CONNECT WITH US  

ಪ್ರಕರಣ ತಳ್ಳಿ ಹಾಕಿದ ಪರಮೇಶ್ವರ್‌

ಬೆಂಗಳೂರು: ಕಾಂಗ್ರೆಸ್‌ ಕರೆ ನೀಡಿದ್ದ ಬಂದ್‌ ವೇಳೆ ರಾಜ್ಯ ಸರ್ಕಾರ ಗೃಹ ಇಲಾಖೆಯನ್ನು ದುರುಪಯೋಗ ಪಡೆಸಿಕೊಂಡಿದೆ ಎಂಬ ಆರೋಪವನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ತಳ್ಳಿ ಹಾಕಿದ್ದಾರೆ. 

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಂದ್‌ ಸಂದರ್ಭದಲ್ಲಿ ಗೃಹ ಇಲಾಖೆ ಸಮರ್ಥವಾಗಿ ಕಾರ್ಯ ನಿರ್ವಹಿಸಿದೆ. ಎಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸನ್ನಿವೇಶವಿತ್ತೋ ಅಲ್ಲಿ ಪೋಲಿಸರು ಸಮರ್ಥವಾಗಿ ನಿಯಂತ್ರಣಕ್ಕೆ ತಂದಿದ್ದಾರೆ. ಇಡೀ ಭಾರತದಲ್ಲಿ ಬಂದ್‌ ಆಚರಿಸಲಾಗಿದೆ. ಹೀಗಾಗಿ ಗೃಹ ಇಲಾಖೆ ದುರುಪಯೋಗ ಪಡೆಸಿಕೊಳ್ಳಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾದ ಮಾತು ಎಂದು ಹೇಳಿದರು.

ಇದೇ ವೇಳೆ, ಕೊಡಗಿನಲ್ಲಿ ಅತಿವೃಷ್ಟಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಅನಾವೃಷ್ಟಿಗೆ ಸೂಕ್ತ ಪರಿಹಾರ ನೀಡುವಂತೆ ಪ್ರಧಾನಿಗೆ ಮನವಿ ಮಾಡಿಕೊಳ್ಳಲಾಗಿದೆ. ಶೀಘ್ರವೇ ಕೊಡಗು ಹಾಗೂ ಉತ್ತರ ಕರ್ನಾಟಕಕ್ಕೆ ಕೇಂದ್ರ ತಂಡ ಬಂದು ಅಧ್ಯಯನ ನಡೆಸಿ ವರದಿ ನೀಡಲಿದೆ ಎಂದು ತಿಳಿಸಿದರು. 

Trending videos

Back to Top