಪೇಟೆಯಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಕ್ಕಳ ಕಳ್ಳರೆಂದು ಹಲ್ಲೆ ನಡೆಸಿದ ನಾಲ್ವರನ್ನು ಬಂಧಿಸಿದ್ದಾರೆ. ರಾಜಕುಮಾರ್‌ ಹಾಗೂ ಈತನ ಸ್ನೇಹಿತನನ್ನು ಹಿಡಿದು ಮಕ್ಕಳ ಕಳ್ಳರೆಂದು ಹಲ್ಲೆ ನಡೆಸಿದ್ದರು. ಈ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿ ಇಬ್ಬರನ್ನು ರಕ್ಷಿಸಿ, ಹಲ್ಲೆ ನಡೆಸಿದ ನಾಲ್ವರನ್ನು ಬಂಧಿಸಿದ್ದಾರೆ.

ಕಾಲುರಾಮ್‌ ಮೃತದೇಹ ಹಸ್ತಾಂತರ: ಚಾಮರಾಜಪೇಟೆಯಲ್ಲಿ ಸಾರ್ವಜನಿಕರ ಥಳಿತಕ್ಕೆ ಬಲಿಯಾದ ಕಾಲುರಾಮ್‌ ಮೃತದೇಹವನ್ನು ಆತನ ದೊಡ್ಡಪ್ಪನ ಪುತ್ರ ಮದನ್‌ಲಾಲ್‌ಗೆ ಶುಕ್ರವಾರ ಹಸ್ತಾಂತರಿಸಲಾಯಿತು. ಬೆಂಗಳೂರಿನಲ್ಲಿ ವಾಸವಿರುವ ರಾಜಸ್ಥಾನ ಮೂಲದ ವ್ಯಕ್ತಿಗಳೆಲ್ಲಾ ಸೇರಿ ವಿಶೇಷ ವಿಮಾನದ ಮೂಲದ ಕಾಲುರಾಮ್‌ ಮೃತದೇಹವನ್ನು ರವಾನಿಸಲು ಸಹಾಯ ಮಾಡಿದ್ದಾರೆ. ಪುಣೆಯಲ್ಲಿ ಟೈಲ್ಸ್‌ ಕಾರ್ಖಾನೆಯಲ್ಲಿ ಕೆಲಸಕ್ಕಿದ್ದ ಕಾಲುರಾಮ್‌, ಎರಡು ತಿಂಗಳ ಹಿಂದಷ್ಟೇ ಟೈಲ್ಸ್‌ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆ ನಡೆಸಿದರೆ ಜೋಕೆ!: “ರಾಜ್ಯಾದ್ಯಂತ ಹಬ್ಬಿರುವ ಮಕ್ಕಳ ಕಳ್ಳರ ವದಂತಿ ಶುದ್ಧ ಸುಳ್ಳು. ಅಮಾಯಕರ ಮೇಲೆ ಹಲ್ಲೆ ನಡೆಸಬೇಡಿ. ಒಂದು ವೇಳೆ ಅಂತಹ ವ್ಯಕ್ತಿಗಳು ಪತ್ತೆಯಾದರೆ ಕೂಡಲೇ ಹತ್ತಿರದ ಠಾಣೆಗೆ ಮಾಹಿತಿ ನೀಡಿ,’ ಎಂದು ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಿಮ್ಮ ಮೊಬೈಲ್‌ಗೆ ನಕಲಿ ವಿಡಿಯೋ, ಫೋಟೋಗಳು ಬಂದರೆ, ಬೇರೆಯವರಿಗೆ ಕಳಿಸದೆ ಡಿಲೀಟ್‌ ಮಾಡಿ. ಒಂದು ವೇಳೆ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಜರುಗಿಸಲಾಗುವುದು,’ ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.