ಆತ್ಮಹತ್ಯೆಗೆ ಯತ್ನಿಸಿದ ಕೈದಿ
Team Udayavani, Aug 24, 2018, 10:12 AM IST
ಬೆಂಗಳೂರು: ವಿಚಾರಣಾಧೀನ ಕೈದಿಯೊಬ್ಬ ಸೊಂಟದಲ್ಲಿದ್ದ ಉಡುದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಶರತ್ ಆತ್ಮಹತ್ಯೆಗೆ ಯತ್ನಿಸಿದ ವಿಚಾರಣಾಧೀನ ಕೈದಿ. ಪ್ರಾಣಾಪಾಯದಿಂದ ಪಾರಾಗಿರುವ ಶರತ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ಹೇಳಿದರು. ಆ.21 ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ವಿಚಾರಣಾಧೀನ ಕೈದಿ ಶರತ್ ತನ್ನ ಬ್ಯಾರಕ್ನಲ್ಲಿ ಯಾರೂ ಇಲ್ಲದಾಗ ಉಡುದಾರಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದೇ ವೇಳೆ ಗಸ್ತು ತಿರುಗುತ್ತಿದ್ದ ಕಾರಾಗೃಹ ಸಿಬ್ಬಂದಿ ನಿಜಲಿಂಗಪ್ಪ ಅಂಬಿಗೇರ್ ಹಾಗೂ ಇತರೆ ಸಿಬ್ಬಂದಿ ಕೂಡಲೇ ಶರತ್ನನ್ನು ರಕ್ಷಿಸಿ ಕಾರಾಗೃಹ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಗೆ ನಿಖರವಾದ ಕಾರಣ ತಿಳಿದಿಲ್ಲ. ಶರತ್ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಂಡ ಬಳಿಕ ವಿಚಾರಣೆ ನಡೆಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಾರಾಗೃಹ ಮುಖ್ಯಅಧೀಕ್ಷಕ ಸೋಮಶೇಖರ್ ಶರತ್ ವಿರುದ್ಧ ಕಾರಾಗೃಹ ನಿಯಮ ಉಲ್ಲಂಘಿಸಿ ಆತ್ಮಹತ್ಯೆಗೆ ಯತ್ನಿಸಿದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ