ಬಾಲಕ ಮೋಸ ಮಾಡಿದಕಾರಣಕ್ಕೆ ಯುವತಿ ಆತ್ಮಹತ್ಯೆ

Team Udayavani, Jun 28, 2018, 3:28 PM IST

suicide10.jpg

ಬೆಂಗಳೂರು: ತನಗಿಂತ ಚಿಕ್ಕ ವಯಸ್ಸಿನ ಅಪ್ರಾಪ್ತನನ್ನು ಪ್ರೀತಿಸಿ, ಆತ ಮೋಸ ಮಾಡಿದ ಎಂಬ ಕಾರಣಕ್ಕೆ ಬೇಸರಗೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಶವಂತ ಪುರ
ಸುಬೇದಾರ್‌ ಪಾಳ್ಯದ ತ್ರೀವೇಣಿ ರಸ್ತೆಯಲ್ಲಿ ಮಂಗಳವಾರ ನಡೆದಿದೆ.

ಸುಬೇದಾರ್‌ ಪಾಳ್ಯ ನಿವಾಸಿ ಅಮೃತಾ (19) (ಹೆಸರು ಬದಲಿಸಲಾಗಿದೆ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈ ಸಂಬಂಧ 17 ವರ್ಷದ ಬಾಲಕನನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಬಾಲಕ ಮತ್ತು ಅಮೃತಾ ಕಳೆದೊಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು. ಇದರಿಂದ ಬೇಸತ್ತ ಅಮೃತಾ, ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮನೆ ಮಹ ಡಿಗೆ ಹೋಗಿ ವಿಷ
ಸೇವಿಸಿದ್ದಾಳೆ. ಮಹಡಿ ಮೇಲೆ ಅರೆಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದ ಪುತ್ರಿಯನ್ನು ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫ‌ಲಿಸದೆ ಬುಧವಾರ ಬೆಳಗ್ಗೆ 5 ಗಂಟೆಗೆ ಅಮೃತಾ ಮೃತಪಟ್ಟಿ ರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಗರದ ಹೊರವಲಯದ ನೆಲಗೆದರನ ಹಳ್ಳಿ ಮೂಲದ ಬಾಲಕ, ಮೊದಲ ವರ್ಷದ ಡಿಪ್ಲೊಮಾ ಓದುತ್ತಿದ್ದಾನೆ. ಒಂದು ವರ್ಷದ ಹಿಂದೆ ಆತನಿಗೆ ಅಮೃತಾಳ ಪರಿಚಯ ವಾಗಿದ್ದು, ಪರಿಚಯ ಪ್ರೀತಿಗೆ ತಿರುಗಿತ್ತು. ಈ ವಿಚಾರ ಗೊತ್ತಾದ ಇಬ್ಬರ ಪೋಷಕರೂ ಮಕ್ಕಳನ್ನು ಕರೆಸಿ ವಿದ್ಯಾಭ್ಯಾಸ ಮುಗಿದ ಬಳಿಕ ಮದುವೆ ಮಾಡಿಸುವುದಾಗಿ ಹೇಳಿದ್ದರು. 

ಕಳೆದ ಶನಿವಾರ ಅಮೃತಾಳನ್ನು ತನ್ನ ಸಹೋದರಿ ಮನೆಗೆ ಕರೆದೊಯ್ದಿದ್ದ ಬಾಲಕ, ಆಕೆಯ ಮೈ-ಕೈ ಮುಟ್ಟಿದ್ದ. ಇದನ್ನು ವಿರೋಧಿಸಿದ ಅಮೃತಾ ತಕ್ಷಣ ಮನೆಗೆ ವಾಪಸಾಗಿದ್ದಳು. ಮಾರನೇ ದಿನ ಅಮೃತಾ, ಬಾಲಕನಿಗೆ ಕರೆ ಮಾಡಿದಾಗ ಆತ ಪ್ರತಿಕ್ರಿಯಿಸದ ಕಾರಣ ಆಕೆ ಬೇಸರಗೊಂಡಿದ್ದಳು ಎನ್ನಲಾಗಿದೆ.

ಈ ನಡುವೆ ಮಂಗಳವಾರ ಬೆಳಗ್ಗೆ ಅಮೃತಾಗೆ ಕರೆ ಮಾಡಿದ ಬಾಲಕ, “ನೀನು ನನಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ನಾನು ಹೇಳಿದಂತೆ ಕೇಳುತ್ತಿಲ್ಲ. ನಿನ್ನನ್ನು ಮದುವೆ ಯಾಗಲು ಸಾಧ್ಯವಿಲ್ಲ. ನೀನು ನನ್ನೊಂದಿಗೆ ಮಾತನಾಡಬೇಡ. ನಾನು ಬೇರೆ ಯುವತಿ ಜತೆ ವಿವಾಹವಾಗುತ್ತೇನೆ’ ಎಂದು ಹೇಳಿದ್ದಲ್ಲದೆ, ಅವಾಚ್ಯವಾಗಿ ನಿಂದಿಸಿದ್ದಾನೆ. ಇದ ರಿಂದ ಮನನೊಂದ ಅಮೃತಾ ಗಿಡಕ್ಕೆ ಸಿಂಪಡಿ ಸುವ ಔಷಧ ಕುಡಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾಳೆ. ಅಮೃತಾ ಪೋಷಕರು ನೀಡಿದ ದೂರು ಆಧರಿಸಿ ಬಾಲಕನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಹಲ್ಲೆಗೆ ಯತ್ನ: ಪ್ರಕರಣ ಸಂಬಂಧ ಬಾಲಕ ನನ್ನು ಠಾಣೆಗೆ ಕರೆತರುವ ವೇಳೆ ಪೊಲೀಸ್‌ ಠಾಣೆ ಎದುರು ಜಮಾಯಿಸಿದ್ದ ಅಮೃತಾ ಸಂಬಂಧಿಕರು ಆತನ ಮೇಲೆ ಹಲ್ಲೆಗೆ ಮುಂದಾದರು. ಮತ್ತೂಂದೆಡೆ ಬಾಲಕನ ಪೋಷಕರು ಮತ್ತು ಸಂಬಂಧಿಕರು ಕೂಡ ಸೇರಿದರು. ಪೊಲೀಸರು ಎರಡೂ ಕಡೆಯವರನ್ನು ಸಮಾಧಾನಪಡಿಸಿ ವಾತಾವರಣ ತಿಳಿಗೊಳಿಸಿದರು. 

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.