ಕಾವೇರಿಯಲ್ಲಿ ಕೊಚ್ಚಿಹೋದ ಟೆಕ್ಕಿಗಳು
Team Udayavani, Jul 17, 2018, 11:44 AM IST
ಕನಕಪುರ: ತಾಲೂಕಿನ ಪ್ರವಾಸಿ ತಾಣ ಸಂಗಮದ ಮೇಕೆದಾಟು ವೀಕ್ಷಿಸಲು ಬಂದಿದ್ದ ಬೆಂಗಳೂರು ಮೂಲದ
ಇಬ್ಬರು ಸಾಫ್ಟ್ವೇರ್ ಇಂಜಿನಿಯರ್ಗಳು ಕಾಲು ಜಾರಿ ನದಿಗೆ ಬಿದ್ದು ಕೊಚ್ಚಿಹೋದ ಘಟನೆ ಭಾನುವಾರ ಬೆಳಗ್ಗೆ ಸಂಭವಿಸಿದೆ.
ಮಿಡ್ ಕೋ ಎಂಬ ಖಾಸಗಿ ಕಂಪನಿ ಉದ್ಯೋಗಿಗಳಾದ ಶಮೀರ್ ರೆಹಮಾನ್ (29) ಹಾಗೂ ಭವಾನಿ ಶಂಕರ್ (29) ಮೃತರು. ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಸ್ನೇಹಿತರಾದ ಶ್ರೀಕಾಂತ್ ಮತ್ತು ಅಮಿತ್ ಎಂಬುವವರ ಜತೆ ಪ್ರವಾಸ ಬಂದಿದ್ದಾಗ ಶಮೀರ್ ರೆಹಮಾನ್ ಮೇಕೆದಾಟು ವಿನಲ್ಲಿ ರಭಸವಾಗಿ ಹರಿಯುವ ಕಾವೇರಿ ನದಿಯ ನೀರು ಮುಟ್ಟಲು ಹೋಗಿ ಕಾಲುಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಆತನನ್ನು ರಕ್ಷಿಸಲು ಹೋದ ಭವಾನಿ ಶಂಕರ್ ಕೂಡ ಕೊಚ್ಚಿಹೋಗಿದ್ದಾನೆ ಎಂದು ಶ್ರೀಕಾಂತ್ ಮತ್ತು ಅಮಿತ್ ಸಾತನೂರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಮೃತದೇಹಗಳಿಗಾಗಿ ಸ್ಥಳೀಯ ಈಜುಗಾರರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಂಜೆವರೆಗೂ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಮಂಗಳವಾರ ಶೋಧ ಕಾರ್ಯ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ