ಕರ್ನಾಟಕ ರಾಜ್ಯ ಬಾಹ್ಯಾಕಾಶ ಕ್ಷೇತ್ರದ ತವರು

Team Udayavani, Aug 14, 2018, 4:35 PM IST

blore-6.jpg

ಬೆಂಗಳೂರು: ವೈಮಾನಿಕ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳು ಹೆಚ್ಚಿರುವ ಕರ್ನಾಟಕ, ದೇಶದ ಬಾಹ್ಯಾಕಾಶ ಕ್ಷೇತ್ರದ ತವರು ಮನೆ ಎನಿಸಿದೆ ಎಂದು ಕೇಂದ್ರ ವಿಜ್ಞಾನ, ತಂತ್ರಜ್ಞಾನ ಸಚಿವ ಡಾ.ಹರ್ಷವರ್ಧನ ಅಭಿಪ್ರಾಯ ವ್ಯಕ್ತಪಡಿಸಿದರು.

ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯ ಸೋಮವಾರ ಸೆಂಟರ್‌ ಆಫ್ಎ ಕ್ಸಲೆನ್ಸಿ (ಏರೋಸ್ಪೆಸ್‌ ಎಂಜಿನಿಯರಿಂಗ್‌ ಮತ್ತು ಇಂಟರ್‌ನೆಟ್‌ ಆಫ್ ಥಿಂಗ್ಸ್‌) ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು. ಬೆಂಗಳೂರು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂ ತ್ರಜ್ಞಾನದ ನಗರಮಾತ್ರವಲ್ಲ. ವೈಮಾನಿಕ ತಂತ್ರಜ್ಞಾನ ಕ್ಷೇತ್ರದ ನವಾನ್ವೇಷಣೆಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೈಮಾನಿಕ ತಂತ್ರಜ್ಞಾನ ನಗರವಾಗಿ ರೂಪುಗೊಂಡಿದೆ. ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಕೈಗಾರಿಕಾ ತರಬೇತಿಯೂ ಅಗತ್ಯವಾಗಿದೆ. ಶಿಕ್ಷಣ ಸಂಸ್ಥೆಗಳೇ ಕೈಗಾರಿಕಾ ಘಟಕ ಹೊಂದಿರುವುದು ಇನ್ನಷ್ಟು ಅನುಕೂಲವಾಗಲಿದೆ ಎಂದರು.

ಯುವ ಪೀಳಿಗೆ ತಮ್ಮ ಪ್ರತಿಭೆ ಹಾಗೂ ಕೌಶಲ್ಯ ತೋರ್ಪಡಿಸಲು ಈ ಕೇಂದ್ರಗಳು ವೇದಿಕೆಯಾಗಲಿದೆ. ಉಡಾನ್‌ ಯೋಜನೆಯಡಿ ವಿದ್ಯಾರ್ಥಿಗಳು ಸಣ್ಣ ಪ್ರಮಾಣದ ಏರ್‌ಕ್ರಾಫ್ಟ್ ಉತ್ಪಾದನೆಗೆ ಹೆಚ್ಚಿನ ಗಮನ ಕೊಡಬೇಕು. ಬಡವರು ಕೈಗೆಟುಕುವ ದರದಲ್ಲಿ ವಿಮಾನಯಾನ ಮಾಡಲು ಸಹಕಾರಿಯಾಗಲಿವೆ ಎಂದು ಅಭಿಪ್ರಾಯಪಟ್ಟರು.

ವೈಮಾನಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಿದ ಮೊದಲ ಹತ್ತು ರಾಷ್ಟ್ರಗಳಲ್ಲಿ ಭಾರತವೂ ಸೇರಿಕೊಂಡಿದೆ. 75 ವರ್ಷಗಳ ಇತಿಹಾಸ ಹೊಂದಿರುವ ಕೌನ್ಸಿಲ್‌ ಫಾರ್‌ ಸೈಂಟಿಫಿಕ್‌ ಆಂಡ್‌ ಇಂಡಸ್ಟ್ರಿಯಲ್‌ ರಿಸರ್ಚ್‌ ಜಗತ್ತಿನ 1200 ಸಂಶೋಧನಾ ಕೇಂದ್ರಗಳ ಪಟ್ಟಿಯಲ್ಲಿ 9ನೇ ಸ್ಥಾನ ಪಡೆದಿದೆ. ಸುನಾಮಿ ಮುನ್ಸೂಚನೆ ಎರಡು ದಿನದ ಮೊದಲೇ ತಿಳಿಯಬಲ್ಲ ಸಾಮರ್ಥ್ಯ ಭಾರತ ಹೊಂದಿದೆ ಎಂದು ವಿಜ್ಞಾನದ ಸಾಧನೆ ವಿವರಿಸಿದರು. 

ಕೇಂದ್ರ ಸರ್ಕಾರ ದ್ವಿತೀಯ ಹಾಗೂ ತೃತೀಯ ಹಂತದ ನಗರಗಳಿಗೆ ವಿಮಾನ ಸಂಪರ್ಕ ಕಲ್ಪಿಸಲು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಜನ ಸಾಮಾನ್ಯರ ಸಮಯದ ಉಳಿತಾಯ ಮತ್ತು ರಸ್ತೆ ಸಂಚಾರದ ಒತ್ತಡ ನಿವಾರಣೆಗೆ ಇದು ಅನಿವಾ ರ್ಯವಾಗಿದೆ. ಈ ರೀತಿಯಸಂಶೋಧನೆಗೆ ನಿಟ್ಟೆ ಮೀನಾಕ್ಷಿ ತಾಂತ್ರಿಕ ಸಂಸ್ಥೆ ಆರಂಭಿಸಿರುವ ಸೆಂಟರ್‌ ಆಫ್ ಎಕ್ಸಲೆನ್ಸಿ ಸಾಕಷ್ಟು ಅನುಕೂಲವಾಗಲಿದೆ ಎಂದು ಶ್ಲಾಘಿಸಿದರು. 

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಎನ್‌.ಆರ್‌. ಶೆಟ್ಟಿ ಮಾತನಾಡಿ, ವೈಮಾನಿಕ ತಂತ್ರಜ್ಞಾನ ಹಾಗೂ ಇಂಟರ್‌ನೆಟ್‌ ಆಫ್ ಥಿಂಗ್ಸ್‌ ಕ್ಷೇತ್ರದಲ್ಲಿ ಅತ್ಯಾಧುನಿಕ ಸಲಕರಣೆ ಹಾಗೂ ತಂತ್ರಾಂಶ ಅಳವಡಿಸಿ ಈ ಕೇಂದ್ರ ಸ್ಥಾಪಿಸಲಾಗಿದೆ. ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಇದು ಅತಿ ಅಗತ್ಯವಾಗಿದೆ. ಕೈಗಾರಿಕಾ ತರಬೇತಿ ಈ ಕೇಂದ್ರದ ಮೂಲಕವೇ ಸಿಗಲಿದೆ ಎಂದರು. 

ಜಾಗತಿಕ ವೈಮಾನಿಕ ತಂತ್ರಜ್ಞಾನ ಕ್ಷೇತ್ರದಲ್ಲಿ 2020ರ ವೇಳೆಗೆ ಭಾರತ 3ನೇ ಬೃಹತ್‌ ರಾಷ್ಟ್ರವಾಗಿ ಬೆಳೆಯಲಿದೆ. 2035ರ ವೇಳೆಗೆ ಜಗತ್ತಿನಲ್ಲಿ ಮೊದಲನೇ ಸ್ಥಾನ ಪಡೆಯಲಿದೆ. ತಜ್ಞರ ಪ್ರಕಾರ ಒಂದು ಬಿಲಿಯನ್‌ ಎಂಜಿನಿಯರಿಂಗ್‌ ಪದವೀಧರರಿಗೆ ನೇರ ಉದ್ಯೋಗ ಲಭಿಸಲಿದೆ. ವಿದ್ಯಾರ್ಥಿಗಳು ಇದರಲ್ಲಿ ಸಕ್ರಿಯರಾಗಬೇಕು ಎಂದು ಕರೆಕೊಟ್ಟರು.

ಕೇಂದ್ರ ಅಂಕಿಅಂಶ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದ ಗೌಡ, ನಿಟ್ಟೆ ಮೀನಾಕ್ಷಿ ತಾಂತ್ರಿಕ ಸಂಸ್ಥೆಯ ಪ್ರಾಂಶುಪಾಲ ಡಾ.ಎಚ್‌.ಸಿ. ನಾಗರಾಜ್‌, ಶಾಸಕ ಎಸ್‌.ಆರ್‌.ವಿಶ್ವನಾಥ್‌, ನಿಟ್ಟೆ ಶಿಕ್ಷಣ ಟ್ರಸ್ಟ್‌ನ ಆಡಳಿತಾಧಿಕಾರಿ ರೋಹಿತ್‌ ಪೂಂಜಾ, ಡಸಾಲ್ಟ್ ಸಿಸ್ಟಂ ಇಂಡಿಯಾದ ಉಪಾಧ್ಯಕ್ಷ ಲೋಕನಾಥ ಕೆ.ರೆಡ್ಡಿ, ಪಿಟಿಸಿ ಇಂಡಿಯಾದ ಹಿರಿಯ ನಿರ್ದೇಶಕ ಮೋಹನ್‌ ಹಾಗೂ ಡಿಸೆಕ್‌ ಕಾಂಪಿಟೆನ್ಸಿ ಸರ್ವಿಸ್‌Õ ಸಂಸ್ಥೆಯ ರಾಹುಲ್‌ ನಾಯ್ಡು, ಅನುಜ್‌ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.