ಗೌರಿ ಲಂಕೇಶ್‌ ಹತ್ಯೆ ಪ್ರಕರಣ:ಆರೋಪಿ ನ್ಯಾಯಾಂಗ ಬಂಧನ


Team Udayavani, Aug 24, 2018, 9:49 AM IST

gauri-lankesh-1528348207-1528435038.jpg

ಬೆಂಗಳೂರು: ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬೆಳಗಾವಿ ಮೂಲದ ಭರತ್‌ ಕುರ್ನೆಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.

ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಭರತ್‌ ಕುರ್ನೆ ಪ್ರಮುಖ ಪಾತ್ರ ವಹಿಸಿದ್ದು, ಆರೋಪಿಗಳು ಉಳಿದುಕೊಳ್ಳಲು ತನ್ನ ತೋಟದ ಮನೆ ಹಾಗೂ ಓಡಾಡಲು ಒಂದು ಕಾರನ್ನು ಕೊಟ್ಟಿದ್ದ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ತಂಡ ಆರೋಪಿಯನ್ನು ಬೆಳಗಾವಿಯಲ್ಲಿ ಬಂಧಿಸಿತ್ತು. ಬಳಿಕ ನ್ಯಾಯಾಲಯದ ಅನುಮತಿ ಪಡೆದು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದು ಪುಣೆ ಹಾಗೂ ಗೋವಾಗೆ ಕರೆದುಕೊಂಡು ಹೋಗಿತ್ತು. 

ಗುರುವಾರ ಪೊಲೀಸ್‌ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಆರೋಪಿಯನ್ನು ಎಸ್‌ಐಟಿ ಕೋರ್ಟ್‌ ಹಾಜರು ಪಡಿಸಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಗೌರಿ ಹಂತಕರು ಸಿಐಡಿ ವಶಕ್ಕೆ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳಿಗೂ ಸಾಹಿತಿ ಡಾ.ಎಂ.ಎಂ.ಕಲಬುರ್ಗಿ ಹತ್ಯೆಗೂ ಸಾಮ್ಯತೆ ಕಂಡು ಬಂದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗಾಗಿ ಎಲ್ಲ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಅಧಿಕಾರಿಗಳು ಸೆಷನ್ಸ್‌
ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಮನವಿ ಪುರಸ್ಕರಿಸಿದ ಕೋರ್ಟ್‌ ಐದು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.

ಗೌರಿ ಹತ್ಯೆ ಆರೋಪಿಗಳಾದ ಮಹರಾಷ್ಟ್ರದ ಅಮೋಲ್‌ ಕಾಳೆ, ಅಮಿತ್‌ ದೇಗ್ವೇಕರ್‌, ಶಿವಮೊಗ್ಗದ ಕಪ್ಪನಹಳ್ಳಿ ಗ್ರಾಮದ ಸುಜೀತ್‌ ಕುಮಾರ್‌, ಹುಬ್ಬಳ್ಳಿಯ ಗಣೇಶ್‌ ಮಿಸ್ಕಿನ್‌, ವಿಜಯ ಪುರ ಮನೋಹರ್‌ ಯಡವೆ, ಸಂಪಾಜೆಯ ಮೋಹನ್‌ ನಾಯಕ್‌, ರಾಜೇಶ್‌ ಬಂಗೇರಾ ಕಲ್ಬುರ್ಗಿ ಹತ್ಯೆಯಲ್ಲೂ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಆರೋಪಿಗಳನ್ನು ವಶಕ್ಕೆ ನೀಡುವಂತೆ ಮನವಿ ಮಾಡಿತ್ತು. ಇದನ್ನು ಪುರಸ್ಕರಿಸಿದ ಕೋರ್ಟ್‌ ಎಲ್ಲ ಆರೋಪಿಗಳನ್ನು ಆ.27ರಿಂದ 31ರವರೆಗೆ ಸಿಐಡಿ ವಶಕ್ಕೆ ಆದೇಶಿಸಿದೆ. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.